ಹಾಲು ಉತ್ಪಾದಕರ ಸಹಕಾರ ಸಂಘಗಳ ಮತಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಚಂದ್ರ್ಪ ಜಾಲಗಾರ ಗೆಲುವು
ಹಾನಗಲ್ 04 : ಇಲ್ಲಿನ ಕನಕ ವೃತ್ತದಲ್ಲಿ ಹಾವೇರಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಕೆಎಂಎಫ್) ಚುನಾವಣೆಯಲ್ಲಿ ಹಾನಗಲ್ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಮತಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಚಂದ್ರ್ಪ ಜಾಲಗಾರ ಗೆಲುವು ಸಾಧಿಸುವ ಮೂಲಕ ಇತಿಹಾಸ ಸೃಷ್ಟಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಪಟಾಕಿ ಸಿಡಿಸಿ,ಪರಸ್ಪರ ಗುಲಾಲು ಎರಚಿ,ಸಿಹಿ ತಿನ್ನಿಸಿ ಸಂಭ್ರಮಿಸಿದ ಕಾರ್ಯಕರ್ತರು ಶಾಸಕ ಶ್ರೀನಿವಾಸ ಮಾನೆ ಪರ ಜಯಘೋಷ ಮೊಳಗಿಸಿದರು.ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹನುಮಂತಪ್ಪ ಮರಗಡಿ, ಮಂಜು ಗೊರಣ್ಣನವರ, ತಾಪಂ ಮಾಜಿ ಅಧ್ಯಕ್ಷರಾದ ಶಿವಬಸಪ್ಪ ಪೂಜಾರ, ಸಿದ್ದನಗೌಡ ಪಾಟೀಲ, ಜಿಪಂ ಮಾಜಿ ಸದಸ್ಯ ಕೊಟ್ರ್ಪ ಕುದರಿಸಿದ್ದನವರ, ಪುರಸಭೆ ಮಾಜಿ ಅಧ್ಯಕ್ಷೆ ಮಮತಾ ಆರೆಗೊಪ್ಪ, ಮುಖಂಡರಾದ ಭರಮಣ್ಣ ಶಿವೂರ, ಈರಣ್ಣ ಬೈಲವಾಳ, ಪುಟ್ಟಪ್ಪ ನರೇಗಲ್, ಅಶೋಕ ಹಲಸೂರ, ಶಿವು ತಳವಾರ,ಆದರ್ಶ ಶೆಟ್ಟಿ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.