ಉನ್ನತೀಕರಿಸಿದ ನೂತನ ಪ್ರೌಢಶಾಲೆ ಪ್ರಾರಂಭೋತ್ಸವ, ಉದ್ಘಾಟನೆ
Commencement ceremony and inauguration of the newly upgraded high school
ರಾಯಬಾಗ, 03 : ಗ್ರಾಮೀಣ ಪ್ರದೇಶದ ಪ್ರಮುಖವಾಗಿ ಹೆಣ್ಣು ಮಕ್ಕಳು ಪ್ರೌಢಶಾಲೆ ಶಿಕ್ಷಣದಿಂದ ವಂಚಿತವಾಗಬಾರದು ಎಂಬ ಉದ್ದೇಶದಿಂದ ಸರ್ಕಾರ ಪ್ರಾಥಮಿಕ ಶಾಲೆಗಳನ್ನು ಉನ್ನತೀಕರಿಸಿ ಪ್ರೌಢಶಾಲೆ ಪ್ರಾರಂಭಿಸುತ್ತಿದೆ ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಹೇಳಿದರು.
ಸೋಮವಾರ ತಾಲೂಕಿನ ಮಂಟೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಉನ್ನತೀಕರಿಸಿದ ನೂತನ ಪ್ರೌಢಶಾಲೆ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಶಾಲೆಗೆ, ಗ್ರಾಮಕ್ಕೆ ಕೀರ್ತಿ ತರಬೇಕೆಂದರು. ಶಾಸಕ ಡಿ.ಎಮ್. ಐಹೊಳೆ ಮಾತನಾಡಿ, ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗಲು ಸರ್ಕಾರ ಪ್ರಾಥಮಿಕ ಶಾಲೆಯನ್ನು ಉನ್ನತೀಕರಿಸಿದೆ. ಶಾಲೆ ಪ್ರಗತಿಗಾಗಿ ಗ್ರಾಮಸ್ಥರು, ಶಿಕ್ಷಕರು, ಪಾಲಕರು ಮತ್ತು ಎಸ್.ಡಿ.ಎಮ್.ಸಿ ಯವರು ಕೈಜೋಡಿಸಬೇಕೆಂದು ಹೇಳಿದರು.
ಶಿಕ್ಷಕರು ಮಕ್ಕಳಿಗೆ ಒಳ್ಳೆಯ ಶಿಕ್ಷಣ ಜೊತೆಗೆ, ಒಳ್ಳೆಯ ಸಂಸ್ಕಾರ ನೀಡಬೇಕೆಂದರು.ಭೆಂಡವಾಡ ವಿರಕ್ತಮಠದ ಗುರುಸಿದ್ದ ಸ್ವಾಮೀಜಿಯವರು ಸಾನಿಧ್ಯ ವಹಿಸಿದ್ದರು. ಬಿಇಒ ಬಸವರಾಜಪ್ಪ ಆರ್, ಎಸ್.ಡಿ.ಎಮ್.ಸಿ ಅಧ್ಯಕ್ಷ ರಾಮಚಂದ್ರ ಉಪ್ಪಾರ, ಗ್ರಾ.ಪಂ.ಅಧ್ಯಕ್ಷೆ ಶೋಭಾ ಮೇಗಾಡೆ, ಸದಸ್ಯೆ ಮಲ್ಲವ್ವ ಮೇಟಿ, ಪಿ.ಎಸ್.ಐ ನರಸಿಂಹರಾಜು, ಶಿವು ಪಾಟೀಲ, ಅಪ್ಪಾಸಾಬ ದೇಸಾಯಿ, ಬಸಪ್ಪ ಮುಗಳಿ, ಸದಾಶಿವ ಕೊಳವಿ, ವಿನೋದ ಚವ್ಹಾನ, ಆರಿ್ಪ.ಲಮಾಣಿ ಹಾಗೂ ಶಿಕ್ಷಕರು, ಎಸ್.ಡಿ.ಎಮ್.ಸಿ ಸದಸ್ಯರು, ಗ್ರಾಮದ ಮುಖಂಡರು ಇದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 