ಪಕ್ಷದ ತೀರ್ಮಾನಕ್ಕೂ ಬದ್ಧ: ಸಲೀಂ ಅಹ್ಮದ್
ಲೋಕದರ್ಶನವರದಿ
ಹಾವೇರಿ೦೭: ಈ ಬಾರಿ ನಡೆಯುವ ಲೋಕಸಭಾ ಚುನಾವಣೆಗೆ ಸಿದ್ಧನಿದ್ದೇನಿ, ಆದರೆ, ಎಐಸಿಸಿ ಕಾರ್ಯದಶರ್ಿಯಾಗಿ, ಪಕ್ಷದ ತಿಮರ್ಾನಕ್ಕೂ ಬದ್ಧ ಎನ್ನುವ ಮೂಲಕ ತಾವು ಹಾವೇರಿ - ಗದಗ ಲೋಕಸಭಾ ಚುನಾವಣೆಯ ಪ್ರಭಲ ಆಕಾಂಕ್ಷಿ ಎನ್ನುವ ವಿಚಾರವನ್ನು ಪರೋಕ್ಷವಾಗಿ ಸಲೀಂ ಅಹ್ಮದ್ ವ್ಯಕ್ತಪಡಿಸಿದರು.
ಬುಧವಾರ ನಗರದ ಪ್ರವಾಸಿ ಮಂದಿರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ನಾನು ಈಗಾಗಲೇ, ದೇಶದ್ಯಾಂತ ಪಕ್ಷ ಸಂಘಟನೆ ಕೆಲಸದಲ್ಲಿ ಸಕ್ರೀಯವಾಗಿರುವೆ. ಎಐಸಿಸಿ ಅಧ್ಯಕ್ಷರಾಗಿರುವ ರಾಹುಲ್ ಗಾಂಧಿ ಅವರು, ಈ ಬಾರಿ ಪ್ರಧಾನಿಯನ್ನಾಗಿ ಮಾಡುವ ನಿಟ್ಟಿನಲ್ಲಿ ಪಕ್ಷ ಸಂಘಟನೆ ಮಾಡಲಾಗುತ್ತಿದೆ. ಪಕ್ಷವು ನನ್ನನ್ನೂ ಅಭ್ಯಥರ್ಿಯಂದು ಘೋಷಣೆ ಮಾಡಿದರೆ, ನಾನು ಸಹ ಚುನಾವಣೆಗೆ ಸಿದ್ಧ ಎಂದು ತಿಳಿಸಿದರು.
ಉದ್ಯೋಗ ಸೃಷ್ಠಿಯಲ್ಲಿ ಕೇಂದ್ರದ ಸಾಧನೆ ಶೂನ್ಯ:
ಕೇಂದ್ರದ ಬಿಜೆಪಿ ಸರಕಾರದ ಅವಧಿಯಲ್ಲಿ ಉದ್ಯೋಗ ಸೃಷ್ಠಿಯಲ್ಲಿ ಶೂನ್ಯ ಸಾಧನೆ ಮಾಡಿದೆ, ಈ ಸರಕಾರದಿಂದ ಯುವಕರು ಭ್ರಮನಿರಶನಗೊಂಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದಶರ್ಿ ಸಲೀಂ ಅಹ್ಮದ್ ತಿಳಿಸಿದರು.
ಕೇಂದ್ರ ಸರಕಾರದ ಮೇಲೆ ದೇಶದ ಯುವಕರು ನಂಬಿಕೆ ಕಳೆದುಕೊಂಡಿದ್ದಾರೆ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಠಿ ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಮೇಲೆ 2 ಲಕ್ಷ ಉದ್ಯೋಗ ಸೃಷ್ಠಿ ಮಾಡಿಲ್ಲ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವಾಡುತ್ತಿದೆ.
ದೇಶದ ಜನರಿಗೆ ಸುಳ್ಳು ಆಶ್ವಾಸನೆ ನೀಡುತ್ತ ಅಧಿಕಾರ ನಡೆಸಿಕೊಂಡು ಬರುತ್ತಿದ್ದಾರೆ. ದೇಶದ ಕಪ್ಪು ಹಣ ವಾಪಾಸ್ಸು ತರುತ್ತೇವೆಂದರು. ಅದನ್ನು ಕೈ ಬಿಟ್ಟರು ಎಂದು ದೂರಿದರು.
ಎಐಸಿಸಿ ಅಧ್ಯಕ್ಷರಾದ ಬಳಿಕ ಮಾ. 9 ರಂದು ಪ್ರಥಮ ಬಾರಿಗೆ ಜಿಲ್ಲೆಗೆ ರಾಹುಲ್ ಗಾಂಧಿ ಆಗಮಿಸುತ್ತಿದ್ದಾರೆ. ಅವರ ಆಗಮನಕ್ಕೆ ಮೂರು ಜಿಲ್ಲೆಯ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕ ಭಜರ್ೆರಿ ತಯಾರಿ ನಡೆಸಲಾಗುತ್ತಿದೆ. ಯುವಕರು, ವಿದ್ಯಾಥರ್ಿಗಳು, ಮಹಿಳೆಯರು ಸೇರಿದಂತೆ ಲಕ್ಷಾಂತರ ಸಾರ್ವಜನಿಕರು ಸಮಾವೇಶಕ್ಕೆ ಆಗಮಿಸಲಿದ್ದಾರೆ.
ಈ ಸಮಾವೇಶ ಬಳಿಕ ಜಿಲ್ಲೆಯ ರಾಜಕೀಯದಲ್ಲಿ ಬಾರಿ ಪ್ರಮಾಣದ ಬದಲಾವಣೆಯಾಗಲಿದೆ. ಜಿಲ್ಲೆಯ ಜನರು ಬದಲಾವಣೆ ಬಯಸಿದ್ದಾರೆ. ಈ ಬಾರಿ ರಾಜ್ಯದಲ್ಲಿ 23 ಸ್ಥಾನಗಳನ್ನು ಕಾಂಗ್ರೆಸ್ ಪಡೆದುಕೊಳ್ಳಲಿದೆ ಎಂದು ತಿಳಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 