ಪತ್ರಕರ್ತರ ಹಾಗೂ ವೈದ್ಯರ ದಿನಾಚರಣೆ ಆಚರಣೆ
Celebration of Journalists' Day and Doctors' Day
ಆಲಮೇಲ 2: ಪಟ್ಟಣದ ಓಂ ಶಾಂತಿ ಕೇಂದ್ರದಲ್ಲಿ ಗುರುವಾರ ಪತ್ರಕರ್ತರ ದಿನಾಚರಣೆ ಹಾಗೂ ವೈದ್ಯರ ದಿನಾಚರಣೆಯನ್ನು ಸಂಯುಕ್ತವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವೈದ್ಯರಾದ ಡಾ. ಮಂಜುಷಾ ಪಾಟೀಲ ಹಾಗೂ ಡಾ. ಮಾಜನ್ ಮಾತನಾಡಿ, ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳುವ ಅಗತ್ಯವನ್ನು ವಿವರಿಸಿದರು. ನಿಯಮಿತ ವ್ಯಾಯಾಮ, ಯೋಗಾಭ್ಯಾಸ, ಸಮತೋಲನ ಆಹಾರ ಮತ್ತು ಆರೋಗ್ಯ ತಪಾಸಣೆಗೆ ಮಹತ್ವ ನೀಡಿದ ಅವರು, ಉತ್ತಮ ಆರೋಗ್ಯವೇ ಉತ್ತಮ ಜೀವನದ ಮೂಲ ಎಂದು ತಿಳಿಸಿದರು.
ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಹಲವು ವೈದ್ಯರ ಕೊಡುಗೆಯನ್ನು ಸ್ಮರಿಸಿ, ಸಮಾಜದ ಆರೋಗ್ಯ ಕಾಪಾಡುವಲ್ಲಿ ವೈದ್ಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. ರಾಜಯೋಗಿನಿಯರಾದ ಬ್ರಹ್ಮಕುಮಾರಿ ರೇಣುಕಾ ಅಕ್ಕ ಹಾಗೂ ಬ್ರಹ್ಮಕುಮಾರಿ ಭಾಗ್ಯ ಅಕ್ಕ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿ, ಪತ್ರಕರ್ತರು ಮತ್ತು ವೈದ್ಯರು ಸಮಾಜದ ಎರಡು ಪ್ರಮುಖ ಸ್ತಂಭಗಳಾಗಿದ್ದು, ಒಬ್ಬರು ಜನರ ಆರೋಗ್ಯ ಕಾಪಾಡಿದರೆ ಮತ್ತೊಬ್ಬರು ಸಮಾಜದ ಸಮಸ್ಯೆಗಳನ್ನು ಬೆಳಕಿಗೆ ತಂದು ಜಾಗೃತಿ ಮೂಡಿಸುತ್ತಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪತ್ರಕರ್ತರು, ವೈದ್ಯರು ಹಾಗೂ ಬ್ರಹ್ಮಕುಮಾರಿ ಸಂಸ್ಥೆಯ ಸಹೋದರರು-ಸಹೋದರಿಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 