ಬಾಲ ಕಾರ್ಮಿಕರನ್ನು ರಕ್ಷಿಸಿ, ಸಮಾಜದ ಮುಖ್ಯ ವಾಹಿನಿಗೆ ತರಬೇಕು: ವಿಠ್ಠಲ್ ಚೌಗಲಾ

Child labor must be protected, brought into the mainstream of society: Vitthal Chowgala

ಬಾಲ ಕಾರ್ಮಿಕರನ್ನು ರಕ್ಷಿಸಿ, ಸಮಾಜದ ಮುಖ್ಯ ವಾಹಿನಿಗೆ ತರಬೇಕು: ವಿಠ್ಠಲ್ ಚೌಗಲಾ 

ಕೊಪ್ಪಳ 10 : ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಟಾಸ್ಕ್‌ ಫೋರ್ಸ್‌ ಸಮಿತಿಗಳು ಬಾಲ ಕಾರ್ಮಿಕರನ್ನು ರಕ್ಷಿಸಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರಬೇಕು ಎಂದು ತಹಶೀಲ್ದಾರ ವಿಠ್ಠಲ್ ಚೌಗಲಾ ಅವರು ಹೇಳಿದರು. ಇತ್ತೀಚೆಗೆ ನಗರದ ತಹಶೀಲ್ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ ಬಾಲಕಾರ್ಮಿಕ ಯೋಜನೆಯ ತಾಲೂಕು ಮಟ್ಟದ ಟಾಸ್ಕ್‌ ಫೋರ್ಸ್‌ ಸಮಿತಿ ಸಭೆ ಹಾಗೂ ಕಂಓ-ಋಆಋ ಖಛಿಣಜ ್ಘ ಖಜಚಿಛಟಣಚಿಣಠ ಅಚಿಟಠಿಚಿರಟಿ ಠ ಅಟಜ ಚಿಟಿಜ ಂಜಠಛಿಜಟಿಣ ಐಚಿಛಠಡಿ ರಕ್ಷಣಾ ಕಾರ್ಯಾಚರಣೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಟಾಸ್ಕ್‌ ಫೋರ್ಸ್‌ ಸಮಿತಿ ರಚನೆ ಮಾಡಿದ್ದು, ತಂಡದ ಎಲ್ಲಾ ಅಧಿಕಾರಿಗಳು ತಮ್ಮ ತಮ್ಮ ಕಾರ್ಯವ್ಯಾಪ್ತಿಯಲ್ಲಿ ಕಂಡು ಬಂದ ಬಾಲಕಾರ್ಮಿಕ/ಕಿಶೋರ ಕಾರ್ಮಿಕ ಮಕ್ಕಳ ದಾಖಲೆಗಳನ್ನು ಪಡೆದುಕೊಂಡು ಪರೀಶೀಲಿಸಿ, ಸಮೀಪದ ಶಾಲೆಗಳಿಗೆ ದಾಖಲಿಸುವುದರ ಮೂಲಕ ಮುಖ್ಯ ವಾಹಿನಿಗೆ ತರಬೇಕು. ಹಾಗೂ ಪುನರ್ವಸತಿ ಅವಶ್ಯಕತೆ ಇರುವ ಮಕ್ಕಳನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸುವುದರ ಮೂಲಕ ಪುನರ್ವಸತಿ ಕಲ್ಪಿಸಬೇಕು. ಕಾರ್ಯಾಚರಣೆಗೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.  