ಪಾರದರ್ಶಕ ತನಿಖೆ ಮಾಡಿ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹ
Conduct a transparent investigation and demand action against the culprits
ಇಂಡಿ 12: ಚಡಚಣ ತಾಲೂಕಿನ ನಿವರಗಿ ಗ್ರಾಮದ ಸರಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಹೆಡ್ಕುಕ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವರು ಇತ್ತೀಚೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಇಲಾಖೆಯಿಂದ ಸೂಕ್ತ ತನಿಖೆ ನಡೆಸಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಕುಟುಂಬಸ್ಥರಿಗೆ ನ್ಯಾಯ ಒದಗಿಸಬೇಕೆಂದು ರಾಷ್ಟೀಯ ಮಾನವ ಹಕ್ಕುಗಳ ತನಿಖಾ ಸಮೀತಿ (ರಿ) ಪದಾಧಿಕಾರಿಗಳು ಮಂಗಳವಾರ ಇಂಡಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಉಮೇಶ ಲಮಾಣಿ ಅವರಿಗೆ ಮನವಿ ಸಲ್ಲಿಸಿದರು.
ಸಮಿತಿಯ ಅಧ್ಯಕ್ಷ ಶಿವಾನಂದ ಕಾಮಗೊಂಡ ಮಾತನಾಡಿ, ಆತ್ಮಹತ್ಯೆ ಮಾಡಿಕೊಂಡ ಹೆಡ್ಕುಕ್ ಭಗವಾನ್ ಕಿಸನ್ಸಿಂಗ್ ಪರದೇಶಿ ಅವರು 27 ವರ್ಷಗಳಿಂದ ನಿವರಗಿ ಹೆಡ್ಕುಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ನಿಲಯದ ವಾರ್ಡನ್ ಮಲ್ಲಪ್ಪ ವಾಲೀಕಾರ ಅವರು ಹೆಡ್ಕುಕ್ಗೆ ಮಾನಸೀಕ ಕಿರುಕುಳ ಕೊಡುತ್ತಿದ್ದರು ಎಂದು ಮೃತನ ಪತ್ನಿ, ಮಕ್ಕಳು ಪೊಲೀಸ್ ದೂರು ದಾಖಲಿಸಿದ್ದು, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಹ ತನಿಖೆ ನಡೆಸಿ ತಪ್ಪಿತಸ್ಥ ವಾರ್ಡನ್ ವಿರುಧ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಸಮಿತಿಯ ಉಪಾಧ್ಯಕ್ಷ ಪ್ರಕಾಶ ಬಿರಾದಾರ, ಜಂಟಿ ಕಾರ್ಯದರ್ಶಿ ಶೈಲೇಶ ಬೀಳಗಿ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರತೀ ವಸತಿ ನಿಲಯಕ್ಕೆ ಭೇಟಿ ನೀಡಿ ವಸತಿ ನಿಲಯದಲ್ಲಿನ ವ್ಯವಸ್ಥೆ ಪರೀಶೀಲಿಸಬೇಕು. ಮಕ್ಕಳ ಹಾಗೂ ಅಲ್ಲಿನ ಸಿಬ್ಬಂದಿಗಳೊಂದಿಗೆ ಚರ್ಚೆ ನಡೆಸಬೇಕು. ವಸತಿ ನಿಲಯಗಳಲ್ಲಿನ ಸಮಸ್ಯೆ ಬಗೆಹರಿಸಬೇಕು ಎಂದರು. ಈ ಸಂದರ್ಭದಲ್ಲಿ ರಾಷ್ಟೀಯ ಮಾನವ ಹಕ್ಕುಗಳ ತನಿಖಾ ಸಮೀತಿಯ ಪದಾಧಿಕಾರಿಗಳಾದ ಪ್ರಸನ್ನಕುಮಾರ ನಾಡಗೌಡ, ಶ್ರೀಮಂತ ಬಿರಾದಾರ ಇದ್ದರು.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 