ಪಂಚಾಯತ ಅಭಿವೃದ್ದಿ ಅಧಿಕಾರಿಗಳಿಗೆ ಕಾಯರ್ಾಗಾರ

ಬಾಗಲಕೋಟೆ 13: ಜಿಲ್ಲಾ ಪಂಚಾಯತ ವತಿಯಿಂದ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿಗಳಿಗೆ ರಸ್ತೆ ಮತ್ತು ಕಟ್ಟಡ ನಿಮರ್ಾಣ ಕಾಮಗಾರಿಗಳ ಕುರಿತು ನಗರದ ಬಸವೇಶ್ವರ ಇಂಜಿನೀಯರಿಂಗ್ ಕಾಲೇಜು ಸಭಾಭವನದಲ್ಲಿ ಇತ್ತೀಚೆಗೆ ಒಂದು ದಿನದ ತರಬೇತಿ ಕಾಯರ್ಾಗಾರ ಜರುಗಿತು.

ಕಾಯರ್ಾಗಾರವನ್ನು ಉದ್ಘಾಟಿಸಿ ಮಾತನಾಡಿದ ಜಿ.ಪಂ ಸಿಇಓ ಗಂಗೂಬಾಯಿ ಮಾನಕರ ಅವರು ಪಂಚಾಯತ ಅಭಿವೃದ್ದಿ ಅಧಿಕಾರಿಗಳಿಗೆ ತಾಂತ್ರಿಕ ಮಾಹಿತಿ ಅವಶ್ಯವಾಗಿದ್ದು, ಈ ನಿಟ್ಟಿನಲ್ಲಿ ಎರಡು ಹಂತದ ತರಬೇತಿ ಕಾಯರ್ಾಗಾರವನ್ನು ಹಮ್ಮಿಕೊಳ್ಳಲಾಗಿದ್ದು, ಮೊದಲನೇ ಹಂತದ ತರಬೇತಿಯಲ್ಲಿ ಹುನಗುಂದ, ಬಾಗಲಕೋಟ ಮತ್ತು ಬಾದಾಮಿ ತಾಲೂಕಿನ ಅಭಿವೃದ್ದಿ ಅಧಿಕಾರಿಗಳಿಗೆ ನೀಡಲಾಗುತ್ತಿದೆ. ಎರಡನೇ ಹಂತದಲ್ಲಿ ಜಮಖಂಡಿ, ಮುಧೋಳ ಹಾಗೂ ಬೀಳಗಿ ತಾಲೂಕುಗಳಲ್ಲಿ ಅಭಿವೃದ್ದಿ ಅಧಿಕಾರಿಗಳಿಗೆ ತರಬೇತಿ ನೀಡಲಾಗುವುದೆಂದರು.

ಪಂಚಾಯತ ಅಭಿವೃದ್ದಿಅಧಿಕಾರಿಗಳಿಗೆ ರಸ್ತೆ ಮತ್ತು ಕಟ್ಟಡ ಕಾಮಗಾರಿಗಳ ತಾಂತ್ರಿಕ ಮಾಹಿತಿ ಇಲ್ಲದಿರುವದನ್ನು ಮನಗಂಡು ಈ ಕಾಯರ್ಾಗಾರ ಏರ್ಪಡಿಸಲಾಗಿದೆ. ಅಭಿವೃದ್ದಿ ಅಧಿಕಾರಿಗಳು ಹೆಚ್ಚಿನ ಆಸಕ್ತಿಯಿಂದ ಇದರ ಸದುಪಯೋಗ ಪಡೆದುಕೊಂಡು ಅಭಿವೃದ್ದಿ ಕೆಲಸಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ. ಅಲ್ಲದೇ ರಾಜ್ಯದಲ್ಲಿಯೇ ಪ್ರಥಮವಾಗಿ ಈ ರೀತಿ ಕಾಯರ್ಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಎರಡನೇ ಹಂತದ ತರಬೇತಿ ಕಾಯರ್ಾಗಾರ ಜನವರಿ 18 ಮತ್ತು 19 ರಂದು ಹಮ್ಮಿಕೊಳ್ಳಲಾಗಿದೆ ಎಂದರು.