ಮಕ್ಕಳಿಗೆ ಮೌಲ್ಯಯುತ ಶಿಕ್ಷಣದ ಅಗತ್ಯವಿದೆ : ಲಿಂಗಯ್ಯ ಹಿರೇಮಠ
Children need valuable education: Lingaiah Hiremath
ಶಿಗ್ಗಾವಿ 28 : ಜಾತಿ, ಧರ್ಮಗಳ ಹೆಸರಿನಲ್ಲಿ ಕಲುಷಿತವಾಗುತ್ತಿರುವ ಇಂದಿನ ಆಧುನಿಕತೆಯ ಭರಾಟೆಯ ವಾತಾವರಣದಲ್ಲಿ ಮಕ್ಕಳಿಗೆ ಮೌಲ್ಯಯುತ ಶಿಕ್ಷಣದ ಅಗತ್ಯವಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಲಿಂಗಯ್ಯ ಬಿ.ಹಿರೇಮಠ ಹೇಳಿದರು.ತಾಲೂಕಿನ ಮುಗಳಿ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಪ್ರೌಢಶಾಲೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಜರುಗಿದ ದತ್ತಿ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಇಂದಿನ ತಾಂತ್ರಿಕ ಯುಗದಲ್ಲಿ ಇಂಗ್ಲಿಷ್ ಭಾಷಾ ಮೋಹ ಹೆಚ್ಚುತ್ತಿರುವ ಸಂದರ್ಭದಲ್ಲಿ ಕನ್ನಡ ಭಾಷೆಗೆ ಹೆಚ್ಚು ಒತ್ತು ಕೊಡಲು ಹಲವು ಕಾರ್ಯಕ್ರಮಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸುತ್ತಿದೆ.
1915 ರಲ್ಲಿ ಆರಂಭವಾದ ಕನ್ನಡ ಸಾಹಿತ್ಯ ಪರಿಷತ್ತು ಬೇರೆಡೆ ಹಂಚಿಹೋಗಿದ್ದ ರಾಜ್ಯವನ್ನು ಏಕೀಕೃತಗೊಳಿಸಲು ಶ್ರಮಿಸಿದೆ. ಕನ್ನಡ ಸಾಹಿತ್ಯ ಮತ್ತು ಸಂಶೋಧನಾ ಕ್ಷೇತ್ರವನ್ನು ಪ್ರೋತ್ಸಾಹಿಸಲು ವಿನೂತನ ಯೋಜನೆಗಳನ್ನು ರೂಪಿಸುವುದರ ಜೊತೆಗೆ ಕನ್ನಡ ಭಾಷೆ, ನಾಡು ನುಡಿಯ ರಕ್ಷಣೆಗೆ ಕನ್ನಡ ಸಾಹಿತ್ಯ ಪರಿಷತ್ತು ಸದಾ ಮುಂಚೂಣಿಯಲ್ಲಿ ಇರುತ್ತದೆ ಎಂದು ಹೇಳಿದರು. ಸಾನ್ನಿಧ್ಯ ವಹಿಸಿದ್ದ ಶಿಗ್ಗಾವಿ ವಿರಕ್ತಮಠದ ಸಂಗನಬಸವ ಮಹಾಸ್ವಾಮೀಜಿ ಮಾತನಾಡಿ ಇಂಗ್ಲಿಷ್ ಭಾಷೆ ಮತ್ತು ಹಣದ ಮೋಹಗಳಿಂದ ಹೊರಬಂದು ಸಾಹಿತ್ಯಿಕ ಆಸಕ್ತಿ ಬೆಳೆಸಿಕೊಳ್ಳಬೇಕು.