ಯೋಜನಾ ನಿರ್ದೇಶಕರಾದ ಬಸವರಾಜ ಹಿರೇಗೌಡ್ರ ರವರು ಮಾತನಾಡಿ ಇಲಾಖೆಯ ಕೆಲಸದ ಜೊತೆಗೆ ಬಾಲಕಾರ್ಮಿಕರನ್ನು ಗುರುತಿಸುವ ಕೆಲಸ ಕೂಡಾ ಎಲ್ಲಾ ಅಧಿಕಾರಿಗಳ ಜವಾಬ್ದಾರಿಯಾಗಿದೆ. 14 ವರ್ಷದೊಳಗಿನ ಯಾವುದೇ ಮಕ್ಕಳು ಯಾವುದೇ ವೃತ್ತಿಯಲ್ಲಿ ಕೆಲಸ ನಿರ್ವಹಿಸುವುದು ಮತ್ತು 14 ರಿಂದ 18 ವರ್ಷದೊಳಗಿನ ಮಕ್ಕಳು ಅಪಾಯಕಾರಿ ವೃತ್ತಿಯಲ್ಲಿ ಮತ್ತು ಪ್ರಕ್ರಿಯೆಗಳಲ್ಲಿ ಕೆಲಸ ಮಾಡುವುದನ್ನು ನಿಷೇಧಿಸಲಾಗಿದೆ. ಆ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ನಿರಂತರ ಬಾಲಕಾರ್ಮಿಕರ ತಪಾಸಣೆ ನಡೆಸಿ ತಾಲೂಕು ಆಡಳಿತಕ್ಕೆ ನಿಯಮಿತವಾಗಿ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಕೊಪ್ಪಳದ ಕಾರ್ಮಿಕ ನೀರೀಕ್ಷಕರಾದ ಮಂಜುಳಾ, ಬಾಲಕಾರ್ಮಿಕ ಯೋಜನಾ ನಿರ್ದೇಶಕರಾದ ಬಸವರಾಜ ಹಿರೇಗೌಡ್ರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ತಾಲೂಕು ಹಿಂದುಳಿದ ವರ್ಗಗಳ ಅಲ್ಪಸಂಖ್ಯಾತರ ಇಲಾಖೆ, ಕೊಪ್ಪಳ, ಮಕ್ಕಳ ಸಹಾಯವಾಣಿ-1098 ಸಿಬ್ಬಂದಿ, ನಗರ ಪೋಲಿಸ್ ಠಾಣೆ ಸಿಬ್ಬಂದಿಗಳು ಸೇರಿದಂತೆ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು. ವಿವಿಧ ವಾಣಿಜ್ಯ ಸಂಸ್ಥೆಗಳ ಪರೀಶೀಲನೆ: ಸಭೆಯ ನಂತರ ಕೊಪ್ಪಳ ನಗರದಲ್ಲಿ ಎಲ್ಲಾ ಅಧಿಕಾರಿಗಳ ತಂಡವು ವಿವಿಧ ವಾಣಿಜ್ಯ ಸಂಸ್ಥೆಗಳನ್ನು ಪರೀಶೀಲಿಸಿದಾಗ, ಕೊಪ್ಪಳದ ಮರ್ದಾನ್ ಅಲಿ ವೆಲ್ಡಿಂಗ್ ಗ್ಯಾರೇಜ್ ನಲ್ಲಿ ಸೈಯದ್ ತೌಸಿಫ್ ಹುಸೇನ್ ಎಂಬ ಮಗು, ಬಾಬಾ ಖಲಂದರ್, ಆಟೋ ವೆಲ್ಡಿಂಗ್ ವರ್ಕ್ಸ್‌ ನಲ್ಲಿ ಅಮನ್ ತಂದೆ ಬಾಬುಸಾಬ ಎಂಬ ಮಗು ಹಾಗೂ ಪಾಟೀಲ್ ಹೋಂಡಾ ಗ್ಯಾರೇಜ್ ನಲ್ಲಿ ಹನುಮಂತಪ್ಪ ತಂದೆ ಮುಕ್ಕಣ್ಣ ಕೋರಿ ಎಂಬ ಮಕ್ಕಳು ತಲಾ ಒಬ್ಬರಂತೆ 3 ಕಿಶೋರ ಕಾರ್ಮಿಕ ಮಕ್ಕಳು ಪತ್ತೆಯಾಗಿದ್ದು, ಮಕ್ಕಳನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಯಿತು.