ಮಕ್ಕಳ ಪ್ರತಿಭೆ ಅನಾವರಣಗೊಳ್ಳಬೇಕು: ಸಿಇಓ ಡಾ.ದೀಲೀಷ್ ಶಶಿ
Children's talents should be revealed: CEO Dr. Dileesh Shashi
ಕಾರವಾರ, ನ.12: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಅನಾವರಣ ಮಾಡಲು ಅವರಿಗೆ ಹೆಚ್ಚಿನ ಅವಕಾಶಗಳು ದೊರೆಯಬೇಕು ಮತ್ತು ಇಂತಹ ಅವಕಾಶಗಳನ್ನು ಬಳಸಿಕೊಂಡು ಮಕ್ಕಳು ತಮ್ಮಲ್ಲಿನ ಅದ್ಭುತವಾದ ಪ್ರತಿಭೆಯನ್ನು ಪ್ರದರ್ಶನ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ದೀಲೀಷ್ ಶಶಿ ಹೇಳಿದರು.
ಅವರು ಮಂಗಳವಾರ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸ್ತ್ರೀ ಶಕ್ತಿ ಭವನದಲ್ಲಿ ನಡೆದ 2025-26 ನೇ ಸಾಲಿನ ಮಕ್ಕಳ ದಿನಾಚರಣೆ ಅಂಗವಾಗಿ ಹಾಗೂ ಜಿಲ್ಲೆಯಿಂದ ರಾಜ್ಯ ಮಟ್ಟದ ಕಲಾಶ್ರೀ ಪ್ರಶಸ್ತಿ ಆಯ್ಕೆಗಾಗಿ ನಡೆದ ವಿವಿಧ ಚಟುವಟಿಕೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ಸಾಧನೆ ಮಾಡುವ ಕ್ಷೇತ್ರದಲ್ಲಿ ಮಕ್ಕಳು ಅಷ್ಟೇ ಅಲ್ಲದೆ ಅವರ ಪಾಲಕರು ಶ್ರಮವೂ ಇರುತ್ತದೆ. ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ತಮಗೆ ದೊರೆಯುವ ವೇದಿಕೆಗಳನ್ನು ಬಳಸಿಕೊಂಡು ಸ್ಪರ್ಧಾ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಿ.ಎಚ್. ಕೃಷ್ಣಪ್ಪ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ವಿರೂಪಾಕ್ಷಗೌಡ ಪಾಟೀಲ್, ಹಿರಿಯ ಸಹಾಯ ನಿರ್ದೇಶಕ ಕುಮಾರ್, ಬಾಲಭವನ ಕಾರ್ಯಕ್ರಮ ಸಂಯೋಜಕಿ ಅಪೇಕ್ಷಾ ಶಿರೋಡಕರ, ಪ್ರೀತಿ ನಾಯ್ಕ್ ಬಾಲಭವನ ಕಚೇರಿ ಸಹಾಯಕರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧೀಕ್ಷಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸೃಜನಾತ್ಮಕ ಕಲೆ ಸ್ಪರ್ಧೆಯಲ್ಲಿ ಅಮೂಲ್ಯ ಖಾರ್ವಿ (ಪ್ರಥಮ), ಪ್ರಜ್ವಲ್ ಪಿ ಶೇಟ್ (ದ್ವಿತಿಯ) ಸೃಜನಾತ್ಮಕ ಬರವಣಿಗೆ ಸ್ಪರ್ಧೆಯಲ್ಲಿ ಚೈತ್ರಾ ನಾಯ್ಕ (ಪ್ರಥಮ) ರಿಶಿಕಾ ಗಾಂವಕರ (ದ್ವಿತಿಯ) ವಿಜ್ಞಾನದಲ್ಲಿ ನೂತನ ಆವಿಷ್ಕಾರ ಸ್ಪರ್ಧೆಯಲ್ಲಿ ಜೈ ವಿ ರೇವಣಕರ (ಪ್ರಥಮ) ಬ್ಲೆಸ್ಟನ ಫನಾಂರ್ಡಿಸ್ (ದ್ವಿತಿಯ) ಸೃಜನ್ಮಾತಕ ಪ್ರದರ್ಶನ ಕಲೆ ಸ್ಪರ್ಧೆಯಲ್ಲಿ ಪೂರ್ವಿ ಶೈಲೇಂದ್ರ ಶೆಟ್ಟಿಗಾರ (ಪ್ರಥಮ) ಆರ್ಯ ವಿನಾಯಕ ಹೆಗಡೆ (ದ್ವಿತಿಯ) ಬುಡಕಟ್ಟು ಸ್ಪರ್ಧೆಯಲ್ಲಿ ನೀರೀಕ್ಷಾ ಸಿದ್ದಿ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 