ಬಾಬು ಜಗಜೀವನರಾಂ ಹಾಗೂ ಅಂಬೇಡ್ಕರ್ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಿ - ಜಿಲ್ಲಾಧಿಕಾರಿ ನಲಿನ್ ಅತುಲ್

Celebrate Babu Jagjivan Ram and Ambedkar Jayantis meaningfully - District Collector Nalin Atul

ಬಾಬು ಜಗಜೀವನರಾಂ ಹಾಗೂ ಅಂಬೇಡ್ಕರ್ ಜಯಂತಿಗಳನ್ನು  ಅರ್ಥಪೂರ್ಣವಾಗಿ ಆಚರಿಸಿ - ಜಿಲ್ಲಾಧಿಕಾರಿ ನಲಿನ್ ಅತುಲ್ 

ಕೊಪ್ಪಳ 26: ಡಾ.ಬಾಬು ಜಗಜೀವನರಾಂ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ರವರ ಜಯಂತಿಗಳನ್ನು ಅರ್ಥಪೂರ್ಣ ಮತ್ತು ಅದ್ದೂರಿಯಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು. 

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಾ. ಬಾಬು ಜಗಜೀವನರಾಂ ಹಾಗೂ ಡಾ. ಬಿ.ಆರ್‌.ಅಂಬೇಡ್ಕರ್ ರವರ ಜಯಂತಿ ಆಚರಣೆ ಕುರಿತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.  

ಈ ಹಿಂದೆ ಚುನಾವಣೆ ಹಿನ್ನೆಲೆಯಲ್ಲಿ ಬಾಬು ಜಗಜೀವನರಾಂ ಹಾಗೂ ಅಂಬೇಡ್ಕರ್ ಜಯಂತಿಗಳನ್ನು ಸರಳವಾಗಿ ಆಚರಿಸಲಾಗಿದೆ. ಈ ಬಾರಿ ಎರಡೂ ಜಯಂತಿಗಳನ್ನು ಬಹಳ ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಎಲ್ಲರೂ ಸೇರಿ ಆಚರಣೆ ಮಾಡೋಣ ಎಂದರು. 

ಬಾಬು ಜಗಜೀವನರಾಂ ಜಯಂತಿ: ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ರವರ 118ನೇ ಜಯಂತಿಯನ್ನು ಏಪ್ರಿಲ್ 5 ರಂದು ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 8.30ಕ್ಕೆ ಬಾಬು ಜಗಜೀವನರಾಂ ರವರ ಭಾವಚಿತ್ರದ ಮೇರವಣಿಗೆಯು ನಗರದ ಮಾರುಕಟ್ಟೆ ಹತ್ತಿರವಿರುವ ಬಾಬು ಜಗಜೀವನರಾಂ ವೃತ್ತದಿಂದ ಆರಂಭಗೊಂಡು ಸಾಹಿತ್ಯ ಭವನದವರೆಗೆ ಜರುಗಲಿದೆ. ನಂತರ ಮಧ್ಯಾಹ್ನ 12 ಗಂಟೆಗೆ ಸಾಹಿತ್ಯ ಭನವದಲ್ಲಿ ವೇದಿಕೆ ಸಮಾರಂಭ ನಡೆಯಲಿದ್ದು, ಈ ಮಹಾನ ನಾಯಕರ ಭಾವಚಿತ್ರಕ್ಕೆ ಪೂಜೆ, ವಿಶೇಷ ಉಪನ್ಯಾಸ ಸೇರಿದಂತೆ ಇತರೆ ಕಾರ್ಯಕ್ರಮಗಳು ಜರುಗಲಿವೆ ಎಂದು ಹೇಳಿದರು.   

ಅಂಬೇಡ್ಕರ್ ಜಯಂತಿ: ಸಂವಿಧಾನ ಶಿಲ್ಪಿ ಡಾ ಬಿ.ಆರ್ ಅಂಬೇಡ್ಕರ್ ರವರ 134ನೇ ಜನ್ಮ ದಿನಾಚರಣೆಯನ್ನು ಏಪ್ರಿಲ್ 14 ರಂದು ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಏರಿ​‍್ಡಸಲಾಗಿದೆ. ಅಂದು ಬೆಳಿಗ್ಗೆ 8.30ಕ್ಕೆ ಅಂಬೇಡ್ಕರ್ ರವರ ಭಾವಚಿತ್ರದ ಮೇರವಣಿಗೆಯು ನಗರದ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡು, ನಗರದ ವಿವಿಧ ವೃತ್ತಗಳ ಮೂಲಕ ಸಾಹಿತ್ಯ ಭವನದವರೆಗೆ ಮೆರವಣಿಗೆ ನಡೆಯಲಿದೆ. ನಂತರ ಮಧ್ಯಾಹ್ನ 12 ಗಂಟೆಗೆ ಸಾಹಿತ್ಯ ಭನವದಲ್ಲಿ ನಡೆಯಲಿರುವ ವೇದಿಕೆ ಸಮಾರಂಭದಲ್ಲಿ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪೂಜೆ, ವಿಶೇಷ ಉಪನ್ಯಾಸ ಸೇರಿದಂತೆ ಇತರೆ ಕಾರ್ಯಕ್ರಮಗಳು ನಡೆಯಲಿವೆ ಎಂದರು.  

