ಚುಟುಕು ಸಾಹಿತ್ಯ ಬಳಗದ ವತಿಯಿಂದ ನೂತನ ಅಧ್ಯಕ್ಷರಿಗೆ ಗೌರವ
Chutuku Sahitya Balaga pays tribute to new president
ಚುಟುಕು ಸಾಹಿತ್ಯ ಬಳಗದ ವತಿಯಿಂದ ನೂತನ ಅಧ್ಯಕ್ಷರಿಗೆ ಗೌರವ
ಹಾವೇರಿ 23 : ನಗರದ ಕಚುಸಾಪ ಕಛೇರಿಯಲ್ಲಿ ಸವಣೂರು ತಾಲೂಕಿನ ಹಿರೇಮುಗದೂರ ಗ್ರಾಮದ ನಿವಾಸಿಗಳು, ಅಮ್ಮಾ ಸಂಸ್ಥೆ(ರಿ) ಸಂಸ್ಥಾಪಕರು,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮಿತಿ ಸದಸ್ಯರು,ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಗೌರವ ಸಹಕಾರ್ಯದರ್ಶಿಗಳು,ಹಿರೇಮುಗದೂರ ಗ್ರಾಮ ಪಂಚಾಯತಿ ಸದಸ್ಯರಾದ ನಿಂಗಪ್ಪ ಎಂ ಆರೇರ ಅವರನ್ನು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಸವಣೂರ ತಾಲೂಕಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಕಚುಸಾಪ ಜಿಲ್ಲಾದ್ಯಕ್ಷರಾದ ವಿರೂಪಾಕ್ಷ ಲಮಾಣಿ,ಪ್ರಧಾನ ಕಾರ್ಯದರ್ಶಿಗಳಾದ ಡಾ. ಗಂಗಯ್ಯ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಚುಟುಕು ಸಾಹಿತ್ಯ ಬಳಗದ ವತಿಯಿಂದ ನೂತನ ಅಧ್ಯಕ್ಷರಿಗೆ ಗೌರವಿಸಿ ಸನ್ಮಾನಿಸಲಾಯಿತು. ನೇಮಕ ಮಾಡಿದ ಕಚುಸಾಪ ಜಿಲ್ಲಾಧ್ಯಕ್ಷರಿಗೆ ಹಾಗೂ ಪ್ರಧಾನ ಕಾರ್ಯದರ್ಶಿಗಳಿಗೆ ನೂತನ ಅಧ್ಯಕ್ಷರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.ಈ ಸಂದರ್ಭದಲ್ಲಿ ಡಿವೈಎಪ್ ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಪೂಜಾರ ಇದ್ದರು.ನೂತನ ಸವಣೂರು ತಾಲ್ಲೂಕು ಅಧ್ಯಕ್ಷರಾದ ನಿಂಗಪ್ಪ ಎಂ ಆರೇರ ಅವರಿಗೆ ಸಾಹಿತ್ಯ ಬಳಗ,ಸ್ನೇಹ ಬಳಗ ಹಾಗೂ ಹಿತೈಷಿಗಳು ಶುಭ ಕೋರಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 