ಆರರಿಂದ 14 ವರ್ಷದೊಳಗಿನ ಮಕ್ಕಳು ಶಾಲೆಯಲ್ಲಿರಬೇಕು-ಶೇಖರಗೌಡ ರಾಮತ್ನಾಳ
Children between the ages of six and 14 should be in school - Shekhar Gowda Ramatnal
ಹಾವೇರಿ 23 : ಮಕ್ಕಳು ದೇಶದ ಸಂಪತ್ತು, ಇಂದಿನ ಮಕ್ಕಳೇ ಇಂದಿನ ಪ್ರಜೆಗಳು. ಆರರಿಂದ ರಿಂದ 14 ವರ್ಷದ ಮಕ್ಕಳು ಕಡ್ಡಾಯವಾಗಿ ಶಾಲೆಯಲ್ಲಿರಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಜಿ. ರಾಮತ್ನಾಳ ಹೇಳಿದರು.
ಹಾವೇರಿ ನಗರದ ಕೆಎಲ್‌ಇ ಆಂಗ್ಲಮಾಧ್ಯಮ ಶಾಲೆಯಲ್ಲಿ ಇತ್ತೀಚಿಗೆ ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಸುರಕ್ಷತೆ, ಶಾಲೆಯಿಂದ ಹೊರಗುಳಿದ ಮಕ್ಕಳ ಕುರಿತು ಮತ್ತು ಪೊಕ್ಸೋ ಕಾಯ್ದೆ ಅನುಷ್ಠಾನದ ಕುರಿತು ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮ ಹಾಗೂ ಆರ್.ಟಿ.ಇ ಕಾಯ್ದೆ ಕುರಿತು ಅಹವಾಲು ಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ಹಕ್ಕುಗಳ ಒಡಂಬಡಿಕೆಗೆ 1989ರಲ್ಲಿ 189 ರಾಷ್ಟ್ರಗಳು ಸಹಿ ಮಾಡಿದ್ದು, ನಂತರ 1992ರಲ್ಲಿ ಭಾರತ ದೇಶವು ನಾವು ಮಕ್ಕಳ ಹಕ್ಕುಗಳ ರಕ್ಷಣೆಗೆ ಬದ್ಧರಾಗಿದ್ದೇವೆಂದು ಸಹಿ ಮಾಡಿತು. ಮಕ್ಕಳಿಗೆ ಅನೇಕ ಕಾಯ್ದೆಗಳು ಜಾರಿಗೆ ಬಂದಿದ್ದು, ಅದರಲ್ಲಿ ಬಾಲನ್ಯಾಯ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ, ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳಿಂದ ಸಂರಕ್ಷಣೆ ಕಾಯ್ದೆ-2012, ಆರ್.ಟಿ.ಇ ಕಾಯ್ದೆ-2009 ಕಾಯ್ದೆಗಳಿವೆ ಎಂದು ಹೇಳಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶ್ರೀಮತಿ ಜಯಶ್ರೀ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಪೊಕ್ಸೋ, ಬಾಲ್ಯವಿವಾಹದಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು, ನಾಳೆ ಮದುವೆ ಇದೆ ಎಂದಾಗ ಹಿಂದಿನ ದಿನ ಮಕ್ಕಳ ಸಹಾಯವಾಣಿ-1098ಕ್ಕೆ ಕರೆ ಬರುತ್ತದೆ. ಇದರಿಂದ ಬಾಲ್ಯವಿವಾಹವನ್ನು ತಡೆಗಟ್ಟುವಲ್ಲಿ ಬಹಳ ತೊಂದರೆಯಾಗುತ್ತದೆ. ಆಧ್ದರಿಂದ ಮುಂಚಿತವಾಗಿ 1098ಕ್ಕೆ ಮಾಹಿತಿ ನೀಡಬೇಕು. ಜಿಲ್ಲೆಯಲ್ಲಿ ಬಾಲ್ಯವಿವಾಹ ಮತ್ತು ಪೊಕ್ಸೋ ಪ್ರಕರಣಗಳನ್ನು ಕಡಿಮೆ ಮಾಡೋಣ ಎಂದು ಹೇಳಿದರು.
ಅನಾಥ ಮತ್ತು ಏಕಪೋಷಕ ಮಕ್ಕಳಿಗೆ ಪಾಲನೆ ಮತ್ತು ರಕ್ಷಣೆ ಅಗತ್ಯವಿರುವ ಮಕ್ಕಳಿದ್ದಲ್ಲಿ, ಅಂತಹ ಮಕ್ಕಳನ್ನು ಬಾಲಮಂದರಿಗಳಿಗೆ ದಾಖಲಿಸುತ್ತೇವೆ. ಮಕ್ಕಳಿಗೆ ಶಾಲೆಯಲ್ಲಿ ಅಥವಾ ಶಾಲೆಗೆ ಹೋಗುವಾಗ ಮತ್ತು ಬರುವಾಗ ಏನಾದರೂ ತೊಂದರೆ ಆದಲ್ಲಿ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಬೇಕು ಎಂದು ಹೇಳಿದರು.
