ನಾಗರೀಕರು ಅಭಿಯಾನದಲ್ಲಿ ಸಕ್ರಿಯ ಭಾವಹಿಸಿ, ಸದುಪಯೋಗ ಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ 19: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಖಾತಾ ನೀಡುವ ಅಭಿಯಾನಕ್ಕೆ ಚಾಲನೆ ನೀಡಿದ್ದು, ಈ ಅಭಿಯಾನವನ್ನು ಮುಂದಿನ 3 ತಿಂಗಳ ಒಳಗಾಗಿ ಪೂರ್ಣಗೊಳಿಸಲು ಸಾರ್ವಜನಿಕರಿಗೆ ಅಗತ್ಯ ಮಾಹಿತಿ ನೀಡಿ, ನಿಗದಿತ ಕಾಲವಾಧಿಯಲ್ಲಿ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
ಈ ಕುರಿತು ಅವರು ಇಂದು (ಫೆ.19) ಪ್ರಕಟಣೆ ನೀಡಿದ್ದು, ಸಾರ್ವಜನಿಕರಿಗೆ ತಮ್ಮ ಸ್ವತ್ತಿನ ಮಾಹಿತಿಯಲ್ಲಿ ತಿದ್ದು ಪಡಿಗಳಿದ್ದಲ್ಲಿ ಅಗತ್ಯ ದಾಖಲೆಗಳನ್ನು ನಗರ ಸ್ಥಳೀಯ ಸಂಸ್ಥೆಗೆ ಸಲ್ಲಿಸಿ ತಿದ್ದುಪಡಿ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ. ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿನ ಅನಧಿಕೃತ ಸ್ವತ್ತುಗಳಿಗೆ ಸಹ ಖಾತಾ ನೀಡುವ ಸಂಬಂಧ ಕಾಯ್ದೆ ಮತ್ತು ನಿಯಮಗಳಿಗೆ ತಿದ್ದುಪಡಿ ಮಾಡಲಾಗಿದೆ. ಇದರಿಂದ ಅನಧಿಕೃತ ಸ್ವತ್ತುಗಳ ಮಾಲೀಕರು ತಮ್ಮ ಸ್ವತ್ತಿನ ಕಂದಾಯವನ್ನು ಪಾವತಿಸಿ, ಇ-ಖಾತಾ ಪಡೆಯಬಹುದಾಗಿದೆ. ಇದರಿಂದ ಬಹಳ ದಿನಗಳಿಂದ ಇದ್ದ ಅನಧಿಕೃತ ಸ್ವತ್ತುಗಳ ಖಾತಾ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸಪ್ಟೆಂಬರ 10, 2024 ರ ಕ್ಕಿಂತ ಮುಂಚಿನ ಆಸ್ತಿಗಳಿಗೆ ಸದರಿ ಕಾಯ್ದೆಯು ಅನ್ವಯವಾಗುತ್ತದೆ. ಸದರಿ ಅಭಿಯಾನವು ಒಂದು ಬಾರಿ ಪರಿಹಾರ ಕ್ರಮವಾಗಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಸದರಿ ಅಭಿಯಾನದ ಸದುಪಯೋಗ ಪಡೆದುಕೊಳ್ಳಲು ಸಾರ್ವಜನಿಕರಿಗೆ ಈ ಸೌಲಭ್ಯದ ಮಾಹಿತಿ ತಲುಪುವಂತೆ ವ್ಯಾಪಕ ಪ್ರಚಾರ ಮಾಡಲು ಅವರು ಸೂಚಿಸಿದ್ದಾರೆ.
