ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ.ಡಿ.ವಿ. ಪರಮಶಿವಮೂರ್ತಿ ಅವರಿಗೆ ಸಿದ್ಧರಾಮ ಸಾಹಿತ್ಯ ಪ್ರಶಸ್ತಿ ಪ್ರದಾನ
ಹಂಪಿ 15: ದಿನಾಂಕ 14 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಿದ್ಧರಾಮ ಜಯಂತಿ ಕಾರ್ಯಕ್ರಮದಲ್ಲಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಡಿ.ವಿ.ಪರಮಶಿವಮೂರ್ತಿಯವರಿಗೆ ಶ್ರಿ ಸಿದ್ಧರಾಮ ಸಾಹಿತ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಅವರ ಸಂಶೋಧನಾ ಕ್ಷೇತ್ರದ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಪ್ರಶಸ್ತಿಯನ್ನು ನೀಡಿದ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿವರು ಸಂಶೋಧಕರಿಗೆ ಮತ್ತು ಸಾಹಿತಿಗಳಿಗೆ ಸಮಾಜದಿಂದ ಸೂಕ್ತ ಗೌರವ ಸಿಗಬೇಕು. ಆಗ ಅವರ ಆತ್ಮವಿಶ್ವಾಸ ಹೆಚ್ಚುತ್ತದೆ ಮತ್ತು ಅವರಿಗೆ ಇನ್ನೂ ಹೆಚ್ಚಿನ ಕೆಲಸ ಮಾಡಲು ಪ್ರೇರಣೆಯಾಗುತ್ತದೆ ಎಂದು ಹೇಳಿದರು. ಸಿದ್ಧಗಂಗಾ ಮಠದ ಸಿದ್ಧಲಿಂಗಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ ಡಾ.ಅಶ್ವತ್ಥನಾರಾಯಣ್, ಸಿ.ಟಿ.ರವಿ, ಜೆ.ಸಿ.ಮಾಧುಸ್ವಾಮಿ, ಚಿತ್ರನಟ ಡಾಲಿ ಧನಂಜಯ ಮುಂತಾದ ಗಣ್ಯರು ಹಾಜರಿದ್ದರು.