ವಿಜಯಪುರ 05: ಸ್ವಚ್ಛ ಭಾರತ ಅಭಿಯಾನಕ್ಕೆ ಕೈಜೋಡಿಸುವ ನಿಟ್ಟಿನಲ್ಲಿ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಗಣಕಯಂತ್ರ ವಿಜ್ಞಾನ ವಿಭಾಗದ ವತಿಯಿಂದ ಮಂಗಳವಾರ ಸ್ವಚ್ಛ ಕ್ಯಾಂಪಸ್ ಅಭಿಯಾನವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ವಿಜ್ಞಾನ ನಿಖಾಯದ ಸುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಲಾಯಿತು. ಇದರ ಮುಂದುವರೆದ ಭಾಗವಾಗಿ ಸಸಿ ನೆಡುವ ಮತ್ತು ಸಸಿಗೆ ನೀರೆರೆಯುವ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿತ್ತು. ಈ ಅಭಿಯಾನದಲ್ಲಿ ಎಮ್.ಎಸ್.ಸಿ. ಮತ್ತು ಎಮ್.ಸಿ.ಎ. ವಿಭಾಗದ ಎಲ್ಲ ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾಥರ್ಿನಿಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಗಣಕಯಂತ್ರ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ಜಿ.ಜಿ. ರಜಪೂತ್, ಪ್ರೊಅಜೀಜ್ ಮಕಾಂದಾರ್, ಪ್ರೊ.ರಮೇಶ್ ಕೆ. ಹಾಗೂ ಮತ್ತಿತರರು ಭಾಗವಹಿಸಿ ವಿದ್ಯಾಥರ್ಿಗಳಿಗೆ ಪ್ರೋತ್ಸಾಹಿಸಿದರು.