ಮುಖ್ಯಮಂತ್ರಿ ಸಿದ್ಧರಾಮಯ್ಯವರ ಪ್ರವಾಸ
ಗದಗ 12: ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯವರು ಡಿಸೆಂಬರ್ 15 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಪ್ರವಾಸ ವಿವರ ಇಂತಿದೆ. ಡಿಸೆಂಬರ್ 15 ರಂದು ಬೆಳಿಗ್ಗೆ 11.05 ಗಂಟೆಗೆ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಹೊರಟು ಗದಗ ತಾಲ್ಲೂಕಿನ ಹರ್ಲಾಪುರ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಆವರಣದ ಹೆಲಿಪ್ಯಾಡ್ ಗೆ ಆಗಮಿಸುವರು. ನಂತರ ಬೆಳಿಗ್ಗೆ 11.30 ಗಂಟೆಗೆ ಹರ್ಲಾಪೂರ ಗ್ರಾಮದಲ್ಲಿ ಬೀರಲಿಂಗೇಶ್ವರ ಸೇವಾ ಸಮಿತಿ ಹರ್ಲಾಪೂರ ಅವರ ವತಿಯಿಂದ ಆಯೋಜಿಸಲಾದ ನೂತನವಾಗಿ ನಿರ್ಮಿಸಲಾದ ಬೀರಲಿಂಗೇಶ ಹಾಗೂ ಮಾಳಿಂಗರಾಯ ಮೂರ್ತಿ ಪ್ರತಿಷ್ಠಾಪನೆ ಹಾಗೂ ದೇವಸ್ಥಾನ ಉದ್ಘಾಟನೆ ನೆರವೇರಿಸುವರು.
ನಂತರ ಮಧ್ಯಾಹ್ನ 12 ಗಂಟೆಗೆ ಹರ್ಲಾಪೂರ ಗ್ರಾಮದ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಮೂಲಕ ನಿರ್ಗಮಿಸಿ, ರೋಣ ಪಟ್ಟಣದ ದಿ. ಪೌಲ್ ಅಕ್ಯಾಡಮಿ ಸ್ಕೂಲ್ ಆವರಣದಲ್ಲಿನ ಹೆಲಿಪ್ಯಾಡ್ ತಲುಪುವರು.ಮಧ್ಯಾಹ್ನ 12.15 ಗಂಟೆಗೆ ರೋಣ ಪಟ್ಟಣದ ದ್ರೋಣಾಚಾರ್ಯ ತಾಲ್ಲೂಕು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ ವತಿಯಿಂದ ಆಯೋಜಿಸಿರುವ ರೋಣ ವಿಧಾನ ಸಭಾಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.ಸಂಜೆ 4 ಗಂಟೆಗೆ ರೋಣದಿಂದ ಹೆಲಿಕಾಪ್ಟರ್ ಮೂಲಕ ನಿರ್ಗಮಿಸಿ, ಸಂಜೆ 5 ಗಂಟೆಗೆ ಬೆಳಗಾವಿಯ ಸುವರ್ಣಸೌಧದ ಹೆಲಿಪ್ಯಾಡ್ ಗೆ ಪ್ರಯಾಣಿಸುವರು ಎಂದು ಪ್ರಕಟಣೆ ತಿಳಿಸಿದೆ.