ವಿದ್ಯಾರ್ಥಿನಿ ಅರ್ಚನಾಗೆ ಪ್ರಮಾಣ ಪತ್ರ ವಿತರಣೆ
Certificate distribution to student Archana
ಕಂಪ್ಲಿ 12: ಮಕ್ಕಳಿಗೆ ಶಿಕ್ಷಣದಲ್ಲಿ ಛಲದೊಂದಿಗೆ ಗುರಿ ಹೊಂದಿದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ಎಂದು ಇಲ್ಲಿನ ನವಭಾರತ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಪಿ.ನಾಗೇಶ್ವರರಾವ್ ಹೇಳಿದರು. ಸ್ಥಳೀಯ ಶ್ರೀವಿದ್ಯಾಸಾಗರ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ 23ನೇ ವರ್ಷದ ವಾರ್ಷಿಕೋತ್ಸವ ಉದ್ಘಾಟಿಸಿ ನಂತರ ವಿವಿಧ ರಂಗದಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿ ಮತನಾಡಿ, ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಾಡಿನ ಸಂಸ್ಕೃತಿ, ಸಂಸ್ಕಾರಗಳ ಜೊತೆಗೆ ಜೀವನ ಕೌಶಲ್ಯ ನೀಡಬೇಕಾಗಿದೆ. ಪಾಠದ ಜೊತೆಗೆ ಪಠ್ಯೇತರ ಚಟುವಟಿಗಳಲ್ಲಿ ಭಾಗವಹಿಸಿ, ಯಶಸ್ಸು ಕಾಣಬೇಕು ಎಂದರು. ಜೆಸ್ಕಾಂ ಎಇಇ ಕೆ.ಶ್ರೀನಿವಾಸ ಪ್ರಸಾದ್ ಮಾತನಾಡಿ, ಮಕ್ಕಳಿಗೆ ಬಾಲ್ಯದಲ್ಲಿಯೇ ಭವಿಷ್ಯದ ಕನಸನ್ನು ಜಾಗೃತಿಗೊಳಿಸಬೇಕು.
ಉತ್ತಮ ನಾಗರಿಕರನ್ನಾಗಿ ರೂಪಿಸುವಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದಿದೆ ಎಂದರು. ಹೆಚ್ಚು ಅಂಕಗಳಿಸಿದ, ನಾನಾ ಕ್ರೀಡೆಗಳಲ್ಲಿ ವಿಜೇತ, ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ, ಮೆಡೆಲ್ ನೀಡಿ ಗೌರವಿಸಲಾಯಿತು. 9ನೇ ತರಗತಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿನಿ ಅರ್ಚನಾ ಪಕ್ಕೀರ್ಪಗೆ ಪ್ರಮಾಣ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಶ್ರೀವಿದ್ಯಾಸಾಗರ ಇಂಟರ್‌ನ್ಯಾಷನಲ್ ಸ್ಕೂಲ್‌ನ ಪ್ರಾಚಾರ್ಯ ಸಾಯಿ ಕಿಶೋರ್ ಪಾಲೇಟಿ, ನವಭಾರತ ವಿದ್ಯಾವರ್ಧಕ ಸಂಘದ ನಿರ್ದೇಶಕಿ ರೋಹಿಣಿ ಪೋಟೊರಿ, ವರ್ತಕ ಟಿ.ಕೊಟ್ರೇಶ್ ಸೇರಿ ಇತರರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 