ಮಕ್ಕಳ ದಿನಾಚರಣೆ: ಪಾಲಕರ ಪೋಷಕರ ಶಿಕ್ಷಕರ ಸಭೆ
Children's Day: Parents-Teachers Meeting
ಕೊಪ್ಪಳ 14: ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಕಾನೂನು ಮಹಾವಿದ್ಯಾಲಯ ಕೊಪ್ಪಳ. ಕಾನೂನು ವಿದ್ಯಾರ್ಥಿಗಳಿಂದ ಮಂಗಳೂರು ಗ್ರಾಮದಲ್ಲಿ ಜಿಲ್ಲಾ ಪಂಚಾಯತಿ ಕೊಪ್ಪಳ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಯಲಬುರ್ಗಾ, ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಮಂಗಳೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ಹಾಗೂ ಪಾಲಕರ ಪೋಷಕರ ಶಿಕ್ಷಕರ ಮಹಾಸಭೆ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಉಚಿತವಾಗಿ ಕಾನೂನು ಸಲಹೆ ಕಾರ್ಯಗಾರ ನೀಡಿದರು. ವಿದ್ಯಾರ್ಥಿ ಸಂಕಲ್ಪ ಮಾತನಾಡಿ 2012 ರ ಪೋಕ್ಸೋ ಕಾನೂನನ್ನು ಪ್ರತಿಯೊಬ್ಬರು ಅರಿತುಕೊಳ್ಳಬೇಕು, ಮಹಿಳೆಯರ ಮೇಲೆ ನಡೆತಕ್ಕಂಥ ದೌರ್ಜನ್ಯವನ್ನು ತಡೆಗಟ್ಟುವ ಸಲುವಾಗಿ ಈ ಒಂದು ಕಾಯ್ದೆಯನ್ನು ಜಾರಿಗೆಗೊಳಿಸಲಾಗಿದೆ.
ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ಅತ್ಯಾಚಾರ ಹಾಗೂ ಇನ್ನಿತರ ಕಾನೂನುಬಾಹಿರ ಚಟುವಟಿಕೆಗಳಿಂದ ನಡೆದುಕೊಂಡರೆ ಅವರಿಗೆ ಕಾನೂನುಡಿಯಲ್ಲಿ ಶಿಕ್ಷೆಯನ್ನು ವಿಧಿಸಲಾಗುವುದು, ತಮಗೆ ಸ್ಥಳೀಯವಾಗಿ ಸಂಬಂಧಪಟ್ಟಂತಹ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಾಹಿತಿಯನ್ನು ತಿಳಿಸಬೇಕು, ಅದಕ್ಕಿಂತ ಮುಂಚಿತವಾಗಿ ನಾವೆಲ್ಲರೂ ಕಾನೂನಿನ ಮಹತ್ವವನ್ನು ತಿಳಿದುಕೊಳ್ಳಬೇಕು. ಪೋಕ್ಸೋ ಕಾಯ್ದೆ ಅಡಿ ಶಿಕ್ಷೆಗೆ ಒಳಗಾಗದದರೆ ಕನಿಷ್ಠ 20 ವರ್ಷ ಜೈಲು ಶಿಕ್ಷೆ ಹಾಗೂ ದಂಡವನ್ನು ವಿಧಿಸಬಹುದಾಗಿದೆ ಆದ್ದರಿಂದ ಶಾಲೆ ಮತ್ತು ಕಾಲೇಜಿನ ಹಂತದಲ್ಲಿ ಪೋಕ್ಸೋ ಕಾಯ್ದೆಯ ಕುರಿತು ಮಾಹಿತಿಯನ್ನು ತಿಳಿದುಕೊಳ್ಳುವುದು ಉತ್ತಮವಾಗಿದೆ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಶಿಕ್ಷಕ ಬಳಗದವರು, ಶಾಲೆಯ ಆಡಳಿತ ಮಂಡಳಿಯವರು, ಎಸ್ ಡಿ ಎಮ್ ಸಿ ಯ ಸದಸ್ಯರುಗಳು, ಗ್ರಾಮದ ಗುರುಹಿರಿಯರು ಪಾಲಕರು ಸಂಘ ಸಂಸ್ಥೆಯ ಪದಾಧಿಕಾರಿಗಳು ಒಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 