ಶಿಕ್ಷಣ ಪ್ರೇಮಿ, ಅಕ್ಷರದ ಗೌಡರು ಅರಟಾಳ ರುದ್ರಗೌಡರ ಪುಣ್ಯಸ್ಮರಣೆ
Commemoration of the education-loving, literary Gowda, Aratala Rudragowda
ಶಿಕ್ಷಣ ಪ್ರೇಮಿ, ಅಕ್ಷರದ ಗೌಡರು ಅರಟಾಳ ರುದ್ರಗೌಡರ ಪುಣ್ಯಸ್ಮರಣೆ
ಹುಬ್ಬಳ್ಳಿ 16 : ಶಿಕ್ಷಣ ಪ್ರೇಮಿ, ಅಕ್ಷರದ ಗೌಡರು ಪರಮ ಪೂಜ್ಯ ಅರಟಾಳ ರುದ್ರಗೌಡರ ಪುಣ್ಯಸ್ಮರಣೆ ನಿಮಿತ್ತ ಧಾರವಾಡ ಕರ್ನಾಟಕ ಕಾಲೇಜು ಆವರಣದಲ್ಲಿರುವ ಕೆ.ಎಲ್.ಇ ಸಂಸ್ಥೆ, ಕರ್ನಾಟಕ ಕಾಲೇಜು, ಮುಂತಾದ ಶಿಕ್ಷಣ ಸಂಸ್ಥೆಗಳ ಸ್ಥಾಪಕಕ್ಕೆ ಕಾರಣಿಕರ್ತರಾದ ರಾವಬಹದ್ದೂರ ಅರಟಾಳ ರುದ್ರಗೌಡರ ಅವರ ಪ್ರತಿಮೆಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರೆ್ಣ ಮಾಡಿ ಶ್ರದ್ಧಾ, ಭಕ್ತಿಯಿಂದ ಗೌರವ ನಮನ ಸಲ್ಲಿಸಲಾಯಿತು. ಗ್ರಂಥಪಾಲಕ ಮಾರುತಿ ಎಂ. ತಲಗೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕರ್ಯ ದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಗ್ರಂಥಪಾಲಕ ಮದನ ಕಳಸಕರ, ಶರಣಪ್ಪ , ಮುಂತಾದವರು ಇದ್ದರು.
ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕರ್ಯಕದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ ಅವರು ಮಾತನಾಡಿ ಅರಟಾಳ ರುದ್ರಗೌಡರ ಅವರ ಬದುಕು, ಸಾಧನೆ, ಶಿಕ್ಷಣ ರಂಗದಲ್ಲಿ ಮಾಡಿದ ಕ್ರಾಂತಿ ಕುರಿತು ಮಾತನಾಡಿದರು. ಲಿಂಗಾಯತರ ಕಣ್ಮಣಿ, ಅಕ್ಷರ ದಾಸೋಹಿ, ನ್ಯಾಯ ನಿಷ್ಟುರಿ ಅಧಿಕಾರಿ ಯಾಗಿದ್ದರು. ಉತ್ತರ ಕರ್ನಾಟಕದ ಕೊಟ್ಯಾಂತರ ಮಕ್ಕಳ ಶಿಕ್ಷಣಕ್ಕೆ ದಾರಿ ತೋರಿದವರು. ಯಾವುದೇ ಧರ್ಮ ಬೇಧ ಇಲ್ಲದೆ ಕರ್ನಾಟಕ ವಿಶ್ವವಿದ್ಯಾಲಯ, ಕರ್ನಾಟಕ ಕಾಲೇಜು, ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿವೆ. ಅರಟಾಳ ರುದ್ರಗೌಡರು ಉತ್ತರ ಕರ್ನಾಟಕದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ ದಾಸೋಹಿಗಳು. ಕರ್ನಾಟಕ ಕಾಲೇಜು, ಕರ್ನಾಟಕ ವಿಶ್ವವಿದ್ಯಾಲಯ, ಕೆ.ಎಲ್.ಇ ಸಂಸ್ಥೆಗಳನ್ನು ಸ್ಥಾಪಿಸಲು ಮೂಲ ಕಾರಣಕರ್ತರು. ಲಿಂಗಾಯತ ಬಡ ಮಕ್ಕಳಿಗೆ ವಿದ್ಯಾಭ್ಯಾಸ ಮಾಡಲು ಅನುಕೂಲ ಮಾಡಿಕೊಟ್ಟ ಮಹಾನ್ ವ್ಯಕ್ತಿ ಅವರೆಂದು ಹೇಳಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 