ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಾಹಲಯ (ವೀರಭೂಮಿ), ಪ್ರತಿಮೆ ಲೋಕಾರೆ​‍್ಣಗೈದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಾಹಲಯ (ವೀರಭೂಮಿ), ಪ್ರತಿಮೆ ಲೋಕಾರೆ​‍್ಣಗೈದ ಮುಖ್ಯಮಂತ್ರಿ ಸಿದ್ದರಾಮಯ್ಯ Chief Minister Siddaramaiah unveils statue of revolutionary hero Sangolli Rayanna Museum (Veerabhoo

           ಬೆಳಗಾವಿ, :ಬ್ರಿಟೀಷರ ವಿರುದ್ಧ ರಣಕಹಳೆ ಮೊಳಗಿಸಿದ ಸ್ವಾತಂತ್ರ್ಯ ಹೋರಾಟಗಾರ ಹಾಗೂ ವೀರ ಸೇನಾನಿ ಸಂಗೊಳ್ಳಿ ರಾಯಣ್ಣ ಸೇರಿದಂತೆ ಒಟ್ಟು ಏಳು ಜನರನ್ನು ನಂದಗಡದಲ್ಲಿ ನೇಣಿಗೆ ಹಾಕಲಾಗಿದೆ. ರಾಯಣ್ಣ ಸಮಾಧಿ ಸ್ಥಳವನ್ನು ಅಭಿಪಡಿಸಿದಂತೆ ಉಳಿದ ಆರು ಹುತಾತ್ಮರ ಸಮಾಧಿ ಸ್ಥಳಗಳನ್ನು ಕೂಡ ಅಭಿವೃದ್ಧಿ ಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿದರು. ನಂದಗಡ ರೂರಲ್ ಎಜುಕೇಷನ್ ಸೊಸೈಟಿ ಮೈದಾನದಲ್ಲಿ ಜನವರಿ 19 (ಸೋಮವಾರ) ಕ್ರಾಂತೀವೀರ ಸಂಗೋಳ್ಳಿ ರಾಯಣ್ಣ ವಸ್ತು ಸಂಗ್ರಾಹಲಯ, ಸಮಾಧಿ ಬಳಿಯ ಕೆರೆಯಲ್ಲಿ ಕ್ರಾಂತೀವೀರ ರಾಯಣ್ಣ ಪ್ರತಿಮೆ ಲೋಕಾರೆ​‍್ಣಗೊಳಿಸಿ ಹಾಗೂ ವಿವಿಧ ಕಾಮಗಾರಿಗಳ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ರಾಯಣ್ಣನ ಹೆಸರು ಕೇಳಿದರೆ ಮೈ ರೋಮಾಂಚನಗೊಳ್ಳುತ್ತದೆ.

      2024ರಲ್ಲಿ ಸಂಗೊಳ್ಳಿಯಲ್ಲಿ ಶೌರ್ಯಭೂಮಿ ಹಾಗೂ ಸೈನಿಕ ಶಾಲೆಯನ್ನು ಉದ್ಘಾಟಿಸಲಾಗಿದೆ. ರಾಯಣ್ಣನ ಹುಟ್ಟೂರಾದ ಸಂಗೊಳ್ಳಿ ಹಾಗೂ ಅವರನ್ನು ನೇಣು ಹಾಕಿದಂತಹ ನಂದಗಡ ಗ್ರಾಮಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಸಂಗೊಳ್ಳಿ ರಾಯಣ್ಣ ದೇಶಪ್ರೇಮಿಯಾಗಿದ್ದು ಅವರನ್ನು ನೆನಪಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಸಂಗೊಳ್ಳಿ ಹಾಗೂ ನಂದಗಡವನ್ನು ಪ್ರವಾಸಿ ತಾಣವನ್ನಾಗಿಸುವ ಉದ್ದೇಶದೊಂದಿಗೆ ಸ್ಥಳಗಳನ್ನು ಅಭಿವೃದ್ಧಿ ಪಡಿಸಲಾಗುವುದು. ವೀರಭೂಮಿಯಲ್ಲಿ ಸಂಗೊಳ್ಳಿ ರಾಯಣ್ಣ ಅವರ ಬದುಕು ಹಾಗೂ ಹೋರಾಟದ ವಿವಿಧ ಮಜಲುಗಳನ್ನು ಶಿಲ್ಪಕಲಾಕೃತಿಗಳ ಮೂಲಕ ಅನಾವರಣಗೊಳಿಸಲಾಗಿದೆ ಎಂದರು.

