ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗದಗ ಜಿಲ್ಲಾ ಪ್ರವಾಸ
Chief Minister Siddaramaiah's tour of Gadag district
ಗದಗ 12: ರಾಜ್ಯದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 13 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು ಕಾರ್ಯಕ್ರಮದ ವಿವರ ಈ ಕೆಳಗಿನಂತಿದೆ. ಡಿಸೆಂಬರ್ 13 ರಂದು ಬೆಳಿಗ್ಗೆ 10.20 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದ ಹೆಲಿಪ್ಯಾಡ್‌ದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಿಗ್ಗೆ 11.15 ಗಂಟೆಗೆ ಜಿಲ್ಲೆಯ ಲಕ್ಷ್ಮೇಶ್ವರದ ಶ್ರೀ ಉಮಾ ಪಿ.ಯು.ಕಾಲೇಜ್ ಮೈದಾನದ ಹೆಲಿಪ್ಯಾಡ್‌ಗೆ ಆಗಮಿಸುವರು. ಲಕ್ಷ್ಮೇಶ್ವರದ ಚಂದನ ಎಜ್ಯುಕೇಶನ್ ಸೊಸೈಟಿ ವತಿಯಿಂದ ಆಯೋಜಿಸಿರುವ ಭಾರತರತ್ನ ಪ್ರೊ.ಸಿ.ಎನ್.ಆರ್.ರಾವ್ 10 ನೇ ವರ್ಷದ ವಿಜ್ಞಾನ ವಿಸ್ತ್ರತ ಕಾರ್ಯಕ್ರಮ-2025 ಹಾಗೂ ಬಿ.ಎಸ್.ಪಾಟೀಲ, ಭಾ.ಆ.ಸೇ (ನಿ) ಇವರಿಗೆ 2025 ನೇ ಸಾಲಿನ ಪ್ರತಿಷ್ಟಿತ ಚಂದನ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳುವರು. ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ಜರುಗಿಸುವರು. ಮಧ್ಯಾಹ್ನ 3 ಗಂಟೆಗೆ ಲಕ್ಷ್ಮೇಶ್ವರದ ಶ್ರೀ ಉಮಾ ಪಿ.ಯು.ಕಾಲೇಜ್ ಮೈದಾನ ಹೆಲಿಪ್ಯಾಡ್‌ದಿಂದ ಹೆಲಿಕಾಪ್ಟರ್ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 