ವಿವಿಧ ಶಾಲೆಗಳಿಂದ ಮಕ್ಕಳು ಮತ್ತು ಶಾಲಾ ಶಿಕ್ಷಕರು ಹಾಗೂ ಆರ್.ಟಿ.ಇ ಕಾರ್ಯಕರ್ತರು, ಎಸ್.ಡಿ.ಎಮ್.ಸಿ ಅಧ್ಯಕ್ಷರು/ಸದಸ್ಯರು, ಮಕ್ಕಳ ಪಾಲಕರು ಭಾಗವಹಿಸಿದ್ದರು. ಹರೀಶ ಜೋಗಿ ಕಾರ್ಯಕ್ರಮ ಯೋಜನಾ ವ್ಯವಸ್ಥಾಪಕರು, ಯುನಿಸೇಫ್ ಕೊಪ್ಪಳ ಇವರು ಉಪನ್ಯಾಸಕರಾಗಿ ಆಗಮಿಸಿ ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಸುರಕ್ಷತೆ, ಶಾಲೆಯಿಂದ ಹೊರಗುಳಿದ ಮಕ್ಕಳ ಕುರಿತು ಮತ್ತು ಪೊಕ್ಸೋ ಕಾಯ್ದೆ ಅನುಷ್ಠಾನದ ಕುರಿತು ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮ ಹಾಗೂ ಆರ್.ಟಿ.ಇ ಕಾಯ್ದೆ ಕುರಿತು ಉಪನ್ಯಾಸವನ್ನು ನೀಡಿದರು.
ಅಹವಾಲು ಸ್ವೀಕಾರ: ಆರ್.ಟಿ.ಇ ಕಾಯ್ದೆ-2009ರ ಕುರಿತು ಮಕ್ಕಳಿಂದ ಅಹವಾಲು ಸ್ವೀಕಾರ ಸ್ವೀಕರಿಸಲಾಯಿತು. 1 ರಿಂದ 10ನೇ ತರಗತಿಯವರಿಗೆ ಆರ್. ಟಿ, ಇ ಸೌಲಭ್ಯವನ್ನು ಮುಂದುವರೆಸುವಂತೆ ಹಾಗೂ 8ನೇ ತರಗತಿಯಲ್ಲಿ ಓದುತ್ತಿದ್ದ ಮಗು ಆರ್ಥಿಕ ಪರಿಸ್ಥಿತಿಯಿಂದ ತುಂಬಾ ಬಡವರಾಗಿರುವುರಿಂದ 9 ಮತ್ತು 10ನೇ ತರಗತಿಗೆ ಮುಂದುವರೆಸುವಂತೆ ಮನವಿ ಮಾಡಿದ ಹಿನ್ನಲೆಯಲ್ಲಿ, ಈ ವಿಷಯವನ್ನು ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಹಾಗೂ ಖಾಸಗಿ ಸಂಸ್ಥೆಯವರು ಮಾನವೀಯತೆಯಿಂದ ಇಂತಹ ಮಕ್ಕಳಿಗೆ ಅದೇ ಶಾಲೆಯಲ್ಲಿ ಶಿಕ್ಷಣ ಮುಂದುವರೆಸಲು ಅವಕಾಶ ಒದಗಿಸುವಂತೆ ಆಯೋಗದ ಸದಸ್ಯರು ಸೂಚಿಸಿದರು.
ಆರ್. ಟಿ, ಇ ಮಕ್ಕಳಿಗೆ ಮತ್ತು ಇತರೆ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂಬ ಮನವಿ ಹಿನ್ನಲೆಯಲ್ಲಿ, ಯಾವುದೇ ಖಾಸಗಿ ಶಾಲೆಗಳಲ್ಲಿ ಹೀಗೆ ಮಾಡುವುದು ಕಂಡುಬಂದಲ್ಲಿ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು.
ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಪರಮೇಶ ಹುಬ್ಬಳ್ಳಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಶ್ರೀಮತಿ ಗೀತಾ ಪಾಟೀಲ, ಮಹಿಳಾ ಪೊಲೀಸ್ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್‌ಸಿದ್ದಾರೋಡ ಬಡಿಗೇರ, ಬಿ. ಆರ್. ಸಿ ಸಂಯೋಜಕ ಮಹದೇವಪ್ಪ ಎಮ್. ಡಿ, ಕೆಎಲ್‌ಇ ಆಂಗ್ಲಮಾಧ್ಯಮ ಶಾಲೆ ಪ್ರಾಚಾರ್ಯರಾದ ಸ್ವಪ್ನಾ ಲೋಬೋ ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಮ್. ಹೆಚ್. ಪಾಟೀಲ ಸ್ವಾಗತಿಸಿದರು. ಶಿಕ್ಷಣ ಸಂಯೋಜಕ ಎಸ್.ಆರ್. ಹಿರೇಮಠ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 