ಕೆಬಿಎಂಪಿಎಸ್ ಶಾಲೆಯಲ್ಲಿ ಸಂಭ್ರಮ ಶನಿವಾರ
Celebration Saturday at KBMPS School
ಇಂಡಿ 21: ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಸಮೀಪದಲ್ಲಿರುವ ಸರಕಾರಿ ಕೆಬಿಎಂಪಿಎಸ್ ಶಾಲೆಯಲ್ಲಿ ಸಂಭ್ರಮ ಶನಿವಾರ ಕಾರ್ಯಕ್ರಮದ ಪ್ರಯುಕ್ತ ಅಗ್ನಿಶಾಮಕ ಸೇವೆಗಳು ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ ಅಗ್ನಿಶಾಮಕ ಪ್ರಮುಖರಾದ ಡಿ.ಬಿ. ಪೂಜಾರಿ ಮಾತನಾಡಿ, ಆಕಸ್ಮಿಕ ಬೆಂಕಿ ತಗುಲಿದ ಸಂದರ್ಭದಲ್ಲಿ ತುರ್ತು ಕ್ರಮವಾಗಿ ಅಗ್ನಿಶಾಮಕ ದಳದವರಿಗೆ 101 ಅಥವಾ 112 ಸಂಖ್ಯೆಗೆ ಕರೆ ಮಾಡಬೇಕು. ಬೆಂಕಿ ನಂದಿಸುವುದಷ್ಟೇ ನಮ್ಮ ಕಾರ್ಯವಲ್ಲ ಬದಲಾಗಿ ಕಟ್ಟಡ ಕುಸಿತ, ಪ್ರವಾಹ ಮತ್ತು ಪ್ರಾಣಿಗಳನ್ನು ರಕ್ಷಿಸುವ ಕಾರ್ಯಾಚರಣೆಗಳನ್ನು ಸಹ ಅಗ್ನಿಶಾಮಕ ದಳದಿಂದ ಮಾಡಲಾಗುತ್ತದೆ ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಅಗ್ನಿ ದುರಂತದಲ್ಲಿ ಸುರಕ್ಷತಾ ಕ್ರಮಗಳ ಕುರಿತು ಹಾಗೂ ಅಗ್ನಿ ನಂದಿಸುವ ಕುರಿತು ಪ್ರದರ್ಶನದ ಮುಖಾಂತರ ಮಕ್ಕಳಿಗೆ ಮನವರಿಕೆ ಮಾಡಿ ಕೊಡಲಾಯಿತು. ಮಲ್ಲಿಕಾರ್ಜುನ ಗೋಟ್ಯಾಳ, ಉಮೇಶ ಹರಿಜನ, ಬಬಲು ಮಾಣಿಕ್‌ಭಾಯಿ ಸೇರಿದಂತೆ ಶಾಲಾ ಸಿಬ್ಬಂದಿಗಳಾದ ಎಸ್.ಬಿ. ವಡ್ಡರ, ಎ.ಬಿ. ದ್ಯಾಮಗೊಂಡ, ಎಸ್.ಎಸ್. ಬಿರಾದಾರ, ಸಿ.ಎಸ್. ಹಕಾರಿ, ಎಸ್. ಬಿ. ಕಲ್ಲೊಳ್ಳಿ ಸೇರಿದಂತೆ ಇನ್ನಿತರರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 