ಡಾ.ಬಾಬುಜಗಜೀವನ ರಾಂ ರವರ ಪುಣ್ಯಸ್ಮರಣೋತ್ಸವ
Commemoration of Dr. Babujagjivan Ram
ಡಾ.ಬಾಬುಜಗಜೀವನ ರಾಂ ರವರ ಪುಣ್ಯಸ್ಮರಣೋತ್ಸವ
ತಾಳಿಕೋಟಿ 06: ಪಟ್ಟಣದ ತಾಲೂಕ ಆಡಳಿತದ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ ರಾಷ್ಟ್ರ ನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಮಂತ್ರಿ ಡಾ.ಬಾಬು ಜಗಜೀವನ ರಾಮ್ ರವರ 39ನೇ ಪುಣ್ಯ ಸ್ಮರಣೋತ್ಸವ ಆಚರಿಸಲಾಯಿತು.
ಪಟ್ಟಣದ ತಹಸಿಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ತಾಲೂಕಾಡಳಿತ ವತಿಯಿಂದ ರವಿವಾರ ಹಮ್ಮಿಕೊಂಡ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಶಿರಸ್ತೆದಾರ ಜೆ.ಆರ್.ಜೈನಾಪೂರ ಇವರ ನೇತೃತ್ವದಲ್ಲಿ ಡಾ.ಬಾಬು ಜಗಜೀವನ ರಾಂ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು.
ಸಮಾಜದ ಗಣ್ಯರಾದ ಬಸವರಾಜ ಬ.ಕಟ್ಟಿಮನಿ, ರಾಮಣ್ಣ ಕಟ್ಟಿಮನಿ, ಬಸ್ಸು ಕಟ್ಟಿಮನಿ, ಗೋಪಾಲ ಕಟ್ಟಿಮನಿ, ಯಮನಪ್ಪ ನಾಯ್ಕೋಡಿ, ರಮೇಶ ಇಲಕಲ್, ಪ್ರಕಾಶ ಶಿರೋಳ, ಕಾಶಿನಾಥ ಮಬ್ರೂಮಕರ್, ತಾಪಂ ಸಹಾಯಕ ನಿರ್ದೇಶಕಿ ಸುಜಾತಾ ಯಡ್ರಾಮಿ,ಸಿಆರ್ ಸಿ.ರಾಜು ವಿಜಾಪುರ, ಮುನ್ನಾ ಅತ್ತಾರ, ಸಮಾಜ ಕಲ್ಯಾಣ ಇಲಾಖೆಯ ಎಸ್.ಎನ್. ಮಲ್ಲಾಡೆ, ಎನ್.ವಿ.ಕೋರಿ, ಎಸ್.ಎಂ. ಕಲಬುರ್ಗಿ, ಶಿಕ್ಷಕೀಯರಾದ ಮಹಾನಂದಾ ಉಮರ್ಜಿ, ಸುಮಂಗಲಾ, ಸೋನಾರ ಹಾಗೂ ತಹಸಿಲ್ದಾರ್ ಕಾರ್ಯಾಲಯದ ಸಿಬ್ಬಂದಿಗಳು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 