ನಮ್ಮ ದೇಶದಲ್ಲಿ ಅನೇಕ ಭಾಷೆಗಳಿವೆ. ಅವುಗಳ ಪೈಕಿ ಅತಿ ಹೆಚ್ಚು ಜ್ಞಾನಪೀಠ ಪುರಸ್ಕೃತರು ಕನ್ನಡಿಗರು ಎಂಬುದು ಅಭಿಮಾನದ ಸಂಗತಿ ಎಂದರು.ದತ್ತಿ ದಾನಿ ಮಲ್ಲಪ್ಪ ರಾಮಗೇರಿ ಮಾತನಾಡಿ, ಮಕ್ಕಳಿಗೆ ಮಾತೃಭಾಷೆಯಲ್ಲಿ ಶಿಕ್ಷಣ ನೀಡಿದರೆ ಸಾಧಕರಾಗುತ್ತಾರೆ. ಮಕ್ಕಳು ಸ್ಪಷ್ಟ ಗುರಿ ಮತ್ತು ಆತ್ಮವಿಶ್ವಾಸದಿಂದ ಮುನ್ನಡೆಯಬೇಕು. ಚಂಚಲ ಮನಸ್ಸಿನಿಂದ ಬಳಲದೇ ಗುರುಗಳ ಮಾರ್ಗದರ್ಶನದಲ್ಲಿ ಮುಂದುವರೆಯಬೇಕು. ಆಗ ಮಾತ್ರ ಹೆತ್ತವರಿಗೆ ಹಾಗೂ ಕಲಿಸಿದ ಗುರುಗಳಿಗೆ ಗೌರವ ತಂದುಕೊಟ್ಟಂತಾಗುತ್ತದೆ ಎಂದರು.ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷ ನಾಗಪ್ಪ ಬೆಂತೂರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಲ್ಲಪ್ಪ ಪತ್ನಿ ಚನ್ನಬಸಮ್ಮ ರಾಮಗೇರಿ, ಶಿವಪ್ಪ ಫಕ್ಕೀರ್ಪ ಬಸರಿಕಟ್ಟಿ ಹಾಗೂ ವಸಂತ ಕಲ್ಲಪ್ಪ ಹಿತ್ತಲಕೇರಿ ಸ್ಮರಣಾರ್ಥ ದತ್ತಿ ಉಪನ್ಯಾಸದಲ್ಲಿ ಮಗು ಮತ್ತು ಮೌಲ್ಯ ಶಿಕ್ಷಣ ಕುರಿತು ಎಂ.ಬಿ. ಬೆಟದೂರ ಉಪನ್ಯಾಸ ನೀಡಿದರು.ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ನೋಟ್‌ಬುಕ್ ಹಾಗೂ ಪೆನ್ ವಿತರಿಸಲಾಯಿತು. ಎಸ್.ಡಿ.ಎಂ.ಸಿ ಅಧ್ಯಕ್ಷ ಸೋಮಲಿಂಗಪ್ಪ ಸಕ್ರಿ ಅಧ್ಯಕ್ಷತೆ ವಹಿಸಿದ್ದರು. ದತ್ತಿ ದಾನಿಗಳಾದ ಬಸವರಾಜ ಬಸರಿಕಟ್ಟಿ ಹಾಗೂ ಶಶಿಕಾಂತ ಹಿತ್ತಲಕೇರಿ, ಈಶ್ವರ ಕಾಲವಾಡ, ಗಂಗಣ್ಣ ಪಾಣಿಗಟ್ಟಿ, ಆರ್.ಎಸ್.ಪಾಟೀಲ, ಗದಿಗಯ್ಯ ಕಳಸಗೇರಿಮಠ, ಬಸವರಾಜ ಹೆಸರೂರ, ಚಂದ್ರು ಬಡಿಗೇರ, ಬಸವರಾಜ ಗೊಬ್ಬಿ, ಅನು ರಾಯ್ಕರ್, ಶಶಿಕಾಂತ ರಾಠೋಡ, ರಮೇಶ ಹರಿಜನ, ಸಿದ್ದಪ್ಪ ಮಸಳಿ, ಶಂಕರ ಬಡಿಗೇರ, ಎಸ್.ಡಿಎಂಸಿ ಪದಾಧಿಕಾರಿಗಳು ಹಾಗೂ ಶಿಕ್ಷಕ ಸಿಬ್ಬಂದಿ ಉಪಸ್ಥಿತರಿದ್ದರು.ಎ.ಮೀರಾಬಾಯಿ ಸ್ವಾಗತಿಸಿದರು. ಕಸ್ತೂರೆಮ್ಮ ಗೌರಿಹಳ್ಳಿ ನಿರೂಪಿಸಿದರು. ಗೂಳಪ್ಪ ಅರಳಿಕಟ್ಟಿ ವಂದಿಸಿದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 