ಬಾಲಕಾರ್ಮಿಕ ನಿಷೇಧ ಕಾಯ್ದೆ, ಮಕ್ಕಳ ಸುರಕ್ಷತೆ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

ಬಾಲಕಾರ್ಮಿಕ ನಿಷೇಧ ಕಾಯ್ದೆ, ಮಕ್ಕಳ ಸುರಕ್ಷತೆ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ Child Labor Prohibition Act, Legal Awareness Program on Child Safety

ರಾಯಬಾಗ 08:  ಮಕ್ಕಳ ಮೇಲೆ ದಿನದಿಂದ ದಿನಕ್ಕೆ ದೌರ್ಜನ್ಯ ಹೆಚ್ಚುತ್ತಿರುವುದರಿಂದ ಮಕ್ಕಳ ರಕ್ಷಣೆಗಳ ಬಗ್ಗೆ ಜಾಗೃತಗೊಳಿಸಲು ಎಲ್ಲ ಶಾಲೆಗಳಲ್ಲಿ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಪ್ರಧಾನ ದಿವಾಣಿ ನ್ಯಾಯಾಧೀಶೆ ಪ್ರೀಯಾ ಭಟ್ಟಡ ಹೇಳಿದರು. ಶನಿವಾರ ತಾಲೂಕಿನ ನಿಪನಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ತಾಲೂಕು ಕಾನೂನು ಸಮಿತಿ, ಶಿಕ್ಷಣ ಇಲಾಖೆ, ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪೋಕ್ಸೊ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲಕಾರ್ಮಿಕ ನಿಷೇಧ ಕಾಯ್ದೆ,

ಮಕ್ಕಳ ಸುರಕ್ಷತೆ ಬಗ್ಗೆ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಮೇಲೆ ಆಗುತ್ತಿರುವ ಲೈಂಗಿಕ ದೌರ್ಜನ್ಯ, ಬಾಲ್ಯ ವಿವಾಹ, ಬಾಲ ಕಾರ್ಮಿಕತೆಗಳಿಂದ ರಕ್ಷಣೆ ಮಾಡಲು ಸರ್ಕಾರ ಕಟ್ಟುನಿಟ್ಟಿನ ಕಾನೂನುಗಳು ಜಾರಿಗೊಳಿಸಿದೆ ಎಂದರು.  ಸಿಡಿಪಿಒ ಭಾರತಿ ಕಾಂಬಳೆ ಮಾತನಾಡಿ, ಮಕ್ಕಳು ತಮಗೆ ಆಗುವ ಕಿರುಕುಳ ಕುರಿತು ಪಾಲಕರಿಗೆ, ಶಿಕ್ಷಕರಿಗೆ ತಿಳಿಸಬೇಕು. ಮಕ್ಕಳ ಸಹಾಯವಾಣಿ ಸಂಖ್ಯೆ 1098 ಗೆ ಕರೆ ಮಾಡಿ, ಮಕ್ಕಳು ತಮ್ಮ ತೊಂದರೆ ಬಗ್ಗೆ ದೂರು ಸಲ್ಲಿಸಬಹುದು ಎಂದು ತಿಳಿಸಿದರು. ವಕೀಲ ಎಲ್‌.ಆರ್‌.ಪಡತರೆ, ಎಸ್‌.ಎನ್ಪಡತರೆ, ಪಿ.ಎಸ್‌.ಕುರಬೆಟ್ಟ, ಮುಖ್ಯೋಧ್ಯಾಪಕ ಐ.ಕೆ.ಅಕಿವಾಟೆ ಹಾಗೂ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.