ಅಥಣಿ ರಸ್ತೆ ಕಾಮಗಾರಿಗೆ ಚಿದಾನಂದ ಸವದಿ ಭೂಮಿ ಪೂಜೆ
Chidananda Savadi Bhoomi Puja for Athani Road work
ಅಥಣಿ 25: ಶಾಸಕ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಅಥಣಿ ಪುರಸಭೆಯ ಮೂಲಕ ಅಥಣಿ ಪಟ್ಟಣದಲ್ಲಿ ಜನಪರ ಮತ್ತು ಅಭಿವೃದ್ಧಿ ಪರ ಕಾರ್ಯಗಳು ಅನುಷ್ಠಾನಗೊಳ್ಳುತ್ತಿವೆ ಎಂದು ಕಾಂಗ್ರೆಸ್ ಯುವ ನಾಯಕ ಚಿದಾನಂದ ಸವದಿ ಹೇಳಿದರು. ಅವರು ಪುರಸಭಾ ಯೋಜನೆಯಡಿ ಮಂಜೂರಾದ ಬಸವೇಶ್ವರ ವೃತ್ತದಿಂದ ಹನುಮಾನ ಅಗಸಿ ವರೆಗಿನ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡುತ್ತಿದ್ದರು.
ಇತ್ತೀಚೆಗಷ್ಟೆ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಅಥಣಿ ಪುರಸಭೆಯನ್ನು ನಗರ ಸಭೆಯಾಗಿ ಮೇಲ್ದರ್ಜೆಗೇರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ಅಥಣಿಗೆ ಹರಿದು ಬರಲಿದೆ ಎಂದು ಹೇಳಿದ ಅವರು ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿರುವ ಕೆರೆ ಅಭಿವೃದ್ಧಿ ಮತ್ತು ಭಾಗೀರಥಿ ನಾಲಾ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಲಿದೆ ಎಂದರು.
ಪುರಸಭಾ ಅಧ್ಯಕ್ಷೆ ಶಿವಲೀಲಾ ಬುಟಾಳಿ, ಸ್ಥಾಯಿ ಸಮಿತಿ ಅಧ್ಯಕ್ಷ ದತ್ತಾ ವಾಸ್ಟರ್, ಗುತ್ತಿಗೆದಾರ ಮಯೂರ ಸಿಂಗೆ, ಸದಸ್ಯರಾದ ಮಲ್ಲೇಶ ಹುದ್ದಾರ, ಸಂತೋಷ ಸಾವಡಕರ, ಮಲ್ಲಿಕಾರ್ಜುನ ಬುಟಾಳಿ, ವೀಲೀನರಾಜ ಯಳಮೇಲಿ, ರಾಜಶೇಖರ ಗುಡೋಡಗಿ, ರವಿ ಭಡಕಂಬಿ, ರಮೇಶ ಪವಾರ, ನರಸು ಬಡಕಂಬಿ, ಶಶಿಕಾಂತ ಹುಲಕುಂದ, ಬಸವರಾಜ ನಾಯಿಕ, ಸೈಯ್ಯದಮೀನ್ ಗದ್ಯಾಳ, ರಾಜು ಬುಲುಬುಲೆ, ಬಾಬು ಖೆಮಲಾಪುರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 