ಅಪ್ರತಿಮ ಹೋರಾಟಗಾರ ಮಹಾರಾಣಾ ಪ್ರತಾಪ್ ಸಿಂಗ್ ಅವರ ಪುಣ್ಯಸ್ಮರಣೆ
ಹುಬ್ಬಳ್ಳಿ 15 : ಅಪ್ರತಿಮ ವೀರ, ಅದ್ವಿತೀಯ ಶೌರ್ಯ, ಪರಾಕ್ರಮಗಳ ಮೂಲಕ, ಸಂಸ್ಕೃತಿ, ಸ್ವಾಭಿಮಾನವನ್ನು ರಕ್ಷಿಸಿದ ಅಪ್ರತಿಮ ಹೋರಾಟಗಾರ ಮಹಾರಾಣಾ ಪ್ರತಾಪ್ ಸಿಂಗ್ ಅವರ ಪುಣ್ಯಸ್ಮರಣೆ ನಿಮಿತ್ ಮಹಾರಾಣಾ ಪ್ರತಾಪ್ ಸಿಂಗ್ ಪ್ರತಿಮೆಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರೆ್ಣ ಮಾಡುವ ಮೂಲಕ ಗೌರವ ಅರೆ್ಣ ಮಾಡಿ, ನಮನಗಳನ್ನು ಸಲ್ಲಿಸಲಾಯಿತು. ಮಹಾರಾಣಾ ಪ್ರತಾಪ್ ಸಿಂಗ್ ಅವರ ಹೊರಾಟದ ಬದುಕನ್ನು ಸ್ಮರಣೆ ಮಾಡಲಾಯಿತು. ಸೋಹನ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ, ನಿವೃತ್ ಪ್ರಾಚಾರ್ಯ ಪ್ರೊ ಎಸ್.ಎಂ.ಸಾತ್ಮಾರ, ರಾಣಿಚನ್ನಮ್ಮಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‌್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಸಂಜು, ಮುಂತಾದವರು ಇದ್ದರು.