ಸೀಳು ತುಟಿ, ಅಂಗುಳ ಶಸ್ತ್ರಚಿಕಿತ್ಸೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ: ಡಾ. ಲಿಂಗರಾಜು
Cleft lip and palate surgery free in government hospitals: Dr. Lingaraju
ವಿಜಯನಗರ (ಹೊಸಪೇಟೆ) 4: ಸೀಳು ತುಟಿ, ಸೀಳು ಅಂಗುಳ ಹಾಗೂ ಇತರೆ ಮುಖದ ಜನ್ಮಜಾತ ವೈಕಲ್ಯಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಶಸ್ತ್ರಚಿಕಿತ್ಸೆ ಸೌಲಭ್ಯ ಲಭ್ಯವಿದ್ದು, ಬಡ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಇದು ಹೆಚ್ಚು ಅನುಕೂಲಕರವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಲಿಂಗರಾಜು ಹೇಳಿದರು. ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಡಾ. ಜಯಂತ್ ಎಬಿಎಂಎಸ್ಎಸ್ ಫೌಂಡೇಶನ್, ಬೆಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸೀಳು ತುಟಿ ಹಾಗೂ ಸೀಳು ಅಂಗುಳವು ಜನ್ಮಜಾತ ವೈಕಲ್ಯಗಳಾಗಿದ್ದು, ಸಮಯಕ್ಕೆ ಸರಿಯಾಗಿ ಶಸ್ತ್ರಚಿಕಿತ್ಸೆ ಮಾಡಿದರೆ ಮಕ್ಕಳಿಗೆ ಸಾಮಾನ್ಯ ಜೀವನ ನಡೆಸಲು ನೆರವಾಗುತ್ತದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಚಿಕಿತ್ಸೆಯನ್ನು ಉಚಿತವಾಗಿ ನೀಡುತ್ತಿರುವುದು ಜನಸಾಮಾನ್ಯರಿಗೆ ವರದಾನವಾಗಿದೆ ಎಂದು ತಿಳಿಸಿದರು.
ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ. ಜಂಬಯ್ಯ ಮಾತನಾಡಿ, ಗರ್ಭಾವಸ್ಥೆಯಲ್ಲಿ ಮುಖದ ಭಾಗಗಳು ಸರಿಯಾಗಿ ಬೆಳವಣಿಗೆಯಾಗದ ಕಾರಣ ಸೀಳು ತುಟಿ ಮತ್ತು ಸೀಳು ಅಂಗುಳ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಚಿಲೋಪ್ಲಾಸ್ಟಿ (ತುಟಿ ದುರಸ್ತಿ) ಹಾಗೂ ಪ್ಯಾಲೆಟೋಪ್ಲಾಸ್ಟಿ (ಅಂಗುಳ ದುರಸ್ತಿ) ಸೇರಿದಂತೆ ಅಗತ್ಯ ಶಸ್ತ್ರಚಿಕಿತ್ಸೆಗಳನ್ನು ಮಕ್ಕಳಿಗೆ ಸೂಕ್ತ ವಯಸ್ಸಿನಲ್ಲಿ ನಡೆಸಲಾಗುತ್ತದೆ ಎಂದು ವಿವರಿಸಿದರು. ಜಿಲ್ಲೆಯಲ್ಲಿ ಒಟ್ಟು 16 ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಅವರಲ್ಲಿ 10 ಮಂದಿಗೆ ಈಗಾಗಲೇ ಚಿಕಿತ್ಸೆ ನೀಡಲಾಗಿದೆ. ಉಳಿದ ಆರು ಮಂದಿಗೂ ಶೀಘ್ರದಲ್ಲೇ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 