ಸ್ವಾತಿ ಕೊಲೆ ಖಂಡಿಸಿ ಅಪರಾಧಿಗಳಿಗೆ ಕಠಿಣ ಶಿಕ್ಷೆಗೊಳಪಡಿಸಲು ಒತ್ತಾಯ
ರಾಣೇಬೆನ್ನೂರ 16: ನಗರದ ಆಸ್ಪತ್ರೆಯೊಂದರಲ್ಲಿ ಶುಷ್ರೂಕಿಯಾಗಿ ಕೆಲಸ ಮಾಡುತ್ತಿದ್ದ ರಟ್ಟಿಹಳ್ಳಿ ತಾಲೂಕು ಮಾಸೂರು ಗ್ರಾಮದ ಯುವತಿ ಸ್ವಾತಿ ರಮೇಶ್ ಬ್ಯಾಡಗಿ (22) ಹತ್ಯೆಗೈದ ಘಟನೆಯನ್ನು ಸಮಗ್ರ ತನಿಖೆ ನಡೆಸಿ, ಅಪರಾಧಿಗಳಿಗೆ ಕಠಿಣ ಶಿಕ್ಷೆಗೊಳಪಡಿಸುವಂತೆ ಒತ್ತಾಯಿಸಿ ಹಾಗೂ ವಿದ್ಯಾರ್ಥಿನಿಯರಿಗೆ ಮತ್ತು ಮಹಿಳೆಯರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಆಗ್ರಹಿಸಿ ಶನಿವಾರ ಸಂಜೆ ಶ್ರೀರಾಮ ನಗರದ ಬಾಲಕಿಯರ ವಸತಿ ನಿಲಯದಎದುರು ಹತ್ತಿರ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ತಾಲ್ಲೂಕು ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮೃತಯುವತಿ ಸ್ವಾತಿ ಬ್ಯಾಡಗಿ ಭಾವಚಿತ್ರಕ್ಕೆ ಮೇಣದ ಮೊಂಬತ್ತಿ ಬತ್ತಿ ಬೆಳಗಿ ಆಗ್ರಹಿಸಿದರು.ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಪಾಲ್ಗೊಂಡು ಮಾತನಾಡಿದ ಅವರು, ಸ್ವಾತಿ ಕೊಲೆ ಪ್ರಕರಣದ ಮೂವರು ಆರೋಪಗಳನ್ನು ಬಂಧಿಸಿರುವ ವರದಿಯಿದೆ, ಕೂಡಲೇ ನ್ಯಾಯಾಲಯವು ಸಮಗ್ರ ತನಿಖೆ ನಡೆಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಮೃತ ಯುವತಿಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.ಕೊಲೆ ಗಡುಕರಿಗೆ, ಅತ್ಯಾಚಾರಗಳಿಗೆ ಹಾಗೂ ಸಮಾಜ ಘಾತುಕರಿಗೆ ಜಾತಿ ಧರ್ಮ ಇರುವುದಿಲ್ಲ. ಇಂತಹ ದುಷ್ಟರನ್ನು ಮಟ್ಟ ಹಾಕಲು ಸರಕಾರ ಕಠಿಣ ಕಾನೂನು ಜಾರಿಗೆ ತರಬೇಕು.ಜಿಲ್ಲೆಯಲ್ಲಿ ವಿದ್ಯಾರ್ಥಿನಿಯರು ಹಾಗೂ ಮಹಿಳೆಯರಿಗೆ ಸೂಕ್ತ ರಕ್ಷಣೆ ಹಾಗೂ ಭದ್ರತೆ ಒದಗಿಸಬೇಕು. ದುರುಳರಿಂದ ಕೊಲೆಯಾಗಿರುವ ಸ್ವಾತಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಹಾಗೂ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ಹಾಗೂ ಭದ್ರತೆ ಒದಗಿಸಬೇಕು ಎಂದರು. ಸ್ವಾತಿ ಪ್ರಕರಣ ಅಮಾನವೀಯವಾಗಿ ಕ್ರೂರತನದಿಂದ ಕೊಲೆ, ಹತ್ಯೆಯನ್ನುಎಸ್‌ಎಫ್‌ಐ ತೀವ್ರವಾಗಿ ಖಂಡಿಸುತ್ತದೆ.ಇಂತಹ ಕೊಲೆಗಳನ್ನು ಮತೀಯ ಕನ್ನಡಕದ ಮೂಲಕ ನೋಡುವ, ರಾಜಕೀಯವಾಗಿ ಬಳಸಿಕೊಳ್ಳುವ ನೀಚತನ, ಷಡ್ಯಂತ್ರಕ್ಕೆ ಜನತೆಆಸ್ಪದ ಕೊಡಬಾರದು.ಒಂದಾಗಿ ನಿಂತು ಇಂತಹ ಸ್ಥಿತಿಯ ವಿರುದ್ದ ಧ್ವನಿ ಎತ್ತಬೇಕು.ರಾಜ್ಯ ಸರ್ಕಾರ ನರಹಂತಕರು ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು.ಸುಪ್ರೀಂ ಕೋರ್ಟ್ ನಿರ್ದೇಶನದಂತೆಎಲ್ಲಾ ಶಾಲಾ - ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು ಆದರೆ ಇದನ್ನು ರಾಜ್ಯ ಸರ್ಕಾರಜಾರಿ ಮಾಡಿಲ್ಲ ತಕ್ಷಣ ಇದನ್ನು ರಚನೆ ಮಾಡಬೇಕು. ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು. ಶಾಲಾ-ಕಾಲೇಜ್ ಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆಗಳನ್ನು ನಡೆಸಬೇಕು, ಮಹಿಳೆಯರು ರಕ್ಷಣೆ ಹಾಗೂ ಭದ್ರತೆಗಾಗಿ ಮಹಿಳಾ ಕಾನೂನುಗಳನ್ನು ಸಮರ್ಕವಾಗಿ ಜಾರಿ ಮಾಡಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಘೋಷಣೆ ಕೂಗಿದರು.ಎಸ್‌ಎಫ್‌ಐತಾಲ್ಲೂಕು ಅಧ್ಯಕ್ಷ ಗೌತಮ್ ಸಾವಕ್ಕನವರ, ಉಪಾಧ್ಯಕ್ಷ ಬಸವರಾಜ ಕೊಣಸಾಲಿ, ಮಹೇಶ್ ಮರೊಳ, ಸಹಕಾರ್ಯದರ್ಶಿ ಕೃಷ್ಣ ನಾಯ್ಕ, ಮುಖಂಡರಾದ ಧನುಷ್ ದೊಡ್ಮನಿ. ತೇಜಸ್‌ಎನ್ ಡಿ, ನೀಲಮ್ಮ ಕಡಕೋಳ, ಸುಮತಿ ಕರೆಯಣ್ಣನವರ, ರಾಧಿಕಾ ಹೊನ್ನಪ್ಪನವರ, ನಾಗರತ್ನ ಸಿ ಎಸ್, ಕಾವ್ಯರಾಠೋಡ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.