ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಿ : ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ್

ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಿ : ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ್ Celebrate Republic Day meaningfully and neatly: Deputy Commissioner C.N. Sridhar

                 ಗದಗ 12 : ಜಿಲ್ಲೆಯಲ್ಲಿ ಜನೇವರಿ 26 ರಂದು ಜರುಗಲಿರುವ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಗಣರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು ಆಯಾ ಸಮಿತಿಯವರು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಢಗಳಿಗೆ ಆಸ್ಪದ ನೀಡದೇ ವ್ಯವಸ್ಥಿತವಾಗಿ ಆಚರಿಸಲು ಕಾರ್ಯನಿರ್ವಹಿಸುವಂತೆ ನಿರ್ದೇಶನ ನೀಡಿದರು.

              ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಕಾರ್ಯಕ್ರಮದ ಹಿಂದಿನ ದಿನ ಹಾಗೂ ಕಾರ್ಯಕ್ರಮದ ದಿನ ಎರಡು ದಿನಗಳ ಕಾಲ ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು. ಅವಳಿ ನಗರದ ಪ್ರಮುಖ ಸ್ಥಳಗಳಲ್ಲಿ ಬ್ಯಾನರ್ ಅಳವಡಿಕೆಗೆ ಕ್ರಮ ವಹಿಸಬೇಕು. ಗಣರಾಜ್ಯೋತ್ಸವ ದಿನದಂದು ಎಲ್ಲ ಕಚೇರಿ ಮತ್ತು ಶಾಲಾ ಕಾಲೇಜುಗಳ ಸಿಬ್ಬಂದಿ ತಮ್ಮ ಕಾರ್ಯಾಲಯದ ಧ್ವಜಾರೋಹಣವನ್ನು ಬೆ7.30 ರೊಳಗೆ ನೆರವೇರಿಸಿ ಬೆ.8.30 ಗಂಟೆಗೆ ನಗರದ ಕೆ.ಎಚ್‌.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಜರಾಗಬೇಕು.

                 ಅಂದು ಬೆ.9 ಗಂಟೆಗೆ ನಗರದ ಕೆ.ಎಚ್‌.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದೆ. ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮಕ್ಕೆ ಸಮಯಕ್ಕೆ ಸರಿಯಾಗಿ ಹಾಜರಿರಬೇಕು. ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮಕ್ಕೂ ಮುಂಚೆ ದೇಶಭಕ್ತಿಗೀತೆಗಳ ಪ್ರಸಾರ ಮಾಡಬೇಕು ಎಂದರು. ಕಾರ್ಯಕ್ರಮದ ಸ್ಥಳದ ಸ್ವಚ್ಛತೆ ಕುರಿತು ಆದ್ಯತೆ ವಹಿಸಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ತುರ್ತು ಚಿಕಿತ್ಸೆಗಾಗಿ ಆಂಬುಲೆನ್ಸ್‌ ವ್ಯವಸ್ಥೆ ಕಾರ್ಯಕ್ರಮದ ಸ್ಥಳದಲ್ಲಿ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಕಾರ್ಯಕ್ರಮ ಮುಗಿದ ನಂತರವೂ ಸಹ ಆ ಸ್ಥಳ ಮೊದಲಿನ ಹಾಗೆ ಸ್ವಚ್ಛವಾಗಿರುವಂತೆ ಸಂಬಂಧಿತ ಅಧಿಕಾರಿಗಳು ನಿಗಾ ವಹಿಸಬೇಕು.

                 ಅತಿಥಿಗಳಿಗೆ ಆಸನದ ವ್ಯವಸ್ಥೆ, ಅಲ್ಪೋಪಹಾರದ ವ್ಯವಸ್ಥೆ ಕುರಿತು ಕ್ರಮ ಕೈಗೊಳ್ಳಬೇಕು. ವಿವಿಧ ರಂಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನುಅಚ್ಚುಕಟ್ಟಾಗಿ ನಿರ್ವಹಿಸಬೇಕು. ಆಮಂತ್ರಣ ಪತ್ರಿಕೆಗಳನ್ನು ಶಿಷ್ಟಾಚಾರದ ಪ್ರಕಾರ ಮುದ್ರಿಸಿ ಗಣ್ಯರುಗಳಿಗೆ ಸಾಕಷ್ಟು ಸಮಯ ಮುಂಚಿತವಾಗಿ ತಲುಪಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗದಂತೆ ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ್ ತಿಳಿಸಿದರು. ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್‌. ಮಾತನಾಡಿ ಗಣರಾಜ್ಯೋತ್ಸವ ವ್ಯವಸ್ಥಿತ ಆಚರಣೆಗಾಗಿ ವಿವಿಧ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಹಾಗೂ ಶ್ರದ್ಧೆಯಿಂದ ಕಾರ್ಯನಿರ್ವಹಿಸುವುದು ಮುಖ್ಯವಾಗಿದೆ.

                  ವಿವಿಧ ಇಲಾಖೆಯ ಅಧಿಕಾರಿಗಳು ಗಣರಾಜ್ಯೋತ್ಸವದ ಆಚರಣೆ ಕುರಿತಂತೆ ವಹಿಸಲಾಗಿರುವ ಜವಾಬ್ದಾರಿಯನ್ನು ಸಮರ​‍್ಕವಾಗಿ ನಿಭಾಯಿಸಿ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಬೇಕೆಂದು ಸೂಚಿಸಿದರು. ಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ವ್ಯವಸ್ಥೆ, ಎನ್‌ಎಸ್‌ಎಸ್ ಹಾಗೂ ಎನ್ಸಿಸಿ ಪರೇಡ, ಮೂಲಭೂತ ಸೌಕರ್ಯಗಳ ವ್ಯವಸ್ಥೆ, ವೇದಿಕ ನಿರ್ಮಾಣ, ಅಲ್ಪೋಪಹಾರ, ಆಸನದ ವ್ಯವಸ್ಥೆ, ಸನ್ಮಾನ ಕಾರ್ಯಕ್ರಮ, ಸೂಕ್ತ್‌ ಬಂದೋಬಸ್ತ್‌ ಮುಂತಾದ ವಿಷಯಗಳ ಕುರಿತು ಚರ್ಚಿಸಲಾಯಿತು.ಸಭೆಯಲ್ಲಿ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ್, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್‌.ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ತಹಶೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ,

                     ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ.ನಂದಾ ಹಣಬರಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ ಜಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಂ.ಎಂ.ತುಂಬರಮಟ್ಟಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಉಪನಿರ್ದೇಶಕ ರಮೇಶ್ ಎಸ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್‌.ಎಸ್‌.ನೀಲಗುಂದ, ಭೂ ದಾಖಲೆ ಇಲಾಖೆ ಉಪನಿರ್ದೇಶಕ ರುದ್ರಗೌಡ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್‌.ಬಿ.ಮಸನಾಯಕ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್‌.ಎಸ್‌.ಬುರುಡಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.