ಧಾರವಾಡ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿ ಲಭ್ಯ ಮಾಹಿತಿಯನ್ನು ಜಾಲತಾಣ, ಣಣಠಿ://ಚಿಛಿಣಞಚಿಟಿಚಿರಿಚಿ.ಞಚಿಡಿಟಿಚಿಣಚಿಞಛಿಟಚಿಡಿಣಛಿಣಥಿ.ಟಿ/ಞಟಜಿ24 ರಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ಈ ಜಾಲತಾಣಕ್ಕೆ ಭೇಟಿ ನೀಡಿ, ತಮ್ಮ ಸ್ವತ್ತಿನ ಮಾಹಿತಿಯು ಸರಿಯಾಗಿರುವ ಕುರಿತು ಪರೀಶೀಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.ಸ್ವತ್ತಿನ ಮಾಲೀಕರು ತಮ್ಮ ನಗರ ಸ್ಥಳೀಯ ಸಂಸ್ಥೆಗೆ ಭೇಟಿ ನೀಡಿ, ವಾರ್ಡವಾರು ಆಯೋಜಿಸಲಾಗುವ ಮೇಳಗಳಲ್ಲಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ, 07 ದಿನಗಳ ಒಳಗಾಗಿ ಇ-ಖಾತಾ ಪಡೆಯಬಹುದಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಹಾಗೂ ಸಾರ್ವಜನಿಕರ ಸಹಾಯಕ್ಕಾಗಿ ಧಾರವಾಡ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಹಾಯವಾಣಿಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಅಣ್ಣಿಗೇರಿ ಪುರಸಭೆ ದೂರವಾಣಿ: 08380-222516, ವಾಟ್ಸಪ್ ಸಂಖ್ಯೆ: 9986124325, ನವಲಗುಂದ ಪುರಸಭೆ ದೂರವಾಣಿ: 08380-229247, ವಾಟ್ಸಪ್ ಸಂಖ್ಯೆ: 9844828229, ಅಳ್ನಾವರ ಪಟ್ಟಣ ಪಂಚಾಯತ ದೂರವಾಣಿ: 0836-2385918, ವಾಟ್ಸಪ್ ಸಂಖ್ಯೆ: 8073505903, ಕಲಘಟಗಿ ಪಟ್ಟಣ ಪಂಚಾಯತ ದೂರವಾಣಿ: 08370-284542, ವಾಟ್ಸಪ್ ಸಂಖ್ಯೆ: 9845100817, ಕುಂದಗೋಳ ಪಟ್ಟಣ ಪಂಚಾಯತ ದೂರವಾಣಿ: 08304-291010, ವಾಟ್ಸಪ್ ಸಂಖ್ಯೆ: 9986400355 ಮತ್ತು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ದೂರವಾಣಿ: 0836-2213821, ವಾಟ್ಸಪ್ ಸಂಖ್ಯೆ: 8277802341 ಗಳನ್ನು ಸಂಪರ್ಕಿಸಿ, ಸಾರ್ವಜನಿಕರು ಇ-ಖಾತಾ ನೀಡುವ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.
ಇ-ಖಾತಾ ನೀಡಲು ಅಭಿಯಾನ ಕೈಗೊಂಡು ನಿಗದಿತ ಕಾರ್ಯವಿಧಾನವನ್ನು ಅನುಸರಿಸಲಾಗುತ್ತಿದೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಖಾತಾ ನೀಡಲು ಬಾಕಿಯಿರುವ ಆಸ್ತಿಗಳ ಗುರುತಿಸುವುದು. ಇ-ಖಾತಾ ಪಡೆಯಲು ಗುರುತಿಸಲಾದ ಆಸ್ತಿಗಳ ಮಾಲೀಕರು ಇ-ಖಾತಾ ಪಡೆಯಲು ಬೇಕಾದ ದಾಖಲೆಗಳನ್ನು ಸಲ್ಲಿಸಲು ಮಾಹಿತಿ ನೀಡಲಾಗುತ್ತದೆ.
ಇ-ಖಾತಾ ಅಭಿಯಾನದ ಕುರಿತು ಪ್ರಚಾರ ಮಾಡಲು ನಗರ ಸ್ಥಳೀಯ ಸಂಸ್ಥೆಗಳ ವಾಹನದಲ್ಲಿ ಮುದ್ರಿತ ಧ್ವನಿ (ಆಡಿಯೊ) ಪ್ರಚುರಪಡಿಸಲು, ಲಭ್ಯವಿರುವ ಮೊಬೈಲ್ ಸಂಖ್ಯೆಗಳಿಗೆ ಎಸ್‌ಎಂಎಸ್ ಮೂಲಕ ಮಾಹಿತಿ ನೀಡುವುದು ಮತ್ತು ಇ-ಖಾತಾ ಪಡೆಯಲು ಅವಶ್ಯವಿರುವ ದಾಖಲೆಗಳ ಪಟ್ಟಿಯನ್ನು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪ್ರಚುರಪಡಿಸಲು ಸೂಚಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.
ಎ-ರಿಜಿಸ್ಟರ್‌ನಲ್ಲಿ ದಾಖಲಿರುವ ಆಸ್ತಿಗಳಿಗೆ ಇ-ಖಾತಾ ಪಡೆಯಲು ನೀಡಬೇಕಾದ ದಾಖಲೆಗಳು: ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತುಪಡಿಸುವ ನೋಂದಾಯಿತ ಮಾರಾಟ ಪತ್ರಗಳು, ದಾನಪತ್ರ, ವಿಭಾಗ ಪತ್ರಗಳು, ಸರ್ಕಾರ ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕು ಪತ್ರ ಇತ್ಯಾದಿಗಳ ಪೈಕಿ ಒಂದು ಪ್ರಮಾಣ ಪತ್ರವನ್ನು, ಮಂಜೂರಾತಿ ಪತ್ರಗಳು, ಕಂದಾಯ ಇಲಾಖೆಯಿಂದ 94 ಸಿಸಿ ಅಡಿ ನೀಡಲಾದ ಹಕ್ಕು ಪತ್ರ ಮತ್ತು ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನಗಳ ಬಿಡುಗಡೆ ಪತ್ರ ಹಾಗೂ ಪ್ರಸಕ್ತ ಸಾಲಿನವರೆಗಿನ ಋಣಭಾರ ಪ್ರಮಾಣ ಪತ್ರ, ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಸೀದಿ, ಮಾಲೀಕರ ಫೋಟೋ ಮತ್ತು ಸ್ವತ್ತೀನ ಫೋಟೋ ಮತ್ತು ಮಾಲೀಕರ ಗುರುತಿನ ದಾಖಲೆ ಪ್ರತಿ ಸಲ್ಲಿಸಬೇಕು.
