ಚರಗ ಚೆಲ್ಲಿ ಭೂತಾಯಿಗೆ ಭಕ್ತಿ ಸಮರೆ್ಣ : ರೈತ ಕುಟುಂಬಗಳಿಂದ ಸಡಗರದ ಎಳ್ಳ ಅಮಾವಾಸ್ಯೆ
Charaga Chelli, a devotional service to Mother Earth: A busy new moon day for farmer families
ಯಲಬುರ್ಗಾ 19: ರೈತರು ಕುಟುಂಬ ಸಮೇತ ಶುಕ್ರವಾರ ತಮ್ಮ ಜಮೀನುಗಳಿಗೆ ತೆರಳಿ ಪೂಜೆ ಸಲ್ಲಿಸಿ, ಸಾಮೂಹಿಕವಾಗಿ ಊಟ ಮಾಡುವ ಮೂಲಕ ಎಳ್ಳು ಅಮಾವಾಸ್ಯೆ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.ಎಳ್ಳು ಅಮವಾಸ್ಯೆಗೆ ನಾಡಿನ ರೈತ ಕುಟುಂಬಗಳಲ್ಲಿ ವಾರಗಟ್ಟಲೆ ಮೊದಲು ಎಳ್ಳು ಹೋಳಿಗೆ, ಎಣ್ಣಿ ಹೋಳಿಗೆ, ಶೇಂಗಾ ಹೋಳಿಗೆ, ಸಜ್ಜಿ ರೊಟ್ಟಿ, ಜೋಳದ ಖಡಕ್ ರೊಟ್ಟಿ, ಚಪಾತಿ, ಹೆಸರು, ಮಡಿಕೆ, ಕಡಲೆ, ತೊಗರಿ ಕಾಳುಗಳ ಪಲ್ಲೆ, ಬದನೆಕಾಯಿ ಪಲ್ಯೆ ಬೇಳೆ, ಮೊಸರು, ತುಪ್ಪ, ಕಡಲೆ ಶೇಂಗಾ ಚಟ್ನಿ ಪುಡಿ, ಹಸಿ ಮೆಣಸಿನಕಾಯಿ ಚಟ್ನಿ, ಕೆಂಪು ಹಿಂಡಿ, ಮೊಸರನ್ನ, ಚಿತ್ರಾನ್ನ, ಪಲಾವ್, ಅನ್ನ-ಸಾಂಬಾರ, ಹಪ್ಪಳ, ಸಂಡಿಗೆ, ಹೀಗೆ ವಿವಿಧ ಬಗೆ ಬಗೆಯ ಭಕ್ಷಗಳನ್ನು ತಯಾರಿಸಿ ಅಮವಾಸ್ಯೆ ದಿನ ಎತ್ತಿನ ಬಂಡಿ, ಟಂಟಂ, ಟ್ರ್ಯಕ್ಟರ್ಗಳಲ್ಲಿ ಮನೆಯ ಸದಸ್ಯರ ಜೊತೆಗೆ ಸ್ನೇಹಿತರು, ಬಂಧುಗಳನ್ನು ಕರೆದುಕೊಂಡು ಹೊಲಕ್ಕೆ ಹೋಗಿ, ಹೊಲದಲ್ಲಿ ಸಮೃದ್ದವಾಗಿ ಬೆಳೆದ ಬಿಳಿಜೋಳ, ಕಡಲೆ, ಕುಸುಬಿ, ಗೋಧಿ ಫೈರಿನ ಮಧ್ಯದಲ್ಲಿ ಬನ್ನಿ ಗಿಡದ ಹತ್ತಿರ ಐದು ಕಲ್ಲುಗಳಿಗೆ ಸುಣ್ಣ ಹಚ್ಚಿ ಪಂಚ ಪಾಂಡವರನ್ನು ಮಾಡಿ ಪೂಜೆ ಸಲ್ಲಿಸಿದರು.
ಎಲ್ಲ ಬಗೆಯ ತಿನಿಸುಗಳ ತುಣುಕನ್ನು ಒಂದು ಪಾತ್ರೆಯಲ್ಲಿ ಹಾಕಿಕೊಂಡು ಮುಂದೆ ಒಬ್ಬರು ತಿನಿಸುಗಳ ತುಣುಕನ್ನು ಹುಲ್ಲುಲ್ಗೊ ಎಂದು ಹೊಲದಲ್ಲಿ ಸಮೃದ್ದವಾಗಿ ಬೆಳೆದಿರುವ ಪೈರಿನ ಮಧ್ಯದಲ್ಲಿ ಎರಚಿದರೆ ಹಿಂದೆ ಒಬ್ಬರು ಚಲಂಬ್ರಿಗೊ ಎಂದು ನೀರನ್ನು ಎರಚುತ್ತ ಭೂತಾಯಿಗೆ ಪೂಜೆ ಸಲ್ಲಿಸುತ್ತಾರೆ. ಈ ರೀತಿಯಾಗಿ ಎರಚುವ ತಿನಿಸುಗಳನ್ನು ತಿನ್ನಲು ಬರುವ ಪಕ್ಷಿಗಳು ತಿನಿಸುಗಳ ಜೊತೆಗೆ ಪೈರಿನಲ್ಲಿರುವ ಕೀಟಗಳನ್ನು ತಿನ್ನುತ್ತವೆ. ಈ ಬಾರಿ ಮಳೆ ಬಿಡುವು ನೀಡದ ಹಿನ್ನಲೆಯಲ್ಲಿ ತಾಲ್ಲೂಕಿನಲ್ಲಿ ತಡವಾಗಿ ಬಿತ್ತನೆಯಾಗಿದ್ದು, ಕಾಳು ಕಟ್ಟಬೇಕಿದ್ದ ಕಡಲೆ ಹೂ, ಚಟ್ಟಿ ಇದೆ. ತೆನೆ ಹಾಕಬೇಕಿದ್ದ ಬಿಳಿಜೋಳ ಇನ್ನೂ ಬೆಳೆಯುತ್ತಿದೆ. ಈಗಾಗಲೇ ರೈತರು ಕೀಟಗಳ ನಿರ್ವಹಣೆಗೆ ಎರಡ್ಮೂರು ಬಾರಿ ಕೀಟನಾಶಕ ಸಿಂಪಡಿಸಿದ್ದು, ಬೆಳೆ ಸಮೃದ್ಧವಾಗಿದೆ. ರೈತರು ಉತ್ತಮ ಫಸಲು ಬರುತ್ತದೆಂಬ ಆಶಯದಲ್ಲಿದ್ದಾರೆ. ಎಳ್ಳು ಅಮಾವಾಸ್ಯೆ ಆಚರಣೆ ರೈತರ ಜೀವನದ ಸಂಭ್ರಮ ಮತ್ತು ಕೃಷಿಯ ಸಂಸ್ಕೃತಿಯ ಪ್ರತೀಕವಾಗಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 