ಛತ್ರಪತಿ ಶಿವಾಜಿ ಜಯಂತಿ ಆಚರಣೆ ಪೂರ್ವಭಾವಿ ಸಭೆ
Chhatrapati Shivaji Jayanti celebration pre-meeting
ಕಾರವಾರ 27: ಫೆಬ್ರವರಿ 19 ರಂದು ಜಿಲ್ಲಾ ಮಟ್ಟದ ಛತ್ರಪತಿ ಶಿವಾಜಿ ಜಯಂತಿ ಆಚರಣೆಯನ್ನು ಆಚರಿಸುವ ಕುರಿತ ಪೂರ್ವಭಾವಿ ಸಭೆಯು ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಅವರ ಅಧ್ಯಕ್ಷತೆಯಲ್ಲಿ ಅಪರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆಯಿತು.
ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮವನ್ನು ಕಾರವಾರ ನಗರಸಭೆಯ ಉದ್ಯಾನವನದಲ್ಲಿ ಆಚರಿಸುವ ಕುರಿತಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ ಅಪರ ಜಿಲ್ಲಾಧಿಕಾರಿಗಳು, ನಗರಸಭೆ ಉದ್ಯಾನವನದಲ್ಲಿರುವ ಶಿವಾಜಿ ಪ್ರತಿಮೆ ಪುಷ್ಪ ನಮನ ಸಲ್ಲಿಸುವಂತೆ ಹಾಗೂ ಶಿವಾಜಿ ಅವರ ಜೀವನ ಚೆರಿತ್ರೆ ಕುರಿತಂತೆ ಉಪನ್ಯಾಸ ಆಯೋಜಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಾರ್ಯಕ್ರಮದಲ್ಲಿ ಸಮುದಾಯದ ಜನತೆ ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು, ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಬೇಕು ಹಾಗೂ ಎಲ್ಲಾ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳು ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳಾ ನಾಯ್ಕ , ಪ.ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸತೀಶ್ ನಾಯ್ಕ, ಕೊಂಕಣಿ ಅಕಾಡೆಮಿ ಸದಸ್ಯೆ ಉಷಾ ರಾಣೆ, ಸಮುದಾಯದ ಮುಖಂಡರಾದ ಉದಯ ರಾಣೆ, ಗೀರೀಶ್ ದೇಸಾಯಿ, ಅರುಣ್ ಗಾಂವಕರ್,ರಾಜೇಶ್ ನಾಯ್ಕ, ಜನಾರ್ಧನ್ ಗಾಂವಕರ್ ಮತ್ತಿತರರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 