ಬಿ-ರಿಜಿಸ್ಟರ್‌ನಲ್ಲಿ ದಾಖಲಿರುವ ಆಸ್ತಿಗಳಿಗೆ ಇ-ಖಾತಾ ಪಡೆಯಲು ನೀಡಬೇಕಾದ ದಾಖಲೆಗಳು: ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತಪಡಿಸುವ ಸಪ್ಟೆಂಬರ 10, 2024 ರ ಪೂರ್ವದಲ್ಲಿ ನೋಂದಾಯಿತ ಮಾರಾಟ ಪತ್ರಗಳು, ದಾನಪತ್ರ, ವಿಭಾಗ ಪತ್ರಗಳು, ಹಕ್ಕು ಖುಲಾಸೆ ಪತ್ರಗಳು ಹಾಗೂ ಪ್ರಸಕ್ತ ಸಾಲಿನ ವರೆಗೆ ಋಣಭಾರ ಪ್ರಮಾಣ ಪತ್ರ, ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಸೀದಿ, ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ, ಮಾಲೀಕರ ಗುರುತಿನ ದಾಖಲೆ ಪ್ರತಿಗಳನ್ನು ಸಲ್ಲಿಸಬೇಕು.
ವ್ಯವಸ್ಥಿತವಾಗಿ ಮತ್ತು ಸಂಘಟಿತ ರೀತಿಯಲ್ಲಿ ಮೇಳಗಳ ಆಯೋಜನೆ: ಇ-ಖಾತಾ ಅಭಿಯಾನದ ಅಂಗವಾಗಿ ನಗರದ ವಾರ್ಡ್ ಅಥವಾ ಬೀದಿಗಳನ್ನು, ಅಪಾರ್ಟ್‌ಮೆಂಟ್, ಲೇಓಟ್‌ನ್ನು ಗುರುತಿಸಿ, ಆ ಭಾಗದಲ್ಲಿನ ಸಕ್ರಿಯ ನಾಗರೀಕ ಗುಂಪುಗಳು ಅಥವಾ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಸಕ್ರಿಯ ವ್ಯಕ್ತಿಗಳ ಸಹಾಯವನ್ನು ಪಡೆದುಕೊಂಡು, ಇ-ಖಾತಾ ಇಲ್ಲದಿರುವ ಸ್ವತ್ತುಗಳ ಪಟ್ಟಿಯನ್ನು ಅಗತ್ಯ ಸ್ಥಳಗಳಲ್ಲಿ ಪ್ರಚುರಪಡಿಸಲಾಗುವುದು.
ನಾಗರೀಕರಿಗೆ ಅನುಕೂಲವಾಗುವ ಸ್ಥಳಗಳಲ್ಲಿ ಇ-ಖಾತಾ ಮೇಳವನ್ನು ಆಯೋಜಿಸಿ, ಇ-ಖಾತಾ ಪಡೆಯಲು ನಾಗರೀಕರು ಸಲ್ಲಿಸಬೇಕಾದ ಮಾಹಿತಿ, ದಾಖಲೆಗಳ ವಿವರವನ್ನು ತಿಳಿಸಲಾಗುವುದು. ಅಧಿಕೃತ ಸ್ವತ್ತಿನ ಮಾಲೀಕರು ಸಲ್ಲಿಸಬೇಕಾದ ದಾಖಲೆಗಳು, ಮತ್ತು ಅನಧಿಕೃತ ಸ್ವತ್ತಾಗಿದ್ದಲ್ಲಿ ಸಲ್ಲಿಸಬೇಕಾದ ದಾಖಲೆಗಳ ಮಾಹಿತಿಯ ವಿವರವನ್ನು ನಾಗರೀಕರಿಗೆ ಮೇಳದಲ್ಲಿ ನೀಡಲಾಗುವುದು. ಮೇ 2025 ರೊಳಗಾಗಿ ಇ-ಖಾತಾ ಅಭಿಯಾನವನ್ನು ನಡೆಸಿ, ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯ ಆಸ್ತಿಗಳಿಗೆ ಇ-ಖಾತಾ ನೀಡಿ, ಇ-ಖಾತಾ ಅಭಿಯಾನವನ್ನು ಯಶಸ್ವಿಗೊಳಿಸಲು ಅಗತ್ಯ ಕ್ರಮಗಳನ್ನು ನಗರ ಸ್ಥಳೀಯ ಸಂಸ್ಥೆಗಳಿಂದ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.