ಸುಚಿರಾಯು ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿಗಳು
Chief Minister visits Suchirayu Hospital and inquires about the health of the injured
ಹುಬ್ಬಳ್ಳಿ ಜ.24: ಇಂದು ಮಂಟೂರು ರಸ್ತೆಯಲ್ಲಿ ಕಟೌಟ್ ಅಳವಡಿಸುತ್ತಿದ್ದಾಗ, ಆಕಸ್ಮಿಕವಾಗಿ ಕಟೌಟ್ ಬಿದ್ದು ಮೂವರು ಜನ ಗಾಯಗಳಾಗಿ ನಗರದ ಸುಚಿರಾಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಸತಿರಹಿತರಿಗೆ ನೂತನ ಮನೆಗಳ ವಿತರಣೆ ಕಾರ್ಯಕ್ರಮದ ನಂತರ, ಹುಬ್ಬಳ್ಳಿ ಸುಚಿರಾಯು ಆಸ್ಪತ್ರೆಗೆ ಭೇಟಿ ನೀಡಿದರು.
ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳಾದ ಬ್ಯಾಹಟ್ಟಿಯ ಶಂಕರ ಹಡಪದ (28), ಹುಬ್ಬಳ್ಳಿಯ ಶಾಂತಾ ಕ್ಯಾರಕಟ್ಟಿ ( 60) ಮತ್ತು ಧಾರವಾಡದ ಲಕ್ಷ್ಮಿ ನಗರದ ಮಂಜುನಾಥ (33) ಅವರನ್ನು
ಮುಖ್ಯಮಂತ್ರಿಗಳು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಘಟನೆಯ ಕುರಿತು ವಿಷಾದ ವ್ಯಕ್ತಪಡಿಸಿದ ಸವರು, ಗಾಯಾಳುಗಳು ಸಂಪೂರ್ಣ ಗುಣಮುಖರಾಗುವವರೆಗೆ ಉಚಿತವಾಗಿ ಅಗತ್ಯವಾದ ಉತ್ತಮ ಚಿಕಿತ್ಸೆ, ಓಷಧಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಸಮಾಜ ಕಲ್ಯಾಣ ಸಚಿವರಾದ ಡಾ.ಎಚ್.ಸಿ.ಮಹಾದೇವಪ್ಪ, ವಸತಿ ಸಚಿವರಾದ ಜಮೀರ ಅಹ್ಮದ ಖಾನ್, ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ, ವಿಧಾನ ಪರಿಷತ್ ಸರಕಾರಿ ಮುಖ್ಯ ಸಚೇಕರಾದ ಸಲೀಂ ಅಹ್ಮದ,
ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್.ಎಚ್.ಕೋನರಡ್ಡಿ, ಪ್ರಭಾರ ಜಿಲ್ಲಾದಿಕಾರಿ ಭುವನೇಶ ಪಾಟೀಲ, ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಂಹೊನಕೇರಿ ಹಾಗೂ ಸುಚಿರಾಯು ಆಸ್ಪತ್ರೆಯ ತಜ್ಞ ವೈದ್ಯರು, ಸಿಬ್ಬಂದಿಗಳು, ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 