         ಸರಕಾರವು ಮುಂಬರುವ ದಿನಗಳಲ್ಲಿ ಸಂಗೊಳ್ಳಿ ಮತ್ತು ನಂದಗಡವನ್ನು ಅಭಿವೃದ್ಧಿಪಡಿಸಿ ಪ್ರವಾಸಿತಾಣವಾಗಿ ರೂಪಿಸಲಿದೆ. ಪ್ರತಿಯೊಬ್ಬರು ದೇಶಪ್ರೇಮ ಬೆಳೆಸಿಕೊಂಡು ಸಂವಿಧಾನವನ್ನು ರಕ್ಷಿಸಬೇಕಿದೆ. ಶಿಕ್ಷಣದಿಂದ ಸಮಾನ ಅವಕಾಶ ಸಾಧ್ಯವಾಗಿದೆ. ಆದ್ದರಿಂದ ಶಿಕ್ಷಣ, ಸ್ವಾಭಿಮಾನ ಮತ್ತು ಜ್ಞಾನ ನಮ್ಮೆಲ್ಲರ ಅಭಿವೃದ್ಧಿಗೆ ಸಹಕಾರಿ. ಗುಲಾಮಗಿರಿತನ ಕಿತ್ತೆಸೆಯಬೇಕಾಗಿದೆ.. ಸಂಗೊಳ್ಳಿಯ ಸೈನಿಕ ಶಾಲೆಯಲ್ಲಿ 388 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ದೇಶದ ಪ್ರಜಾಪ್ರಭುತ್ವ, ಸಂವಿಧಾನನವನ್ನು ಉಳಿಸುವ ಕಾರ್ಯವಾಗಬೇಕು. ಶಿಕ್ಷಣ ಹಾಗೂ ಸ್ವಾಭಿಮಾನದೊಂದಿಗೆ ದೇಶ ಪ್ರೇಮವನ್ನು ಬೆಳೆಸಿಕೊಳ್ಳಬೇಕು. ಕರ್ನಾಟಕದಲ್ಲಿ ವಾಸಿಸುವ ಪ್ರತಿಯೊಬ್ಬರು ಕನ್ನಡದಲ್ಲಿ ಮಾತನಾಡಬೇಕು.

          ಪ್ರತಿಯೊಬ್ಬರು ಕನ್ನಡದಲ್ಲಿ ಮಾತನಾಡುವಂತಹ ವಾತಾವರಣವನ್ನು ಸೃಷ್ಟಿ ಮಾಡಬೇಕಾಗಿದೆ. ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿದರು. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಮಾತನಾಡಿ, ಸಂಗೊಳ್ಳಿ ರಾಯಣ್ಣನ ಹೋರಾಟದ ಬದುಕು ಹಾಗೂ ಅವರ ಇತಿಹಾಸವನ್ನು ತಿಳಿಸುವ ನಿಟ್ಟಿನಲ್ಲಿ ವೀರಭೂಮಿ ನಿರ್ಮಾಣಕ್ಕೆ 2013ರಲ್ಲಿ ಭೂಮಿ ಪೂಜೆ ನೆರವೇರಿಸಲಾಗಿತ್ತು. ಇದೀಗ ಕನಸು ನನಸಾಗಿದೆ. ನಂದಗಡ ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟದ ಪ್ರವಾಸಿ ತಾಣವಾಗುವುದರ ಜೊತೆಗೆ ರಾಯಣ್ಣನ ಇತಿಹಾಸ ದೇಶಕ್ಕೆ ತಿಳಿಸಿವಂತಹ ಕಾರ್ಯ ವೀರಭೂಮಿಯಲ್ಲಿ ಆಗಿದೆ ಎಂದರು. ವೀರಭೂಮಿಯಿಂದಾಗಿ ಇವತ್ತಿನಿಂದ ಭಾರತದ ಭೂಪಟದಲ್ಲಿ ನಂದಗಡ ವಿಶೇಷ ಸ್ಥಾನ ಪಡೆಯಲಿದೆ ಎಂದರು.

           ಲೋಕೋಪಯೋಗಿ ಇಲಾಖೆ ವತಿಯಿಂದ ಅನೇಕ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಬಾರಿ ಖಾನಾಪುರ ತಾಲೂಕಿನಲ್ಲಿ ಮೂರು ಸೇತುವೆಗಳ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ ಮಾತನಾಡಿ, ಕ್ರಾಂತೀವೀರ ಸಂಗೊಳ್ಳಿ ರಾಯಣ್ಣನ ಜೀವನಗಾಥೆಯನ್ನು ನಂದಗಡದಲ್ಲಿ ನಿರ್ಮಿಸುವುದರ ಮೂಲಕ ಮುಂದಿನ ಪೀಳಿಗೆಗೆ ರಾಯಣ್ಣನ ಇತಿಹಾಸ ತಿಳಿಸುವಂತಹ ಮಹತ್ವದಕಾರ್ಯ ರಾಜ್ಯ ಸರ್ಕಾರದಿಂದ ಆಗಿದೆ. ಇದು ನಾವೆಲ್ಲರೂ ಹೆಮ್ಮೆಪಡುವ ಸಂಗತಿಯಾಗಿದೆ ಎಂದರು. ರಾಯಣ್ಣ ಎಂದರೆ ದೇಶಭಕ್ತಿ, ಧೈರ್ಯ, ಸ್ವಾಭಿಮಾನದ ಸಂಕೇತವಾಗಿದೆ