ಸಂತ ಸೇವಲಾಲ ಜಯಂತಿ ಆಚರಣೆ
ತಾಳಿಕೋಟಿ 15: ಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ದಿ.15 ಶನಿವಾರದಂದು ಸಂತ ಸೇವಲಾಲ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಎಸ್.ಎಂ.ಸಜ್ಜನ ಅವರು ಸಂತ ಸೇವಲಾಲ ಅವರ ಆದರ್ಶ ಮತ್ತು ಮೌಲ್ಯಗಳು ಇಂದಿನ ಯುವ ಸಮಾಜಕ್ಕೆ ಮತ್ತು ವಿದ್ಯಾಥಿಗಳಿಗೆ ಸ್ಪೂರ್ತಿದಾಯಕವಾಗಿದ್ದು, ಸಂತರು ಹಾಕಿಕೊಟ್ಟ ಹಾದಿಯಲ್ಲಿ ನಾವೆಲ್ಲರೂ ಸಾಗಿ ಜೀವನ ಸುಂದರವಾಗಿಸಿಕೊಳ್ಳೋಣ ಎಂದು ಹೇಳಿದರು. ಸಂಸ್ಥೆಯ ಕಾಯದರ್ಶಿ ವಿವೇಕಾನಂದ ಸಜ್ಜನ, ಮುಖ್ಯಗುರುಗಳಾದ ಬಿ.ಜಿ.ಸಜ್ಜನ, ಬಿ.ಎಸ್.ಮಾಲಿಪಾಟೀಲ್ ಸರ್ ಆರ್.ಎಸ್.ದೇಸಾಯಿ, ದೈಹಿಕ ಶಿಕ್ಷಕ ಶಿವಾನಂದ ಸುಣದಳ್ಳಿ, ಪಿಯು ಕಾಲೇಜ್ ಪ್ರಾಚಾರ್ಯ ಕಿಶೋರಗೌಡ, ಸಿಬಿಎಸ್‌ಇ ಪ್ರಾಚಾರ್ಯ ಜಯಚಂದ್ರ, ಬಿಎಡ್ ಕಾಲೇಜ್ ಪ್ರಾಚಾರ್ಯ ಜಿ.ಎನ್.ಪಾಟೀಲ, ಸರ್ವ ಸಿಬ್ಬಂದಿವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕ ಕಲ್ಮೇಶ ನಿರೂಪಿಸಿದರು.