ರಾಜ್ಯ ಬಜೆಟ್ ಕುರಿತು ಪ್ರತಿಕ್ರಿಯೆ)ಕೊಪ್ಪಳಕ್ಕೆ ಚೊಂಬು ಕೊಟ್ಟ ಕಾಂಗ್ರೆಸ್ ಸರಕಾರ: ಸಿವಿಸಿ
Comment on the state budget: Congress government gave a mug to Koppal: CVC
ಕೊಪ್ಪಳ 06: ಬಜೆಟ್ ನಲ್ಲಿ ನಮ್ಮ ಕ್ಷೇತ್ರವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುವ ಮೂಲಕ ಸತತವಾಗಿ ಮೂರನೇ ವರ್ಷವೂ ಕೊಪ್ಪಳಕ್ಕೆ ಸಿದ್ದರಾಮಯ್ಯನವರ ಸರಕಾರ ಚೂಂಬು ಕೊಟ್ಟಿದೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಟೀಕಿಸಿದ್ದಾರೆ.’ಶುದ್ಧ ಕುಡಿಯುವ ನೀರು ಪೂರೈಕೆ, ಕೆರೆಗಳ ಆಧುನಿಕರಣ, ಆಣೆಕಟ್ಟು ಮತ್ತು ಪಿಕ್ ಅಪ್ ಹಾಗೂ ಚೆಕ್ ಡ್ಯಾಮ್ ನಿರ್ಮಾಣ ಕಾಮಗಾರಿಗಳಿಗೆ ಯಲಬುರ್ಗಾ ಕ್ಷೇತ್ರಕ್ಕೆ ಅನುದಾನದ ಹೊಳೆ ಹರಿದಿದೆ.
ಇದರಲ್ಲಿ ಕೊಪ್ಪಳಕ್ಕೆ ಬಿಡಿಗಾಸೂ ಇಲ್ಲ. ಹೋದ ವರ್ಷ ಆದ ಅನ್ಯಾಯ ಈ ವರ್ಷವೂ ಮುಂದುವರೆದಿದೆ. ಇದಕ್ಕೆ ಶಾಸಕರ ನಿರ್ಲಕ್ಷವೇ ಕಾರಣ,’ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.ಮುನಿರಾಬಾದ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರದ ಸ್ಥಾಪನೆ ಹಾಗೂ ಕೊಪ್ಪಳದ ಇಎಸ್‌ಐ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಕೆಲಸಗಳಿಗೆ ಮೀಸಲಿಡುವ ಹಣ ಎಷ್ಟು ಎಂಬುದು ಪ್ರಸ್ತಾಪವಾಗಿಲ್ಲ.
ಕಳೆದ ವರ್ಷ ಆರೋಗ್ಯ ಕ್ಷೇತ್ರಕ್ಕೆ ನೂರಾರು ಕೋಟಿ ಕೊಡುವ ವಾಗ್ದಾನ ಮಾಡಿ ಅದನ್ನು ಈಡೇರಿಸಲಿಲ್ಲ. ಅದಕ್ಕೆ ಕಾರಣ ಏನು ಎಂಬುದನ್ನು ಶಾಸಕರು ಬಹಿರಂಗಪಡಿಸಬೇಕು.ಬಜೆಟ್ ನಲ್ಲಿ ಪ್ರಸ್ತಾಪಿಸಲ್ಪಟ್ಟ ಈ ಎರಡೂ ಯೋಜನೆಗಳು ಆರಂಭವಾಗುವುದು ಅನುಮಾನ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.’ನೀರಾವರಿ ಹಾಗೂ ಗ್ರಾಮೀಣಾಭಿವೃದ್ಧಿ ಕ್ಷೇತ್ರಗಳನ್ನು ಸಂಪೂರ್ಣವಾಗಿ ಸಿದ್ದರಾಮಯ್ಯನವರು ನಿರ್ಲಕ್ಷಿಸಿದ್ದಾರೆ.
ಆರ್ಥಿಕ ಆಶಿಸ್ತನ್ನು ಉತ್ತೇಜಿಸುವ, ಸಾಲ ಮಾಡಿ ಸರಕಾರ ನಡೆಸುವ ಯೋಜನೆಯ ಬಜೆಟ್ ಈ ರಾಜ್ಯದ ಇತಿಹಾಸದಲ್ಲಿಯೇ ಪ್ರಥಮ ಸಲ ಮಂಡನೆಯಾಗಿದೆ. ಸುಮಾರು 1.32 ಲಕ್ಷ ಕೋಟಿ ರೂಪಾಯಿ ಸಾಲ ಮಾಡಿ, 25 ಸಾವಿರ ಕೋಟಿ ರೂಪಾಯಿ ಹೊಸ ತೆರಿಗೆ ಹಾಕಿ, 22 ಸಾವಿರ ಕೋಟಿ ರೂಪಾಯಿಕೊರತೆ ಬಜೆಟ್ ಮಂಡನೆಯಾಗಿದೆ. ಪ್ರಸ್ತುತ ಆರ್ಥಿಕ ಅಶಿಸ್ತು ರಾಜದ ಹಣಕಾಸಿನ ಮೇಲೆ ಬಹಳ ದೊಡ್ಡ ಪರಿಣಾಮ ಬೀರಿ ರಾಜ್ಯವನ್ನು ಎರಡು ದಶಕಗಳಷ್ಟು ಹಿಂದೆ ಒಯ್ಯಲಿದೆ,’ ಎಂದು ಹೇಳಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 