ಶಾಲೆಯಿಂದ ಹೊರಗುಳಿದ ಮಕ್ಕಳು ಮರಳಿ ಶಾಲೆಗೆ ದಾಖಲು
ಧಾರವಾಡ : ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎ.ಖಾಜಿ ಇಂದು ವಿದ್ಯಾಗಿರಿಗೆ ಭೇಟಿ ನೀಡಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಮಾಡಿ ಶಾಲೆಗೆ ಮರಳಿಸಿ ಸೇರಿಸಿದ್ದಾರೆ.
3 ತಿಂಗಳ ಹಿಂದೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೇಶಕರು ಹಾಗೂ ಕ್ಷೇತ್ರ ಶಿಕ್ಷಾಧಿಕಾರಿಗಳು ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಶಾಲೆಗೆ ಸೇರಿಸಿದ್ದರು.
ಆದರೆ ಈ ಮಕ್ಕಳು ಶಾಲೆಗೆ ಗೈರು ಹಾಜರಾದ ಮಾಹಿತಿ ಪಡೆದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಇಂದು ಪುನಃ ಅವರ ವಾಸ ಸ್ಥಳಕ್ಕೆ ಹೋಗಿ ಪಾಲಕರ ಮನವೊಲಿಸಿ ಶಾಲೆಗೆ ಸೇರಿಸುವಲ್ಲಿ ಸಫಲರಾಗಿದ್ದಾರೆ. ಯಾವ ಯಾವ ಶಾಲೆಗಳಲ್ಲಿ ಇಂತಹ ಮಕ್ಕಳು ದಾಖಲಾಗಿದ್ದಾರೊ ಅವರ ಹಾಜರಾತಿ ಖಾತ್ರಿ ಪಡಿಸಲು ಮುಖ್ಯ ಶಿಕ್ಷಕರಿಗೆ ಸೂಚಿಸಿದ್ದಾರೆ. ತಮ್ಮ ಅಧೀನದಲ್ಲಿರುವ ಎಲ್ಲಾ ಶೈಕ್ಷಣಿಕ ಮಲ್ವಿಚಾರಕರಿಗೆ ಇಟ್ಟಂಗಿ ಭಟ್ಟಿ, ಗ್ಯಾರೇಜ್, ಇತರೆ ಸ್ಥಳಗಳಿಗೆ ಭೇಟಿ ನೀಡಲು ಆದೇಶಿದ್ದಾರೆ.