ನಿಗದಿತ ಅವಧಿಯೊಳಗೆ ಕೆಲಸ ಪೂರ್ಣಗೊಳಿಸಿ-ಪಟೇಲ್ ನಿಗದಿತ ಅವಧಿಯೊಳಗೆ ಕೆಲಸ ಪೂರ್ಣಗೊಳಿಸಿ-ಪಟೇಲ್

Complete the work within the stipulated time-Patel

ನಿಗದಿತ ಅವಧಿಯೊಳಗೆ ಕೆಲಸ ಪೂರ್ಣಗೊಳಿಸಿ-ಪಟೇಲ್  

ಕೊಪ್ಪಳ 07: ನಗರಸಭೆಯ ವತಿಯಿಂದ ನಗರದ ಸಾರ್ವಜನಿಕರ ಅನುಕೂಲಕ್ಕಾಗಿ ಕೈಗೆತ್ತಿಕೊಂಡಿರುವ ವಿವಿಧ ಕಾಮಗಾರಿ ಸೇರಿದಂತೆ ಕೆಲಸಗಳನ್ನು ನಿಗದಿತ ಅವಧಿ ಒಳಗೆ ಪೂರ್ಣಗೊಳಿಸುವಂತೆ ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು, ಅವರು ಶನಿವಾರ ಬೆಳಗ್ಗೆ ಇಲ್ಲಿನ ನಗರಸಭೆಯ ಸಭಾಭವನದಲ್ಲಿ ಜರುಗಿದ ಸದಸ್ಯರ ಸಾಮಾನ್ಯ ಸಭೆಯಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು,ವಾರ್ಡ್‌  ಸದಸ್ಯರುಗಳಿಂದ ಬಂದ ಪತ್ರಗಳ ಕುರಿತು ಸುಧೀರ್ಘವಾಗಿ ಚರ್ಚಿಸಿ ಸದಸ್ಯರು ಹೇಳಿದ ಕೆಲಸಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಗಮನಹರಿಸಿ ಅಗತ್ಯ ಕ್ರಮ ಕೈಗೊಂಡು ಅವರ ಕೆಲಸ ಕಾರ್ಯಗಳನ್ನು ಮಾಡಿ ಪೂರ್ಣಗೊಳಿಸಬೇಕು. 

 ನಗರದ ಜನತೆಗೆ ಶುದ್ಧ ಕುಡಿಯುವ ನೀರು ಪೂರೈಕೆ ಚರಂಡಿಗಳ ದುರಸ್ತಿ ವಿದ್ಯುತ್ ದೀಪ ಇತ್ಯಾದಿ ಅಗತ್ಯ ಸೌಲಭ್ಯಗಳ ಪೂರೈಕೆಯಲ್ಲಿ ಯಾವುದೇ ರೀತಿಯ ತಾರತಮ್ಯ ಮತ್ತು ನಿರ್ಲಕ್ಷ ಧೋರಣೆ, ಸಂಬಂಧಿಸಿದ ಅಧಿಕಾರಿಗಳು ಸಿಬ್ಬಂದಿಗಳು ಮಾಡಕೂಡದು ಮುಂದಿನ ತಿಂಗಳ ಇಲ್ಲಿನ ಐತಿಹಾಸಿಕ ಪ್ರಸಿದ್ಧ ಶ್ರೀ ಗವಿಮಠದ ಜಾತ್ರಾ ಮಹೋತ್ಸವ ಬರಲಿದೆ ಲಕ್ಷಾಂತರ ಸಂಖ್ಯೆಯಲ್ಲಿ ಬರುವ ಭಕ್ತಾದಿಗಳ ಅನುಕೂಲಕ್ಕೆ ತಕ್ಕಂತೆ ಎಲ್ಲಾ ವ್ಯವಸ್ಥೆ ನಗರಸಭೆ ವತಿಯಿಂದ ಕೈಗೊಳ್ಳಬೇಕು ಎಂದು ನಗರಸಭೆ ಅಧ್ಯಕ್ಷರು ಸೂಚಿಸಿದರು ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು ಹಿಂದಿನ ಸಭೆಯ ನಡವಳಿಕೆಗಳನ್ನು ಓದಿ ದೃಢೀಕರಿಸುವ ಬಗ್ಗೆ ಮತ್ತು ಅಗಸ್ಟ್‌ 20204 ರಿಂದ ಅಕ್ಟೋಬರ್ 2024ರ ವರೆಗಿನ ಖರ್ಚು ವೆಚ್ಚಗಳ ಬಗ್ಗೆ ಕೂಡ ಬಿಸಿ ಬಿಸಿ ಚರ್ಚೆ ನಡೆಯಿತು ಒಟ್ಟಾರೆ ಅಮ್ಜದ್ ಪಟೇಲ್ ರವರು ನಗರಸಭೆಯ ಅಧ್ಯಕ್ಷರಾದ ಬಳಿಕ ಜರುಗಿದ ಪ್ರಥಮ ಸಾಮಾನ್ಯ ಸಭೆ ಅರ್ಥ ಪೂರ್ಣ ಮತ್ತು ಯಶಸ್ವಿಯಾಗಿ ಜರುಗಿತು. 

ವೇದಿಕೆ ಮೇಲೆ ಕೊಪ್ಪಳ ನಗರಸಭೆಯ ಉಪಾಧ್ಯಕ್ಷರಾದ ಅಶ್ವಿನಿ ಗದಗಿನಮಠ ಸ್ಥಾಯಿ ಸಮಿತಿ ಅಧ್ಯಕ್ಷರಾದ ಅಕ್ಬರ್ ಪಾಷಾ ಪಲ್ಟನ್ ಪೌರಾಯುಕ್ತರಾದ ಗಣಪತಿ ಪಾಟೀಲ್ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರದ ಮಧುರಾ ಉಪಸ್ಥಿತರಿದ್ದು, ಸರ್ವ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು,ಇದೆ ವೇಳೆ ಇತ್ತೀಚಿಗಷ್ಟೇ ಕರ್ನಾಟಕ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ಪುರಸ್ಕೃತ ರಾದ ಹೋರಾಟಗಾರ ಅಲ್ಲಮ ಪ್ರಭು ಬೆಟ್ಟದೂರು ರವರಿಗೆ ಕೊಪ್ಪಳ ನಗರಸಭಾ ವತಿಯಿಂದ ಸನ್ಮಾನಿಸಲಾಯಿತು.