ಧಾರವಾಡ 27: ಮಕ್ಕಳು ರಾಷ್ಟ್ರದ ಆಸ್ತಿ. ಅವರ ಸ್ವಚ್ಛಂದ ಜೀವನ ಮತ್ತು ಕಾನೂನಾತ್ಮಕ ಹಕ್ಕುಗಳನ್ನು ದೊರಕಿಸಲು ಸವರ್ೊಚ್ಛ ನ್ಯಾಯಾಲಯ ಸೇರಿದಂತೆ ಅನೇಕ ನ್ಯಾಯಾಲಯಗಳು ಮಹತ್ವದ ಆದೇಶ ನೀಡಿವೆ. ಬಾಲ ನ್ಯಾಯ ಕಾಯ್ದೆ-2015 ರಲ್ಲಿ ಸೂಚಿಸಿರುವ ನಿಯಮಗಳನ್ನು ಮಕ್ಕಳ ಪಾಲನಾ ಸಂಸ್ಥೆಗಳು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಈಶಪ್ಪ ಭೂತೆ ಹೇಳಿದರು.
ಅವರು ಇಂದು ಬೆಳಿಗ್ಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಆವರಣದ ಸಕರ್ಾರಿ ವೀಕ್ಷಣಾಲಯದ ಸಭಾಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕನರ್ಾಟಕ ರಾಜ್ಯ ಸಮಗ್ರ ಮಕ್ಕಳ ರಕ್ಷಣಾ ಸೊಸೈಟಿ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಂಯುಕ್ತವಾಗಿ ಆಯೋಜಿಸಿದ್ದ, ಮಕ್ಕಳ ಪಾಲನಾ ಸಂಸ್ಥೆಗಳ ಮುಖ್ಯಸ್ಥರಿಗೆ ಹಾಗೂ ಸಿಬ್ಬಂದಿಗಳಿಗೆ ಸಾಮಾಜಿಕ ತನಿಖಾ ವರದಿ ಮತ್ತು ವೈಯಕ್ತಿಕ ಪಾಲನಾ ಯೋಜನೆ ತಯಾರಿಸುವ ಕುರಿತು ಒಂದು ದಿನದ ತರಬೇತಿ ಕಾಯರ್ಾಗಾರ ಉದ್ಘಾಟಿಸಿ ಮಾತನಾಡಿದರು. ಮಕ್ಕಳ ಪಾಲನಾ ಸಂಸ್ಥೆಗಳು ಪ್ರತಿ ಮಗುವನ್ನು ಸ್ವಂತ ಮಕ್ಕಳಂತೆ ಪ್ರೀತಿ, ವಿಶ್ವಾಸದಿಂದ ಕಾಣಬೇಕು. ಅವರಲ್ಲಿರುವ ಸೂಕ್ತ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಬೇಕು. ಪಾಲನಾ ಸಂಸ್ಥೆಗಳಲ್ಲಿ ಪೋಷಿಸಲ್ಪಟ್ಟ ಮಕ್ಕಳನ್ನು ಸಮಾಜದ ಮುಖ್ಯ ವಾಹಿನಿಗೆ ತರಬೇಕು. ಇದು ನೈತಿಕ ಜವಾಬ್ದಾರಿ. ಜೊತೆಗೆ ಕಾನೂನಾತ್ಮಕ ಕರ್ತವ್ಯವೂ ಆಗಿದೆ.
ಮಕ್ಕಳ ಪಾಲನಾ ಕೇಂದ್ರಗಳಲ್ಲಿ ಮನೆಯ ವಾತಾವರಣ ಇರಬೇಕು. ಮಕ್ಕಳು ದೈಹಿಕ, ಮಾನಸಿಕ ಮತ್ತು ನೈತಿಕವಾಗಿ, ಸಂಸ್ಕಾರಯುತವಾಗಿ ಬೆಳೆಯಬೇಕು. ಯಾವುದೇ ಫಲಾಪೇಕ್ಷೆ ಇಲ್ಲದೆ ಸಕರ್ಾರೇತರ ಸಂಸ್ಥೆಗಳು, ಇಲಾಖೆಗಳು ಇಂತಹ ಸಮಾಜಮುಖಿಯಾದ ಸಾರ್ಥಕ ಸೇವೆ ಸಲ್ಲಿಸಬೇಕು. ಬಾಲನ್ಯಾಯ (ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015 ರ ನಿಯಮಾವಳಿಗಳನ್ನು ಉಲ್ಲಂಘಿಸಿದರೆ ಮತ್ತು ಮಕ್ಕಳ ಹಕ್ಕುಗಳ ಕುರಿತು ಬಂದಿರುವ ಸುಪ್ರೀಂಕೋಟರ್್ ಆದೇಶವನ್ನು ಕಡ್ಡಾಯವಾಗಿ ಪಾಲಿಸದಿದ್ದರೆ ಅಂತಹ ಪಾಲನಾ ಕೇಂದ್ರಗಳ ವಿರುದ್ಧ ಶಿಸ್ತುಕ್ರಮ ಜರುಗಿಸುವ ಎಚ್ಚರಿಕೆಯನ್ನು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ನೀಡಿದರು.
