ಬಳಕೆಯ ಆಧಾರದ ಮೇಲೆ ನೀರಿನ ಕರ ಸಂಗ್ರಹಿಸಿ: ಸಿಇಓ ದೀಲೀಷ್ ಶಶಿ
Collect water tax based on usage: CEO Dileesh Shashi
ಬಳಕೆಯ ಆಧಾರದ ಮೇಲೆ ನೀರಿನ ಕರ ಸಂಗ್ರಹಿಸಿ: ಸಿಇಓ ದೀಲೀಷ್ ಶಶಿ
ಕಾರವಾರ,ಆ.5: ಗ್ರಾಮೀಣ ಮಟ್ಟದಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಸಂಪರ್ಕ ಪಡೆದಿರುವ ಎಲ್ಲ ಮನೆಗಳಿಗೆ ವಾರ್ಷಿಕವಾಗಿ ಏಕರೂಪ ಕರ ಸಂಗ್ರಹಿಸುವ ಬದಲು ನೀರಿನ ಬಳಸುವಿಕೆಗೆ ತಕ್ಕಂತೆ ಮೀಟರ್ ರೀಡಿಂಗ್ ಆಧಾರದ ಮೇಲೆ ಕರ ಸಂಗ್ರಹಿಸುವಂತೆ ಉತ್ತರ ಕನ್ನಡ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದೀಲೀಷ್ ಶಶಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಮಂಗಳವಾರ ಯಲ್ಲಾಪುರ ತಾಲೂಕಿನ ವಿವಿಧ ಗ್ರಾಮ ಪಂಚಾಯತ್‌ಗಳಿಗೆ ಭೇಟಿ ನೀಡಿ ಜಲ್ ಜೀವನ್ ಮಿಷನ್ ಯೋಜನೆಯಡಿ ಅನುಷ್ಠಾನಗೊಳಿಸಲಾದ ಕಾಮಗಾರಿಗಳನ್ನು ಪರೀಶೀಲಿಸಿದರು.
ತಾಲೂಕಿನ ಕಿರವತ್ತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಹೊಸಳ್ಳಿ ಗ್ರಾಮದ ಹದ್ದಿನಸರ ಮಜರೆ, ತೊಟ್ಟಿಲಗುಂಡಿ ಮಜರೆ, ಕಂಚನಳ್ಳಿ ಗ್ರಾಮದ ಸಣ್ಣಯಲಹಳ್ಳಿ ಮಜರೆ, ಕಿರವತ್ತಿ, ಗ್ರೀನ್ ಸರ್ಕಲ್ ಮಜರೆ, ಕಣ್ಣಿಗೇರಿ ಪಂಚಾಯತ್ ವ್ಯಾಪ್ತಿಯ ಕನ್ನಡಗಲ್ ಗ್ರಾಮದ ಹಿಟ್ಟಿನಬೈಲ್ ಮಜರೆ, ಚಂದುಗುಳಿ ಪಂಚಾಯತ್ ವ್ಯಾಪ್ತಿಯ ಉಪಳೇಶ್ವರ ಮಜರೆ, ಇಡಗುಂದಿ ಪಂಚಾಯತ್ ವ್ಯಾಪ್ತಿಯ ಗುಳ್ಳಾಪುರ ಗ್ರಾಮದ ರಾಮನಗರ ಮಜರೆಗಳಲ್ಲಿ ಜೆಜೆಎಮ್ ಯೋಜನೆಯಡಿ ಸಂಪರ್ಕ ಪಡೆದ ಮನೆ ಮತ್ತು ಶಾಲೆಗಳಿಗೆ ಭೇಟಿ ನೀಡಿ, ಪರೀಶೀಲಿಸಿ, ನೀರಿನ ಪೂರೈಕೆ, ಶುದ್ಧತೆ ಮತ್ತು ಉಪಯೋಗದ ಕುರಿತು ಫಲಾನುಭವಿಗಳಿಂದ ಮಾಹಿತಿ ಪಡೆದರು.
ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಲು ಉತ್ತಮ ಜಲ ಮೂಲ ಹೊಂದುವುದು ಅವಶ್ಯಕ. ಕೊಳವೆ ಬಾವಿ ಮಾತ್ರದಿಂದ ನೀರಿನ ಬೇಡಿಕೆ ನೀಗಿಸಲು ಕಷ್ಟ. ಹೀಗಾಗಿ ತಾಲೂಕಿನಲ್ಲಿ ಬಹು ಗ್ರಾಮ ಕುಡಿಯುವ ನೀರು ಯೋಜನೆ ಅನುಷ್ಠಾನಕ್ಕೆ ತರಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಯಲ್ಲಾಪುರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್ ಧನವಾಡಕರ್, ಸಹಾಯಕ ನಿರ್ದೇಶಕ (ಗ್ರಾಉ) ಮಂಜುನಾಥ ಆಗೇರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಸತ್ಯಪ್ಪ, ಯಲ್ಲಾಪುರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಅಶೋಕ ಬಂಟ, ಜೆಜೆಎಮ್ ಡಿಪಿಎಮ್ ವೆಂಕಟೇಶ್ ನಾಯ್ಕ, ತಾಲೂಕು ಮಟ್ಟದ ಅಧಿಕಾರಿಗಳು, ಸಂಬಂಧಪಟ್ಟ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 