ಸಮಾಜ ಮತ್ತು ನಾಗರಿಕರ ರಕ್ಷಣೆಗೆ ಬದ್ಧ : ಕೆ.ಹೊನ್ನೂರವಲಿಸಾಬ್
Committed to protecting society and citizens: K. Honnuravalisab
ಕಂಪಿ 07: ಗೃಹರಕ್ಷಕ ದಳದ ಸಿಬ್ಬಂದಿಗಳು ಪೊಲೀಸ್ ಇಲಾಖೆಯ ನೆರಳಿನಂತೆ ಕರ್ತವ್ಯ ನಿರ್ವಹಿಸುತ್ತಿದ್ದು, ಸಮಾಜ ಮತ್ತು ನಾಗರಿಕರ ರಕ್ಷಣೆಗೆ ಬದ್ಧವಾಗಿದೆ ಎಂದು ಗೃಹ ರಕ್ಷಕದಳದ ಘಟಕಾಧಿಕಾರಿ ಕೆ.ಹೊನ್ನೂರವಲಿಸಾಬ್ ಹೇಳಿದರು. ಪಟ್ಟಣದ ಗೃಹ ರಕ್ಷಕದಳದ ಕಛೇರಿಯಲ್ಲಿ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ ಹಾಗೂ 63ನೇ ಗೃಹ ರಕ್ಷಕದಳದ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ಸ್ವಯಂಸೇವಕರಾಗಿ ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗೃಹರಕ್ಷಕರ ಕಾರ್ಯವೈಖರಿ ಶ್ಲಾಘನೀಯವಾಗಿದೆ. ಗೃಹರಕ್ಷಕ ದಳದ ದಿನಾಚರಣೆಯನ್ನು ಪ್ರತಿ ವರ್ಷ ಡಿಸೆಂಬರ್ 6ರಂದು ಆಚರಿಸಲಾಗುತ್ತಿದೆ. ಗೃಹರಕ್ಷಕರು ಮತ್ತು ನಾಗರಿಕ ರಕ್ಷಣಾ ಪಡೆಗಳ ಮಹತ್ವದ ಸೇವೆಯನ್ನು ಸ್ಮರಿಸುವ ದಿನವಾಗಿದೆ, ವಿಶೇಷವಾಗಿ ಕಾನೂನು ಸುವ್ಯವಸ್ಥೆ, ಜೀವ ರಕ್ಷಣೆ ಮತ್ತು ವಿಪತ್ತು ನಿರ್ವಹಣೆಯಲ್ಲಿ ಅವರ ಪಾತ್ರವನ್ನು ಗುರುತಿಸಲಾಗುತ್ತದೆ ಎಂದರು. ನಂತರ ಜಾಗೃತಿ ಜಾಥಾ ನಡೆಯಿತು ಎಂದರು. ಈ ಸಂದರ್ಭದಲ್ಲಿ ಪಿಎಲ್‌ಸಿ ಹೆಚ್.ಗಿರಿಧರ, ಸೆಕ್ಷನ್ ಲೀಡರ್ ಕೆ.ಜಗದೀಶ ಸೇರಿದಂತೆ ಸಿಬ್ಬಂದಿ ಇದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 