ಹೋಳಿ, ರಂಜಾನ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ : ಸಿಪಿಐ
Celebrate Holi, Ranjana peacefully: CPI
ಯರಗಟ್ಟಿ 01 : ಹೋಳಿ ಹಾಗೂ ರಮಝಾನ್ ಹಬ್ಬದಲ್ಲಿ ಯಾವುದೇ ರೀತಿಯಲ್ಲಿ ಅಹಿತಕರ ಘಟನೆ ನಡೆಯದಂತೆ ಶಾಂತಿಯುತವಾಗಿ ಆಚರಿಸಬೇಕು ಎಂದು ಸಿಪಿಐ ಆಯ್ ಎಂ ಮಠಪತಿ ಅವರು ಹೇಳಿದರು.ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ರವಿವಾರ ಸಾಯಂಕಾಲ ಹಿಂದೂ ಮತ್ತು ಮುಸ್ಲಿಂ ಸಮಾಜದ ಮುಖಂಡರ ಸಭೆ ನಡೆಸಿ ಮಾತನಾಡಿದ ಅವರು ಹೋಳಿ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಹಾಗೆಯೇ ಮಾ.21 ರಂದು ರಂಜಾನ್ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಹಬ್ಬಗಳ ಸಮಯದಲ್ಲಿ ಯಾವುದೇ ಆಹಿತಕರ ಘಟನೆ ಜರುಗದಂತೆ ನೋಡಿಕೊಳ್ಳಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.ಪ್ರತಿಯೊಬ್ಬರು ಹಬ್ಬವನ್ನು ಸಂಭ್ರಮದಿಂದ ಆಚರಿಸಬೇಕು. ಯಾವುದೇ ಜಾತಿ, ಧರ್ಮದ ಜನರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಶಾಂತಿಯುತವಾಗಿ ಆಚರಿಸಬೇಕು.
ಹಬ್ಬ ಆಚರಣೆಯ ಕಾಲಕ್ಕೆ ಯಾವುದೇ ರೀತಿಯ ಆಹಿತಕರ ಘಟನೆ ಕಂಡು ಬಂದಲ್ಲಿ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಉಭಯ ಸಮಾಜದ ಮುಖಂಡರಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಪಿಎ??? ಎಲ್ ಬಿ ಮಾಳಿ, ಪಟ್ಟಣ ಪಂಚಾಯಿತಿ ಅಧಿಕಾರಿಯಾದ ಮಾರುತಿ ಕೋಳಿ, ವಿಠ್ಠಲಗೌಡ ದೇವರಡ್ಡಿ, ಈರಣ್ಣಾ ಮಠಪತಿ, ಸದಾನಂದ ಹಣಬರ, ವೆಂಕಟೇಶ ದೇವರಡ್ಡಿ, ಚೇತನ ಜಕಾತಿ, ಈರಣ್ಣಾ ಪೂಜೇರ, ರಾಮನಗೌಡ ಪಾಟೀಲ, ಭಾಸ್ಕರ ಹಿರೇಮೆತ್ರಿ, ಸಂತೋಷ ಚನ್ನಮೆತ್ರಿ, ಹನಮಂತ ಹಾರೂಗೊಪ್ಪ, ಯಲ್ಲಪ್ಪ ಪಟ್ಟಪನ್ನವರ, ಅರುಣ ನೀಲಪ್ಪನ್ನವರ, ಇಮಾಮಸಾಬ ಹುಸೇನಾಯ್ಕರ, ಸಲೀಂಬೇಗ ಜಮಾದಾರ, ರಫೀಕ ಡಿ.ಕೆ, ಇಮ್ತಿಯಾಜ್ ಖಾದ್ರಿ, ಮುನ್ನಾ ಶಾಬಾಶಖಾನ, ಹುಸೇನ ದಿಲಾವರನಾಯ್ಕ ಸೇರಿದಂತೆ ವಿವಿಧ ಸಮಾಜದ ಮುಖಂಡರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 