ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ
ಬೆಳಗಾವಿ 01: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಬೆಳಗಾವಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಬುಧವಾರ (ಜ.1) ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಅಮರ ಶಿಲ್ಪಿ ಜಕಣಾಚಾರಿ ಅವರ ಸಂಸ್ಮರಣಾ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.
ದೇಶದ ಮಾಜಿ ಪ್ರಧಾನ ಮಂತ್ರಿಗಳಾದ ಡಾ.ಮನಮೋಹನ ಸಿಂಗ್ ಅವರ ನಿಧನದಿಂದಾಗಿ ಶೋಕಾಚರಣೆ ಜಾರಿ ಇರುವ ಹಿನ್ನಲೆಯಲ್ಲಿ ಅಮರ ಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡುವ ಮೂಲಕ ಗೌರವ ಸಲ್ಲಿಸಿ, ಸಂಸ್ಮರಣಾ ದಿನಾಚರಣೆಯನ್ನು ಸರಳವಾಗಿ ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಮಹಾನಗರ ಪಾಲಿಕ ಉಪ ಆಯುಕ್ತ ಉದಯಕುಮಾರ ತಳವಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿಧ್ಯಾವತಿ ಭಜಂತ್ರಿ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.