ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಮಹಿಳಾ ಸಬಲೀಕರಣಕ್ಕೆ ಶ್ರಮಿಸುತ್ತಿದೆ
Central Bank of India is working towards women empowerment
ಬಳ್ಳಾರಿ 28: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಕಾರ್ಯಕ್ರಮವನ್ನು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತುಕೈಗಾರಿಕಾ ಸಂಸ್ಥೆಯ ಆಡಿಟೋರಿಯಂನಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಅವ್ವಾರು ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ಗೌರವ ಕಾರ್ಯದರ್ಶಿಗಳಾದ ಕೆ.ಸಿ.ಸುರೇಶ್ ಬಾಬು, ದಾರಸಿಂಗ್ ನಾಯಕ್, ಜೋನಲ್ ಹೆಡ್, ಹೈದರಾಬಾದ್ ಅವರು ಮತ್ತು ದೊಡ್ಡರಂಗಪ್ಪ, ರೀಜನಲ್ ಹೆಡ್, ಹುಬ್ಬಳ್ಳಿ ಅವರ ನೇತೃತ್ವದಲ್ಲಿ ಉದ್ಘಾಟಿಸಲಾಯಿತು. ಉದ್ಘಾಟನಾ ಭಾಷಣದಲ್ಲಿ ಮಾತನಾಡಿದ ಅವ್ವಾರು ಮಂಜುನಾಥ್ ಅವರು, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅಭಿವೃದ್ಧಿಯಲ್ಲಿ ತನ್ನದೇ ಆದ ಮಹತ್ವದ ಪಾತ್ರ ವಹಿಸಿಕೊಂಡಿದೆ.
ಗ್ರಾಮೀಣ ಅಭಿವೃದ್ಧಿ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಉತ್ತೇಜನ, ಮಹಿಳಾ ಸಬಲೀಕರಣ ಹಾಗೂ ಯುವ ಉದ್ಯಮಿಗಳಿಗೆ ಬೆಂಬಲ ನೀಡುವಲ್ಲಿ ಬ್ಯಾಂಕ್ ನಿರಂತರವಾಗಿ ಶ್ರಮಿಸುತ್ತಿದೆಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಹಿರಿಯ ಉಪಾಧ್ಯಕ್ಷರಾದ ಎಸ್. ದೊಡ್ಡನಗೌಡ, ಉಪಾಧ್ಯಕ್ಷರಾದ ಸೊಂತಗಿರಿಧರ್, ಜಂಟಿ ಕಾರ್ಯದರ್ಶಿಗಳಾದ, ವಿ.ರಾಮಚಂದ್ರ, ಖಜಾಂಚಿಗಳಾದ ನಾಗಳ್ಳಿ ರಮೇಶ್, ಮಾಜಿ ಅಧ್ಯಕ್ಷರಾದಡಾ. ರಮೇಶ್‌ಗೋಪಾಲ್, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ವಿವಿಧಕಮಿಟಿ ಚೇರ್ಮನ್‌ಗಳು, ವಿಶೇಷ ಆಹ್ವಾನಿತರು, ವಿಶೇಷ ಸಮನ್ವಯ ಸಮಿತಿ ಸದಸ್ಯರು ಹಾಗೂ ಸೆಂಟ್ರಲ್ ಬ್ಯಾಂಕ್‌ಆಫ್‌ಇಂಡಿಯಾ ಅಧಿಕಾರಿಗಳು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 