ಬಾಬು ಜಗಜೀವನರಾಂ ಹಾಗೂ ಅಂಬೇಡ್ಕರ್ ರವರ ಜಯಂತಿ ಸಮಾರಂಭಗಳ ದಿನದಂದು, ಸಾಹಿತ್ಯ ಭವನ, ವೃತ್ತಗಳು ಮತ್ತು ರಸ್ತೆ ಸ್ವಚ್ಛತೆ, ಮೆರವಣಿಗೆಯಲ್ಲಿ ಹಾಗೂ ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಬೇಕು. ಕಾರ್ಯಕ್ರಮದಲ್ಲಿ ಎಲ್ಲಾ ಸಮಾಜದ ಮುಖಂಡರು ಭಾಗವಹಿಸಬೇಕು. ಈ ಎರಡೂ ಜಯಂತಿಯನ್ನು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳು, ಗ್ರಾಮ ಪಂಚಾಯತ್ ಮತ್ತು ಇತರೆ ಕಛೇರಿಗಳಲ್ಲಿ ಆಚರಿಸಬೇಕು. ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮ್ಮ ಸಿಬ್ಬಂದಿಗಳೊಂದಿಗೆ ಕಾರ್ಯಕ್ರಮದಲ್ಲಿ ಹಾಜರಿರಬೇಕೆಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.    

ಎಸ್‌.ಎಸ್‌.ಎಲ್‌.ಸಿ., ಪಿ.ಯು.ಸಿ ಹಾಗೂ ಉನ್ನತ ಶಿಕ್ಷಣದಲ್ಲಿ ಸಾಧನೆ ಮಾಡಿದ ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನಿಸುವುದರ ಜತೆಗೆ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ನಮ್ಮ ಜಿಲ್ಲೆಯವರಾದ ಬೀಮವ್ವ ಸಿಳ್ಳೆಕ್ಯಾತರ್ ಅವರಿಗೂ ಸಹ ಈ ಕಾರ್ಯಕ್ರಮದಲ್ಲಿ ಸನ್ಮಾನಿಸಬೇಕು. ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ರವರ 118ನೇ ಹಾಗೂ ಸಂವಿಧಾನ ಶಿಲ್ಪಿ ಡಾ ಬಿ.ಆರ್ ಅಂಬೇಡ್ಕರ್ ರವರ 134ನೇ ಜನ್ಮ ದಿನಾಚರಣೆ ನಿಮಿತ್ತ ಈ ಇಬ್ಬರೂ ನಾಯಕರ ಕುರಿತು ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ, ಪ್ರಬಂಧ ಮತ್ತು ವೇಷಭೂಷಣ ಸ್ಪರ್ಧೆಗಳನ್ನ ಏರಿ​‍್ಡಸಲು ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಪ್ರಕಾಶ ವಿ., ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೋಗಲದ್, ಆಹಾರ ಇಲಾಖೆ ಉಪನಿರ್ದೇಶಕ ಸೋಮಶೇಖರ ಬಿರಾದರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಹಳ್ಳಿ, ಕೊಪ್ಪಳ ನಗರಸಭೆ ಪೌರಾಯುಕ್ತರಾದ ಗಣಪತಿ ಪಾಟೀಲ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ.ಬಸವರಾಜ, ಸಮಾಜದ ಮುಖಂಡರಾದ ಗೂಳಪ್ಪ ಹಲಗೇರಿ, ಗಾಳೇಪ್ಪ ಪೂಜಾರ, ಸಿದ್ದೇಶ ಪೂಜಾರ, ಯಲ್ಲಪ್ಪ ಬಳಗಾನೂರ, ಸಿದ್ದರಾಮಪ್ಪ ಹೊಸಮನಿ, ಬಿ.ಜ್ಞಾನ ಸುಂದರ, ರಾಮಣ್ಣ ಕಂದಾರಿ, ಮಲ್ಲಿಕಾರ್ಜುನ ಪೂಜಾರ, ವಿವೇಕಾನಂದ ಕಟ್ಟಿಮನಿ, ರಮೇಶ ಎಮ್ ಗುಡ್ಲಾನೂರು, ಗವಿಸಿದ್ದಪ್ಪ ಬೆಲ್ಲದ, ಪುಟ್ಟರಾಜ ಪೂಜಾರ, ಹನುಮೇಶ ಕಡೆಮನಿ, ರವಿ ನಿಂಗಪ್ಪ ಆಗೋಲಿ, ಶರಣಪ್ಪ ತೋಂಡಿಹಾಳ ವಕೀಲರು ಸೇರಿದಂತೆ ಮತ್ತಿತರರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.