ಲಖನೌ, ಜೂ 9,ಚೀನಾ ಮತ್ತು ನೇಪಾಳ ಗಡಿ ವಿವಾದ ದೇಶದ ಸಾರ್ವಭೌಮತೆಗೆ ಅಪಾಯಕಾರಿ ಎಂದಿರುವ ಬಹುಜನ ಸಮಾಜ ಪಕ್ಷದ (ಬಿಎಸ್ ಪಿ) ಅಧ್ಯಕ್ಷೆ ಮಾಯಾವತಿ, ಈ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ರಾಜಕೀಯ ಮಾಡುವುದನ್ನು ಬಿಟ್ಟು ಎಲ್ಲಾ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.ಮಂಗಳವಾರ ಟ್ವೀಟ್ ಮಾಡಿರುವ ಅವರು, ದೇಶದಲ್ಲಿ ಕೊರೋನಾ ವೈರಸ್ ಸಾಂಕ್ರಾಮಿಕದ ಬಿಕ್ಕಟ್ಟು ಇರುವಾಗಲೂ ಕಾಂಗ್ರೆಸ್ ಮತ್ತು ಬಿಜೆಪಿ ತಮ್ಮ ನೀಚ ರಾಜಕೀಯದಲ್ಲಿ ತೊಡಗಿರುವುದು ದುರದೃಷ್ಟಕರ. ಈಗ ಚೀನಾ ಗಡಿ ವಿವಾದದ ವಿಷಯದಲ್ಲೂ ಪರಸ್ಪರ ದೋಷಾರೋಪ ಮಾಡಿಕೊಳ್ಳುತ್ತಿದ್ದಾರೆ. ಇದು ದೇಶದ ಹಿತದೃಷ್ಟಿಯಿಂದ ಸರಿಯಲ್ಲ ಎಂದರು. ಚೀನಾ ಹೊರತುಪಡಿಸಿ, ನೇಪಾಳ ಸೇರಿದಂತೆ ಇತರ ಗಡಿ ಭಾಗಗಳಲ್ಲಿ ಗಂಭೀರ ಸಮಸ್ಯೆಗಳು ಎದುರಾಗುತ್ತಿವೆ. ಇಂತಹ ಸನ್ನಿವೇಶಗಳಲ್ಲಿ, ಎಲ್ಲಾ ರಾಜಕೀಯ ಪಕ್ಷಗಳನ್ನು ಪಕ್ಷಗಳನ್ನು ಮೀರಿ ನಿಂತು ದೇಶದ ಹಿತಾಸಕ್ತಿಯಿಂದ ಯೋಚಿಸಬೇಕು. ಕೇಂದ್ರ ಸರ್ಕಾರ ಇಂತಹ ವಿಷಯಗಳಲ್ಲಿ ಎಲ್ಲಾ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು.