ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ: ಜಿಪಂ ಸಿಇಒ ರಾಹುಲ್ ಶಿಂಧೆ ಕೆ.ಆರ್.ಐ.ಡಿ.ಎಲ್. ಪ್ರಗತಿ ಪರೀಶೀಲನಾ ಸಭೆ
Complete the works quickly: ZP CEO Rahul Shinde KRIDL progress review meeting
ಬೆಳಗಾವಿ, ಜ.31 : ಕೆ.ಆರ್.ಐ.ಡಿ.ಎಲ್. (ಕರ್ನಾಟಕ ರೂರಲ್ ಇನಫ್ರಾಸ್ಟ್ರಕ್ಚರ್ ಡೆವಲಪಮೆಂಟ್ ಲಿಮಿಟೆಡ್) ವತಿಯಿಂದ ಪ್ರಗತಿಯಲ್ಲಿರುವ ಎಲ್ಲ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದರು.
ನಗರದ ಕೆ.ಆರ್.ಐ.ಡಿ.ಎಲ್. ವಲಯ ಕಚೇರಿಯ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾಮಗಾರಿಗಳ ಪ್ರಗತಿ ಪರೀಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ನಿಯಮಾನುಸಾರ ಪೂರ್ಣಗೊಳಿಸಿ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಬೇಕು ಎಂದು ಸೂಚಿಸಿದರು.ಅನುಮೋದನೆ ಆಗಿದ್ದರು ಕೂಡ ಇನ್ನೂ ಆರಂಭವಾಗದ ಕಾಮಗಾರಿಗಳಿಗೆ ಸಹಾಯಕ ಕಾರ್ಯಪಾಲಕ ಅಭಿಯಂತರರು ಮೊದಲ ಆದ್ಯತೆ ನೀಡಿ ಭೇಟಿ ನೀಡಬೇಕು. ಕಾಮಗಾರಿಗಳು ಆರಂಭವಾಗದಿರಲು ಇರುವ ಕಾರಣಗಳ ಬಗ್ಗೆ ತಿಳಿದುಕೊಂಡು, ಅವುಗಳನ್ನು ಇತ್ಯರ್ಥಪಡಿಸಿಕೊಂಡು ತ್ವರಿತವಾಗಿ ಕಾಮಗಾರಿ ಆರಂಭಿಸಬೇಕು ಎಂದು ನಿರ್ದೇಶನ ನೀಡಿದರು.
ಗುಣಮಟ್ಟದ ಕಾಮಗಾರಿ ಕೈಗೊಳ್ಳಿ:
ಕಾಮಗಾರಿಗಳ ಉದ್ಘಾಟನೆ ಸಂದರ್ಭದಲ್ಲಿ ಅಳವಡಿಸುವ ಶಿಲಾಫಲಕಗಳಲ್ಲಿ ಕಡ್ಡಾಯವಾಗಿ ನಿಯಮಾನುಸಾರ (ಪ್ರೋಟೋಕಾಲ್) ಸಂಬಂಧಪಟ್ಟವರ ಹೆಸರುಗಳನ್ನು ಬರೆಸಬೇಕು. ಸಾರ್ವಜನಿಕರಿಂದ ದೂರುಗಳು ಬಾರದಂತೆ ಸಮರ್ಕ ಹಾಗೂ ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.ಗ್ರಾಮ ವಿಕಾಸ ಯೋಜನೆ, ಮಲೆನಾಡು ಅಭಿವೃದ್ಧಿ ಯೋಜನೆ, ಬಯಲುಸೀಮೆ ಅಭಿವೃದ್ಧಿ ಯೋಜನೆ ಸೇರಿ ವಿವಿಧ ಯೋಜನೆಗಳಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ಕುರಿತು ಮಾಹಿತಿ ಪಡೆದು, ಪ್ರಗತಿ ಸಾಧಿಸಲು ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿಗಳಾದ ಬಸವರಾಜ ಅಡವಿಮಠ (ಅಭಿವೃದ್ಧಿ), ಕೆ.ಆರ್.ಐ.ಡಿ.ಎಲ್. ಅಧೀಕ್ಷಕ ಅಭಿಯಂತರ ಸಿದ್ಧಾರ್ಥ ಎಸ್., ಬೆಳಗಾವಿ ಕಾರ್ಯಪಾಲಕ ಅಭಿಯಂತರ ಎಸ್.ಬಿ. ಶೇಗುಣಸಿ, ಚಿಕ್ಕೋಡಿ ಕಾರ್ಯಪಾಲಕ ಅಭಿಯಂತರರಾದ ಆರ್.ಪಿ. ನಾರಾಯಣಕರ್ ಸೇರಿ ಎಲ್ಲ ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು ಹಾಗೂ ಇನ್ನಿತರ ಸಿಬ್ಬಂದಿ ಹಾಜರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 