ಮಕ್ಕಳಿಗೆ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯ ಬೆಳೆಸಬೇಕು: ಖಾದ್ರಿ
Children should be given education along with human values: Qadri
ಶಿಗ್ಗಾವಿ 13: ಇಂದಿನ ಶೈಕ್ಷಣಿಕ ವ್ಯವಸ್ಥೆಯಲ್ಲಿ, ಬದಲಾವಣೆಗೆ ತಕ್ಕಂತೆ ಮಕ್ಕಳಿಗೆ ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸುವಂತಹ ಕೆಲಸಗಳು ಈ ಕಲಿಕಾ ಹಬ್ಬದ ಮೂಲಕ ಪ್ರಾರಂಭವಾಗಬೇಕು ಎಂದು ಹೆಸ್ಕಾಂ ನಿಗಮದ ಅಧ್ಯಕ್ಷ ಸೈಯದ್ ಅಜಿಮಪೀರ ಖಾದ್ರಿಜಿ ಹೇಳಿದರು. ತಾಲೂಕಿನ ಹುಲಗೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಲಿಕಾ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸಾಧನೆಗೆ ಶಿಕ್ಷಣವೇ ಪ್ರಮುಖವಾಗಿದ್ದು, ಮಕ್ಕಳ ವಿದ್ಯಾಭ್ಯಾಸಕ್ಕೆ ಪಾಲಕರು ಹೆಚ್ಚಿನ ಮಹತ್ವ ಕೊಡಬೇಕೆಂದರು ನಂತರ ಮುದ್ದು ಮಕ್ಕಳ ಜೊತೆಕೆಲ ಹೊತ್ತು ತಮ್ಮ ಬಾಲ್ಯದ ದಿನಗಳನ್ನ ನೆನೆದು ನಂತರ ಸನ್ಮಾನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ಅಂಬಿಗೇರ, ನೌಕರರ ಸಂಘದ ಅಧ್ಯಕ್ಷ ಅರುಣ ಹುಡೇದಗೌಡ್ರ, ಶಾಲಾ ಎಸ್. ಡಿ.ಎಂ. ಸಿ. ಅಧ್ಯಕ್ಷೆ ನಿರ್ಮಲಾ ಹೋನ್ನಣ್ಣವರ, ಮುಕ್ತಿಯಾರ ತಿಮ್ಮಾಪುರ, ರುದ್ರೇಶ ಗುಡಗೇರಿ, ಸುನಿಲ ಲಮಾಣಿ, ಇಸಾಕ್ ಶಿಗ್ಗಾಂವ ಹಾಗೂ ಗ್ರಾಮದ ಮುಖಂಡರು ಸೇರಿದಂತೆ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 