ಇಂದು ಜಾತಿ ಜಾಗೃತಿ ಸಭೆ: ಭಾಗವಹಿಸಲು ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ
Caste awareness meeting today: Basava Jayamrutyunjaya Swamiji calls to participate
ಇಂದು ಜಾತಿ ಜಾಗೃತಿ ಸಭೆ: ಭಾಗವಹಿಸಲು ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ
ರಾಯಬಾಗ, 16 ; ಹುಬ್ಬಳ್ಳಿಯ ಆರ್.ಎನ್.ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಸೆ.17 ರಂದು ಸಾಯಂಕಾಲ 4 ಗಂಟೆಗೆ ಹಮ್ಮಿಕೊಂಡಿರುವ ಲಿಂಗಾಯತ ಪಂಚಮಸಾಲಿ ಜಾತಿ ಜಾಗೃತಿ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದರು.
ಮಂಗಳವಾರ ಪಟ್ಟಣದ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮನೆ ಮನೆಯ ಜಾತಿ ಗಣತಿ ಸಮೀಕ್ಷೆ ಕಾರ್ಯ ಕೈಗೊಳ್ಳುವುದರಿಂದ ಪ್ರತಿಯೊಬ್ಬ ಲಿಂಗಾಯತ ಪಂಚಮಸಾಲಿ ಸಮಾಜದವರು ಜಾತಿ ಕಾಲಂನಲ್ಲಿ ನಮೂದಿಸಬೇಕು. ಈ ಬಗ್ಗೆ ಜಾಗೃತಿ ಮೂಡಿಸುವ ನಮ್ಮ ಸಮಾಜದ ಸಚಿವರು, ಸಂಸದರು, ಶಾಸಕರು, ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.ತಾಲೂಕಿನ ಹಾರೂಗೇರಿಯ ಚನ್ನವೃಷಭೇಂದ್ರ ಲೀಲಾಮಠದಲ್ಲಿ ಸೆ.20 ರಂದು ತಾಲೂಕು ಮಟ್ಟದ ಪಂಚಮಸಾಲಿ ಪ್ರತಿಜ್ಞಾ ಕ್ರಾಂತಿ ರ್ಯಾಲಿ ಹಾಗೂ ವಿವಿಧ ಪಂಚಮಸಾಲಿ ಸಂಘಟನೆಗಳ ಸಹಯೋಗದೊಂದಿಗೆ ಶ್ರಾವಣ ಮಾಸದ ಪ್ರಯುಕ್ತ ತಾಲೂಕಿನ ಗ್ರಾಮಗಳಲ್ಲಿ ಜರುಗಿದ ಗ್ರಾಮ ಗ್ರಾಮದಲ್ಲಿ ಕೂಡಲಸಂಗಮ ಇಷ್ಟಲಿಂಗಪೂಜೆ ಕಾರ್ಯಕ್ರಮದ ಸಮಾರೋಪ ಸಮಾರಂಭ ಆಯೋಜಿಸಲಾಗಿದ್ದು, ಪಂಚಮಸಾಲಿ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದರು.
ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷ ಶಿವಬಸು ಕಾಪಸೆ, ವಕೀಲರ ಸಂಘದ ಅಧ್ಯಕ್ಷ ಪಿ.ಎಮ್.ದರೂರ, ಸಂಗಣ್ಣ ದತ್ತವಾಡೆ, ಸುರೇಶ ಜಂಬಗಿ, ಬಸವರಾಜ ಕೋರೆ, ಸುರೇಶ ಹೊಸಪೇಟೆ, ಬಾಳಗೌಡ ಪಾಟೀಲ, ಆನಂದ ಹುದ್ದಾರ, ನಾರಾಯಣ ಮೇತ್ರಿ, ವಿನಾಯಕ ಪಾಟೀಲ, ವಿಶಾಲ ಕಿತ್ತೂರೆ, ಆನಂದ ಪಾಟೀಲ, ಸಾಗರ ಕುಲಾರೆ, ಆದರ್ಶ ಡಬ್ಬನವರ ಸೇರಿ ಅನೇಕರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 