ದೌರ್ಜನ್ಯ ಪ್ರಕರಣಗಳ ಬಗ್ಗೆ ಸೂಕ್ತ ತನಿಖೆ ನಡೆಸಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸೂಚನೆ

Conduct proper investigation in cases of atrocities: District Collector K. Lakshmipriya notice

ದೌರ್ಜನ್ಯ ಪ್ರಕರಣಗಳ ಬಗ್ಗೆ ಸೂಕ್ತ ತನಿಖೆ ನಡೆಸಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸೂಚನೆ 

ಕಾರವಾರ 06: ಜಿಲ್ಲೆಯಲ್ಲಿ ಪ.ಜಾತಿ ಮತ್ತು ಪಂಗಡದವರ ಮೆಲೆ ನಡೆಯುವ ದೌರ್ಜನ್ಯ ಪ್ರಕರಣಗಳ ಕುರಿತಂತೆ ಸಮರ​‍್ಕ ರೀತಿಯಲ್ಲಿ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸೂಚನೆ ನೀಡಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ, ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಪ.ಜಾತಿ ಮತ್ತು ಪಂಗಡದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ ಕುರಿತಂತೆ ವಿವರವಾದ ಮಾಹಿತಿಯನ್ನು ಸಂಗ್ರಹಿಸಿ, ದೌರ್ಜನ್ಯಕ್ಕೆ ಒಳಗಾದವರಿಗೆ ಸೂಕ್ತ ನ್ಯಾಯ ಒದಗಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು ಪೊಲೀಸ್ ಇಲಾಖೆಯಲ್ಲಿ ದಾಖಲಾಗುವ ಪ್ರಕರಣಗಳ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾಲಮಿತಿಯೊಳಗೆ ಚಾರ್ಜ್‌ ಶೀಟ್ ಸಲ್ಲಿಸುವಂತೆ ತಿಳಿಸಿದರು.ಜಿಲ್ಲೆಯಲ್ಲಿ ಪೌರ ಕಾರ್ಮಿಕ ಹುದ್ದೆಗೆ ನೇಮಕವಾದ ಎಲ್ಲರನ್ನೂ ಪೌರ ಕಾರ್ಮಿಕ ಕೆಲಸಗಳಿಗೆ ಬಳಸಬೇಕು, ಅವರಲ್ಲಿ ಕೆಲವರನ್ನು ಪೌರ ಕಾರ್ಮಿಕ ಕೆಲಸಗಳಿಗೆ ಬದಲಾಗಿ ಇತರೇ ಬಳಸುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಈ ಬಗ್ಗೆ ಎಲ್ಲಾ ಸ್ಥಳಿಯ ಸಂಸ್ಥೆಗಳ ಅಧಿಕಾರಿಗಳು ಪರೀಶೀಲಿಸಿ, ಲಿಖಿತವಾಗಿ ವರದಿಯನ್ನು ನೀಡುವಂತೆ ಸೂಚಿಸಿದರು. 

ಕಾರವಾರ ಮೆಡಿಕಲ್ ಕಾಲೇಜಿನಲ್ಲಿ , ನಿವೃತ್ತರಾದ ನಿರ್ದೇಶಕರ ಅವಧಿಯಲ್ಲಿವೈದ್ಯಕೀಯ ವಿದ್ಯಾರ್ಥಿಗಳಿಗೆ ವಿತರಿಸಿರುವ ಲ್ಯಾಪ್‌ಟಾಪ್‌ಗಳ ಗುಣಮಟ್ಟದ ಬಗ್ಗೆ ದೂರು ಬಂದಿದ್ದು, ಈ ಬಗ್ಗೆ ಪರೀಶೀಲಿಸಿ, ಗುಣಮಟ್ಟದಲ್ಲಿ ಲೋಪವಿದ್ದಲ್ಲಿ ಈ ಲ್ಯಾಪ್‌ಟಾಪ್ ಸರಬರಾಜು ಮಾಡಿರುವ ಸಂಸ್ಥೆಯಿಂದ ಹೊಸ ಲ್ಯಾಪ್‌ಟಾಪ್ ವಿತರಣೆಗೆ ಕ್ರಮ ಕೈಗೊಳ್ಳಬೇಕು. ವೈದ್ಯಕೀಯ ಮತ್ತು ನಸಿಂರ್ಗ್ ವಿದ್ಯಾರ್ಥಿಗಳಿಗೆ ಕಾಲೇಜು ಆರಂಭದಲ್ಲಿಯೇ ಕಲಿಕಾ ಉಪಕರಣಗಳನ್ನು ನೀಡುವಂತೆ ಮತ್ತು ವಿದ್ಯಾರ್ಥಿ ವೇತನ ವಿತರಣೆಯಲ್ಲಿ ಸಮಸ್ಯೆಯಾಗದಂತೆ ಎಚ್ಚರವಹಿಸಬೇಕು ಎಂದರು. 

ಜಿಲ್ಲೆಯಲ್ಲಿನ ಎಸ್‌.ಸಿ. ಎಸ್‌.ಟಿ ಸ್ಮಶಾನ ಭೂಮಿಗಳು ಒತ್ತುವರಿಯಾಗದಂತೆ ಎಚ್ಚರವಹಿಸಬೇಕು ಅವುಗಳಿಗೆ ಕಾಂಪೌಂಡ್ ನಿರ್ಮಾಣ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮತ್ತು ಎಲ್ಲಾ ಇಲಾಖೆಗಳಲ್ಲಿ ಪ.ಜಾತಿ ಮತ್ತು ಪಂಗಡದ ಶ್ರೇಯೋಭಿವೃದ್ಧಿಗೆ ಮೀಸಲಿಟ್ಟಿರುವ ಅನುದಾನವನ್ನು ಸಮರ​‍್ಕ ರೀತಿಯಲ್ಲಿ ಬಳಕೆ ಮಾಡುವಂತೆ ಹಾಗೂ ಸಿದ್ದಿ ಜನಾಂಗದವರಿಗೆ ವಿತರಿಸಲಾಗುವ ಪೌಷ್ಠಿಕ ಆಹಾರವನ್ನು ಆಯಾ ತಿಂಗಳಿನಲ್ಲಿಯೇ ವಿತರಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.ಜಿಲ್ಲೆಯಲ್ಲಿ 2022 ರಿಂದ ಇದುವರೆಗೆ 122 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, 88 ಪ್ರಕರಣಗಳಲ್ಲಿ ಚಾರ್ಜ್‌ ಶೀಟ್‌ ಸಲ್ಲಿಕೆಯಾಗಿದ್ದು, 198 ಲಕ್ಷ ರೂ ಪರಿಹಾರ ಧನ ವಿತರಿಸಲಾಗಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್ ಮಾಹಿತಿ ನೀಡಿದರು. 

ಸಭೆಯಲ್ಲಿ ಸರ್ಕಾರಿ ಅಭಿಯೋಜಕಿ ಸುನಿತಾ ನಾಗೇಕರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸ್ಟೆಲ್ಲಾ ವರ್ಗಿಸ್, ಕಾರವಾರ ಮೆಡಿಕಲ್ ಕಾಲೇಜು ನಿರ್ದೇಶಕಿ ಹಾಗೂ ಡೀನ್ ಡಾ.ಪೂರ್ಣಿಮಾ, ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯದೀಪಕ , ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು