ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರಕರ್ತರಿಂದ ಅಭಿನಂದನಾ ಸಮಾರಂಭ
Congratulatory ceremony for the District In-charge Minister by journalists
ಬೆಳಗಾವಿ 25: ರಾಜ್ಯದ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಯಲ್ಲಿ ಸುಸಜ್ಜಿತವಾದ ಪತ್ರಿಕಾಭವನ ನಿರ್ಮಿಸಬೇಕು ಎಂಬುದು ಮಾಧ್ಯಮ ಪ್ರತಿನಿಧಿಗಳ ಬಹುದಿನಗಳ ಕನಸಾಗಿತ್ತು. ಈ ನಿಟ್ಟಿನಲ್ಲಿ ಸತತ ಪ್ರಯತ್ನಗಳು ನಡದೇ ಇದ್ದವು. ನಿವೇಶನ ಸಮಸ್ಯೆ, ಅನುದಾನ ಕೊರತೆ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಪತ್ರಿಕಾಭವನ ನಿರ್ಮಾಣಕ್ಕೆ ಕಾಲ ಕೂಡಿಬಂದಿರಲಿಲ್ಲ. ಎಲ್ಲ ಮಾಧ್ಯಮ ಪ್ರತಿನಿಧಿಗಳ ಒಕ್ಕೊರಲಿನ ಮನವಿಗೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು, ತಮ್ಮ ಲೋಕೋಪಯೋಗಿ ಇಲಾಖೆಯ ವತಿಯಿಂದ ಬೆಳಗಾವಿ ನಗರದಲ್ಲಿ 9.90 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತವಾದ "ಪತ್ರಿಕಾಭವನ" ನಿರ್ಮಾಣಕ್ಕೆ ಅನುಮೋದನೆ ನೀಡಿರುತ್ತಾರೆ. ಈ ಹಿನ್ನೆಲೆಯಲ್ಲಿ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರನ್ನು ಬೆಳಗಾವಿಯ ಸಮಸ್ತ ಮಾಧ್ಯಮ ಪತ್ರಿಕಾ ಬಳಗದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 