ಬೆಳಗಾವಿ: 19 : ರೈತರ ಬೆಳೆ ಸಾಲ ಮನ್ನಾ ಯೋಜನೆಗೆ ಪ್ರಸಕ್ತ ಸಾಲಿನ ಆಯವ್ಯಯದಲ್ಲಿ 6500 ಕೋಟಿ ರೂ. ಮೀಸಲಿರಿಸಲಾಗಿದ್ದು, ಸಹಕಾರಿ ಬ್ಯಾಂಕ್ಗಳು ಮಾತ್ರವಲ್ಲದೆ, ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿನ ಬೆಳೆ ಸಾಲ ಮನ್ನಾಕ್ಕೆ ರಾಜ್ಯ ಸಕರ್ಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ವಿಧಾನ ಸಭೆಯಲ್ಲಿ ಬುಧವಾರ ಪ್ರಕಟಿಸಿದರು.
ಬರ ಕುರಿತು ನಡೆದ ಚಚರ್ೆಯ ಮೇಲೆ ಉತ್ತರ ನೀಡಿದ ಅವರು ರೈತರ ಬೆಳೆ ಸಾಲ ಮನ್ನಾ ಯೋಜನೆಯಿಂದ ಹಿಂದೆ ಸರಿಯುವ ಪ್ರಶ್ನೆಯಿಲ್ಲ. ಆಯವ್ಯಯದಲ್ಲಿ ಹಂಚಿಕೆ ಮಾಡಲಾಗಿರುವ 6500 ಕೋಟಿ ರೂ. ಅನುದಾನವನ್ನು ಯಾವುದೇ ಕಾರಣಕ್ಕೂ ಬೇರೆ ಉದ್ದೇಶಕ್ಕೆ ವಗರ್ಾಯಿಸುವುದಿಲ್ಲ ಎಂದು ಅವರು ಘೋಷಿಸಿದರು.
ರಾಷ್ಟ್ರೀಕೃತ ಬ್ಯಾಂಕ್ಗಳು ಹಾಗೂ ಸಹಕಾರಿ ಬ್ಯಾಂಕ್ಗಳಲ್ಲಿನ ಬೆಳೆ ಸಾಲ ಮನ್ನಾ ಯೋಜನೆಯ ಲಾಭ ರಾಜ್ಯದ 44 ಲಕ್ಷ ರೈತ ಕುಟುಂಬಗಳಿಗೆ ದೊರೆಯಲಿದೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ 1.6 ಲಕ್ಷ ರೈತರ ಮಾಹಿತಿಯನ್ನು ಪರಿಶೀಲಿಸಲಾಗಿದೆ. ಬಾಕಿ ಇರುವ ರೈತರ ಮಾಹಿತಿಯ ಪರಿಶೀಲನಾ ಪ್ರಕ್ರಿಯೆ ಪ್ರಗತಿಯಲ್ಲಿದೆ. ಸಹಕಾರಿ ಬ್ಯಾಂಕ್ಗಳಲ್ಲಿನ ರೈತರ ಸಾಲ ಹಾಗೂ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿನ ರೈತರ ಸಾಲಗಳನ್ನು ಮನ್ನಾ ಮಾಡುವ ತೀಮರ್ಾನವನ್ನು ಈಗಾಗಲೇ ಕೈಗೊಂಡಿರುವುದರಿಂದ ಹಾಗೂ ಸಂಬಂಧಿಸಿದ ಅನುದಾನದ ಲಭ್ಯತೆ ಇರುವುದರಿಂದ ಈ ಸಂದರ್ಭದಲ್ಲಿ ರಾಷ್ಟ್ರೀಕೃತ ಬ್ಯಾಂಕ್ಗಳ ಅನುಮತಿ ಅಗತ್ಯವಿಲ್ಲ. ರೈತರ ಬೆಳೆ ಸಾಲ ಮನ್ನಾ ನಿಧರ್ಾರದಿಂದ ತಮ್ಮ ಸಕರ್ಾರವು ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
ಸಾಲ ಮನ್ನಾ ಯೋಜನೆಯ ಸಮಪರ್ಕ ಅನುಷ್ಠಾನ ಸಲುವಾಗಿ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಾಲ ಮನ್ನಾ ಘಟಕವನ್ನು ರಚಿಸಲಾಗಿದೆ. ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿನ ಎರಡು ಲಕ್ಷ ರೂ. ವರೆಗಿನ ರೈತರ ಬೆಳೆ ಸಾಲ ಮನ್ನಾಕ್ಕೆ ಕ್ರಮ ಕೈಗೊಳ್ಳಲಾಗಿದೆ.
ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಸಾಲ ಪಡೆದಿರುವ 21,69,645 ರೈತರು ಈ ಯೋಜನೆಯ ವ್ಯಾಪ್ತಿಗೆ ಒಳಪಡಲಿದ್ದಾರೆ ಎಂದು ಅವರು ತಿಳಿಸಿದರು.
ಸಾಲ ಮನ್ನಾ ಯೋಜನೆಯ ಲಾಭ ಅರ್ಹ ಫಲಾನುಭವಿಗಳಿಗೆ ದೊರೆಯಬೇಕೆಂಬ ಸದುದ್ದೇಶದಿಂದ ಆಧಾರ್ ಕಾಡರ್್, ಪಡಿತರ ಚೀಟಿ ಹಾಗೂ ಪಹಣಿ ಪತ್ರ ದಾಖಲೆಗಳನ್ನು ಸಲ್ಲಿಸುವ ನಿಬಂಧನೆಗಳನ್ನು ಅಳವಡಿಸಲಾಗಿದೆ. ಇದು ಯೋಜನೆಯ ಸಮರ್ಪಕ ಅನುಷ್ಠಾನದ ದೃಷ್ಟಿಯಿಂದ ಹಾಗೂ ಲೋಪಗಳನ್ನು ಸರಿಪಡಿಸುವ ಉದ್ದೇಶದಿಂದ ರೂಪಿಸಲಾಗಿದೆ ಎಂದರು.
ಸಹಕಾರಿ ಬ್ಯಾಂಕ್ಗಳಲ್ಲಿನ ಒಂದು ಲಕ್ಷ ರೂ.ವರೆಗಿನ ರೈತರ ಸಾಲ ಮನ್ನಾಕ್ಕೆ ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿದೆ. ಅಷ್ಟೂ ಅನುದಾನವನ್ನು ಒಂದೇ ಕಂತಿನಲ್ಲಿ ಬಿಡುಗಡೆ ಮಾಡುವ ಅಗತ್ಯವಿಲ್ಲ. ಮಾಸಿಕ ಕಂತಿನ ಆಧಾರದ ಮೇಲೆ ಬಿಡುಗಡೆ ಮಾಡಬಹುದಾಗಿದ್ದು, 2018 ನವೆಂಬರ್ವರೆಗೆ 800 ಕೋಟಿ ರೂ. ಈಗಾಗಲೇ ಬಿಡುಗಡೆ ಮಾಡಲಾಗಿದೆ. ಮುಂದಿನ ಜೂನ್ವರೆಗೆ 9458 ಕೋಟಿ ರೂ. ಬಿಡುಗಡೆ ಮಾಡಬೇಕಿದೆ. ಈ ಪೈಕಿ 2019ರ ಮಾಚರ್್ವರೆಗೆ 2600 ಕೋಟಿ ರೂ. ಸಹಕಾರಿ ಬ್ಯಾಂಕ್ಗಳಿಗೆ ಬಿಡುಗಡೆ ಮಾಡಬೇಕಿದೆ ಎಂದು ಮುಖ್ಯಮಂತ್ರಿ ಸದನದಲ್ಲಿ ಅಂಕಿ-ಅಂಶಗಳನ್ನು ನೀಡಿದರು.