ಕನ್ನಡ ರಾಜ್ಯೋತ್ಸವ ಸಂಭ್ರಮ ಹಾಗೂ ವ್ಯವಸ್ಥಿತವಾಗಿ ಆಚರಿಸಿ : ಜಿಲ್ಲಾಧಿಕಾರಿ
Celebrate Kannada Rajyotsava with enthusiasm and in an organized manner: Deputy Commissioner
ಕನ್ನಡ ರಾಜ್ಯೋತ್ಸವ ಸಂಭ್ರಮ ಹಾಗೂ ವ್ಯವಸ್ಥಿತವಾಗಿ ಆಚರಿಸಿ : ಜಿಲ್ಲಾಧಿಕಾರಿ
ಗದಗ 16 : ಜಿಲ್ಲೆಯಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ ಸಂಭ್ರಮದಿಂದ ಆಚರಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಕನ್ನಡ ರಾಜ್ಯೋತ್ಸವ ಅಚರಣೆಯ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಯಾವುದೇ ಲೋಪಗಳಿಲ್ಲದಂತೆ ಆಚರಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು ಸಮಿತಿಯವರು ತಮಗೆ ವಹಿಸಿದ ಕೆಲಸವನ್ನು ನಿರ್ವಹಿಸಿ ರಾಜ್ಯೋತ್ಸವ ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಬೇಕೆಂದು ಸೂಚಿಸಿದರು. ಅಂದು ಬೆಳಿಗ್ಗೆ 7.30 ಗಂಟೆಗೆ ಗದಗ ಬೆಟಗೇರಿ ನಗರಸಭೆ ಪದವಿ ಪೂರ್ವ ಕಾಲೇಜ ಆವರಣದಿಂದ ತಾಯಿ ಭುವನೇಶ್ವರಿಯ ಮೆರವಣಿಗೆಯು ವಿವಿಧ ವೃತ್ತಗಳಲ್ಲಿ ಸಂಚರಿಸಿ ನಂತರ ಜಿಲ್ಲಾ ಕ್ರೀಡಾಂಗಣಕ್ಕೆ ಬಂದು ತಲುಪಲಿದೆ. ಬೆ.9 ಗಂಟೆಗೆ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸುವರು. ಕಾರ್ಯಕ್ರಮಕ್ಕೆ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಕಡ್ಡಾಯವಾಗಿ ಹಾಜರಿರಬೇಕು ಎಂದರು. ಪೊಲೀಸ್ ಪಡೆ, ಹೋಮಗಾರ್ಡ, ಭಾರತ ಸೇವಾ ದಳಗಳಿಂದ ಪರೇಡ್, ಪಥ ಸಂಚಲನ ಜರುಗಲಿವೆ. ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆಯುವಂತೆ ಕ್ರಮ ವಹಿಸಬೇಕು. ಶಿಷ್ಟಾಚಾರದನ್ವಯ ಆಸನದ ವ್ಯವಸ್ಥೆಗೆ ಕ್ರಮ ವಹಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಂಘಸಂಸ್ಥೆಯವರು ಈ ಕಾರ್ಯಕ್ರಮದಲ್ಲಿ ಆಸಕ್ತಿಯಿಂದ ಭಾಗವಹಿಸುವಂತೆ ಪ್ರೇರೇಪಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಡಾ.ನಂದಾ ಹಣಬರಟ್ಟಿ, ಕಾರ್ಮಿಕ ಇಲಾಖೆ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ ಜಿ, ಯುವಜನ ಮತ್ತು ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ.ಮಸನಾಯಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 