ಮುಖ್ಯ ಅತಿಥಿಗಳಾಗಿದ್ದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶರ್ಿ ಅರ್.ಎಸ್. ಚಿಣ್ಣನ್ನವರ ಮಾತನಾಡಿ, ಪಾಲನಾ ಕೇಂದ್ರಗಳಲ್ಲಿ ಆಶ್ರಯ ಪಡೆಯುವ ಮಕ್ಕಳಲ್ಲಿನ ಅಭದ್ರತೆ ಹೋಗಲಾಡಿಸಿ ಅವರಲ್ಲಿ ಆತ್ಮಸ್ಥೈರ್ಯ, ಜೀವನ ಕೌಶಲ್ಯಗಳ ತರಬೇತಿ ನೀಡಬೇಕು. ಸ್ವಂತ ಮಕ್ಕಳಂತೆ ಬೆಳೆಸಿ ಆರೈಕೆ ಮಾಡಿದರೆ ಮಾತ್ರ ಮಕ್ಕಳ ಪಾಲನಾ ಕೇಂದ್ರದ ಉದ್ದೇಶ ಈಡೇರುತ್ತದೆ ಎಂದು ಹೇಳಿದರು.
ಅತಿಥಿಗಳಾಗಿದ್ದ ಧಾರವಾಡ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಅಶೋಕ ಯರಗಟ್ಟಿ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿದರ್ೆಶಕಿ ಡಾ.ಹೆಚ್.ಹೆಚ್. ಕುಕನೂರ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನ್ನಪೂರ್ಣ ಸಂಗಳದ ಪ್ರಾಸ್ತಾವಿಕವಾಗಿ ಮಾತನಾಡಿ, ಧಾರವಾಡ ಜಿಲ್ಲೆಯಲ್ಲಿ 5 ಸಕರ್ಾರಿ ಮತ್ತು 24 ಸಕರ್ಾರೇತರ ಸಂಸ್ಥೆಗಳು ನಡೆಸುವ ಮಕ್ಕಳ ಪಾಲನಾ ಸಂಸ್ಥೆಗಳಿವೆ. ಒಟ್ಟು 29 ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸುಮಾರು 1300 ಮಕ್ಕಳ ವಾಸಿಸುತ್ತಿದ್ದಾರೆ. ಮಕ್ಕಳ ರಕ್ಷಣಾ ಘಟಕದಿಂದ ಸಂಸ್ಥೆಗಳ ಕಾಯ್ದೆ ಮತ್ತು ಮಕ್ಕಳ ಪೋಷಣೆ ರಕ್ಷಣೆ ಕುರಿತು ಖಾತ್ರಿಪಡಿಸಿಕೊಳ್ಳಲು ಕಾಲಕಾಲಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ. ಮತ್ತು ಸೂಕ್ತ ನಿದರ್ೆಶನ ನೀಡಲಾಗಿದೆ. ಮಕ್ಕಳ ಸಮಗ್ರ ಬೆಳವಣಿಗೆಗೆ ಅಗತ್ಯವಿರುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತದೆ. ಮಕ್ಕಳಲ್ಲಿ ಉತ್ತಮ ವ್ಯಕ್ತಿತ್ವ, ಶಿಕ್ಷಣ, ಜೀವನ ಕೌಶಲ್ಯ, ಆರೋಗ್ಯ ಕುರಿತು ಹೆಚ್ಚಿನ ಗಮನ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.
ತರಬೇತಿ ಕಾಯರ್ಾಗಾರದಲ್ಲಿ ಕೊಪ್ಪಳ ಯುನಿಸೆಫ್ ಮಕ್ಕಳ ರಕ್ಷಣಾ ಘಟಕದ ಸಂಯೋಜನಾಧಿಕಾರಿ ಹರೀಶ ಜೋಗಿ, ಬೆಳಗಾವಿ ಜಿಲ್ಲಾ ಮಕ್ಕಳ ರಕ್ಷಣಾ ಘಟಿಕದ ಜೆ.ಟಿ. ಲೋಕೇಶ್ವರಪ್ಪ, ಹಾವೇರಿ ಘಟಕದ ವಿನಯ ಗುಡಗೂರ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಕ್ಕಳ ಪಾಲನೆ, ಪೋಷಣೆ, ರಕ್ಷಣೆ, ಬಾಲನ್ಯಾಯ ಕಾಯ್ದೆ-2015 ಸಮಾಜ ಮತು ಸಕರ್ಾರದ ಪಾತ್ರ ಮತ್ತು ಜವಾಬ್ದಾರಿ ಕುರಿತು ವಿಶೇಷ ಉಪನ್ಯಾಸ ನೀಡಿದರು. ಶ್ವೇತಾ ಕಿಲ್ಲೇದಾರ ಪ್ರಾಥರ್ಿಸಿದರು, ನಿಂಗಪ್ಪ ಮಡಿವಾಳರ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರಕಾಶ ಕೊಡ್ಲಿವಾಡ ವಂದಿಸಿದರು.